17ರ ಬಾಲಕಿ ಮೇಲೆ ಮೂವರು ದುರಳರಿಂದ ಅತ್ಯಾಚಾರ ಮನೆಗೆ ನುಗ್ಗಿ ಬಾಲಕಿ ಅಪ್ರಾಪ್ತೆ ಮೇಲೆರಗಿದ ಕಾಮುಕರು ಅತ್ಯಾಚಾರ ಆಘಾತದಿಂದ ಬಾಲಕಿ ನೇಣಿಗೆ ಶರಣು

ಹರ್ಯಾಣ(ಏ.03): ದ್ವಿತೀಯ ಪಿಯುಸಿ ಪರೀಕ್ಷೆಗೆ ಅಧ್ಯಯನ ಮಾಡುತ್ತಿದ್ದ 17ರ ಬಾಲಕಿ ಮೇಲೆ ಮೂವರು ಕಾಮುಕರು ಅತ್ಯಾಚಾರವೆಸಗಿದೆ ಘಟನೆ ಹರ್ಯಾಣದ ಚರ್ಕಿ ದಾದ್ರಿಯಲ್ಲಿ ನಡೆದಿದೆ. ಅತ್ಯಾಚಾರ ಆಘಾತದಿಂದ ಬಾಲಕಿ ನೇಣಿಗೆ ಶರಣಾಗಿದ್ದಾಳೆ. ಇದೀಗ ಈ ಘಟನೆ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದೆ.

12ನೇ ತರಗತಿಯ ಬೋರ್ಡ್ ಪರೀಕ್ಷೆಗೆ ತಯಾರಾಗುತ್ತಿದ್ದ ಬಾಲಕಿ, ಮನೆಯಲ್ಲಿ ಕುಳಿತು ಅಧ್ಯಯನದಲ್ಲಿ ನಿರತಳಾಗಿದ್ದಾಳೆ. ಪರಿಶಿಷ್ಟ ಜಾತಿಗೆ ಸೇರಿದ ಬಾಲಕಿ ಪೋಷಕರು ಕೂಲಿ ಕೆಲಸಕ್ಕಾಗಿ ತೆರಳಿದ್ದಾರೆ. ಈ ವೇಳೆ ಮನೆಯಲ್ಲಿ ಏಕಾಂಗಿಯಾಗಿದ್ದ ಬಾಲಕಿ ತನ್ನ ಪರೀಕ್ಷೆಗೆ ತಯಾರಿಯಲ್ಲಿ ತೊಡಗಿಸಿಕೊಂಡಿದ್ದಾಳೆ. ಈ ವೇಳೆ ಮನೆಗೆ ನುಗ್ಗಿದ ಮೂವರು ಯುವಕರು ಬಾಲಕಿಯನ್ನು ಅಪಹರಿಸಿದ್ದಾರೆ.

ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬಾಲಕಿಯನ್ನು ಕಟ್ಟಿ ಹಾಕಿ ಅತ್ಯಾಚಾರ ಎಸಗಿದ್ದಾರೆ. ಬಳಿಕ ಯುವಕರು ಪರಾರಿಯಾಗಿದ್ದಾರೆ. ದೈಹಿಕವಾಗಿ ಹಾಗೂ ಮಾನಸಿಕವಾಗಿ ಕುಗ್ಗಿ ಹೋದ ಬಾಲಕಿ ಮನೆಗೆ ಮರಳಿನೇರವಾಗಿ ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ.

ಸಾಧುವಿನ ರೂಪದಲ್ಲಿದ್ದ ರೇಪಿಸ್ಟ್‌, ಮದ್ಯ ಕುಡಿಸಿ ಅಪ್ರಾಪ್ತೆಯ ಅತ್ಯಾಚಾರ: ಗಣ್ಯರೇ ಈತನ ಭಕ್ತರು!

ಈ ಘಟನೆ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ತಕ್ಷಣವೇ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೂವರು ಆರೋಪಿಗಳ ಹೆಸರು ಉಲ್ಲೇಖಿಸಿ ದೂರು ನೀಡಲಾಗಿದೆ. ಇದರಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಅಪ್ರಾಪ್ತ ಬಾಲಕಿಗೆ ಅತ್ಯಾಚಾರ ನಡೆಸಿದ ಆರೋಪಿಗೆ ಕಠಿಣ ಶಿಕ್ಷೆ ತೀರ್ಪು
ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭವತಿಯಾಗಿ ಮಗುವಿಗೆ ಜನ್ಮ ನೀಡಲು ಕಾರಣನಾದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಮತ್ತು 30,000 ರು. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಹಾಗೂ ಎರಡನೇ ತ್ವರಿತಗತಿ ವಿಶೇಷ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

Bengaluru Crime: ಅಪ್ರಾಪ್ತೆಯ ಪ್ರಜ್ಞೆ ತಪ್ಪಿಸಿ ವೇಶ್ಯಾವಾಟಿಕೆ ದಂಧೆ: ಮಹಿಳೆಯರಿಂದಲೇ ಹೇಯ ಕೃತ್ಯ..!

ಅತ್ಯಾಚಾರ ಅಪರಾಧಿಗೆ 23 ವರ್ಷ ಜೈಲುಶಿಕ್ಷೆ
ಕಲಬುರಗಿ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 23 ವರ್ಷ ಶಿಕ್ಷೆ ಮತ್ತು .30 ಸಾವಿರ ದಂಡ ವಿಧಿಸಿ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ವಿಶೇಷ ಸೆಷಸ್ಸ್‌ ನ್ಯಾಯಾಲಯ ತೀರ್ಪು ನೀಡಿದೆ. ಸುನೀಲ ಮಡಿವಾಳಪ್ಪ ಮರಳಪ್ಪ ಶಿಕ್ಷೆಗೆ ಒಳಗಾದ ವ್ಯಕ್ತಿ. 2018ರ ಸಪ್ಟೆಂಬರ್‌ನಲ್ಲಿ ಈತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ. ನಂತರ ಬಾಲಕಿ ಗರ್ಭಿಣಿಯಾಗಿದ್ದು ವೈದ್ಯಕೀಯ ತಪಾಸಣೆಯಿಂದ ದೃಢಪಟ್ಟಿತು.ಪ್ರಕರಣ ಯಡ್ರಾಮಿ ಪೊಲೀಸ್‌ ಠಾಣೆಯಲ್ಲಿ ದಾಖಲಾಯಿತು. ಪೊಲೀಸರು ತನಿಖೆ ಮಾಡಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಸಲ್ಲಿಸಿದ್ದರು.

ಅಪ್ರಾಪ್ತೆ ಮೇಲೆ ವೃದ್ಧನಿಂದ ಅತ್ಯಾಚಾರ
ವೃದ್ಧನೊರ್ವ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಘಟನೆ ಕೊಲ್ಹಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಈ ಸಂಬಂಧ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅಸ್ವಸ್ಥಗೊಂಡ ಬಾಲಕಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಕುರಿತು ಕೊಲ್ಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪ್ರಾಪ್ತೆ ಮೇಲೆ ಅತ್ಯಾಚಾರ, ಆರೋಪಿ ಬಂಧನ
ಕುಕನೂರು ತಾಲೂಕಿನ ಲಕಮಾಪುರ ಗ್ರಾಮದಲ್ಲಿ 5 ವರ್ಷದ ಅಪ್ರಾಪ್ತೆ ಮೇಲೆ ಭಾನುವಾರ ಅತ್ಯಾಚಾರ ನಡೆದಿದ್ದು, ಆರೋಪಿ ಬಸವರಾಜ ಮುದ್ಲಾಪೂರ(22) ಎಂಬಾತನನ್ನು ಬಂಧಿಸಿದ್ದು, ಕುಕನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ದೂರು ದಾಖಲು
ತಾಲೂಕಿನ ರಾಮತ್ನಾಳ ಗ್ರಾಮದಲ್ಲಿ ವಿವಾಹಿತ ಮಹಿಳೆಯೊಬ್ಬರ ಮೇಲೆ ಐದಾರು ಜನ ಸಾಮೂಹಿಕವಾಗಿ ಅತ್ಯಾಚಾರವೆಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಮಹಿಳೆಯ ಗಂಡ ಊರಿನಲ್ಲಿ ನಾಟಕ ನೋಡಲು ತೆರಳಿದ್ದ ಸಂದರ್ಭದಲ್ಲಿ ಈ ಪೈಶಾಚಿಕ ಕೃತ್ಯ ಜರುಗಿದೆ..