ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ. 

ಬೆಂಗಳೂರು(ಮೇ.27): ಪಿಜಿಯಲ್ಲಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು(ಶನಿವಾರ) ನಡೆದಿದೆ. ಬೀದರ್ ಮೂಲದ ಅಭಿಷೇಕ್(19) ಎಂಬಾತನೇ ಮೃತ ದುರ್ದೈವಿಯಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಜಯನಗರದ ಮಾರೇನಹಳ್ಳಿಯ ಪಿಜಿಯಲ್ಲಿದ್ದ ತನ್ನ ರೂಮಿನಲ್ಲಿ ಪ್ಯಾನಿಗೆ ನೇಣುಬಿಗಿದುಕೊಂಡು ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಏಳು ದಿನಗಳ ಹಿಂದೆ ಕಾಣೆಯಾಗಿದ್ದ ಕೃಷಿಕ; ಅರಣ್ಯಪ್ರದೇಶದಲ್ಲಿ ಮೃತದೇಹ ಪತ್ತೆ!

ಮೃತ ಅಭಿಷೇಕ್ ವಿದ್ಯಾಭ್ಯಾಸದ ಸಲುವಾಗಿ ಪಿಜಿಯಲ್ಲಿ ತಂಗಿದ್ದನಂತೆ. ಅಭಿಷೇಕ್ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆಯಿಂದಷ್ಟೇ ಅಭಿಷೇಕ್ ಸಾವಿಗೆ ಕಾರಣ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.