ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ರು ಹೆಂಡತಿ ಶೋಕಿಯಲ್ಲಿದ್ದಳು. ಇದರಿಂದ ಮನನೊಂದ ಗುಲ್ಜಾರ್ ಹುಸೈನ್ ಚೌಧರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಂಡ ಹೆಂಡತಿ ನಡುವೆ ಸಾಕಷ್ಟು ಬಾರಿ ಗಲಾಟೆ ನಡೆದಿದ್ದವು, ಇದರಿಂದ  ಮನನೊಂದು ಗುಲ್ಜಾರ್ ಹುಸೈನ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. 

ನೆಲಮಂಗಲ(ಜು.16): ಹೆಂಡತಿಯ ಕಾಟ ತಾಳಲಾರದೆ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಗ್ರಾಮದಲ್ಲಿ ಇಂದು(ಮಂಗಳವಾರ) ನಡೆದಿದೆ. ಗುಲ್ಜಾರ್ ಹುಸೈನ್ ಚೌಧರಿ(20) ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾನೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೃತ ಗುಲ್ಜಾರ್ ಹುಸೈನ್ ಚೌಧರಿ ಲಾರಿ ಚಾಲಕನಾಗಿದ್ದನು. ಅಸ್ಸಾಂ ಮೂಲದ ಲಾರಿ ಚಾಲಕ ಗುಲ್ಜಾರ್ ಮದುವೆ ನಂತರ ತೊಣಚಿನಕುಪ್ಪೆ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಹೆಂಡತಿಯ ಮೇಕಪ್ ಆಸೆ ಹಾಗೂ ಅತಿಯಾದ ಫೋನ್ ಬಳಕೆಯಿಂದ ರೋಸಿ ಹೋಗಿದ್ದನು ಎಂದು ಹೇಳಲಾಗುತ್ತಿದೆ.

ಸಾಲಬಾಧೆ ತಾಳದೇ ಬೆಳಗಾವಿಯಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆ!

ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ರು ಹೆಂಡತಿ ಶೋಕಿಯಲ್ಲಿದ್ದಳು. ಇದರಿಂದ ಮನನೊಂದ ಗುಲ್ಜಾರ್ ಹುಸೈನ್ ಚೌಧರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಂಡ ಹೆಂಡತಿ ನಡುವೆ ಸಾಕಷ್ಟು ಬಾರಿ ಗಲಾಟೆ ನಡೆದಿದ್ದವು, ಇದರಿಂದ ಮನನೊಂದು ಗುಲ್ಜಾರ್ ಹುಸೈನ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.