Asianet Suvarna News Asianet Suvarna News

14ನೇ ಮಹಡಿಯಿಂದ ಹಾರಿ ಯುವಕ ಆತ್ಮಹತ್ಯೆ: ಪ್ರೇಯಸಿ ಮಾತು ಬಿಟ್ಟಿದ್ದೇ ಕಾರಣ?

*   ನಿರ್ಮಾಣ ಹಂತದ ಕಟ್ಟಡಗಳಲ್ಲಿ ಕಾರ್ಪೆಂಟರ್‌ ಕೆಲಸ ಮಾಡಿಕೊಂಡಿದ್ದ ಹೃತಿಕ್
*   ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ
*   ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು 
 

21 Year old Boy Committed Suicide in Bengaluru grg
Author
Bengaluru, First Published Sep 19, 2021, 7:50 AM IST
  • Facebook
  • Twitter
  • Whatsapp

ಬೆಂಗಳೂರು(ಸೆ.19):  ಕಟ್ಟಡವೊಂದರ ಹದಿನಾಲ್ಕನೇ ಮಹಡಿಯಿಂದ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಹೃತಿಕ್ ಈಶ್ವರ್(21) ಆತ್ಮಹತ್ಯೆ ಮಾಡಿಕೊಂಡ ಯುವಕ.

ಹೃತಿಕ್ ಮೂಲತಃ ಬಿಹಾರದವನಾಗಿದ್ದು, ನಗರದಲ್ಲಿ ನೆಲೆಸಿದ್ದ. ನಿರ್ಮಾಣ ಹಂತದ ಕಟ್ಟಡಗಳಲ್ಲಿ ಕಾರ್ಪೆಂಟರ್‌ ಕೆಲಸ ಮಾಡುತ್ತಿದ್ದ. ಹೃತಿಕ್ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಇತ್ತೀಚಿಗೆ ಯುವತಿ ಹೃತಿಕ್ನೊಂದಿಗೆ ಮಾತನಾಡುವುದನ್ನು ಬಿಟ್ಟಿದ್ದಳು. ಇದರಿಂದ ಯುವಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ತಿಳಿದು ಬಂದಿದೆ.

ಉಯಿಲಮುಡಿ ಕಡಲ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತೆ

ಮಾನ್ಯತಾ ಟೆಕ್ಪಾರ್ಕ್ ಬಳಿ ಬಹುಮಹಡಿ ಕಟ್ಟಡ ನಿರ್ಮಾಣವಾಗುತ್ತಿತ್ತು. ಅದೇ ಕಟ್ಟಡದ 3ನೇ ಮಹಡಿಯಲ್ಲಿ ಹೃತಿಕ್‌ಗೂ ಇತರರು ಕೆಲಸ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ ವಿಶ್ರಾಂತಿ ಪಡೆಯುವುದಾಗಿ ಹೇಳಿ ಹೃತಿಕ್ 14ನೇ ಮಹಡಿಗೆ ಹೋಗಿದ್ದ. ಈ ವೇಳೆ ಕಟ್ಟಡದಿಂದ ಜಿಗಿದು ಮೃತಪಟ್ಟಿದ್ದಾನೆ. ಜೋರು ಶಬ್ಧ ಕೇಳಿ ನೆಲ ಮಹಡಿಯಲ್ಲಿ ನೋಡಿದಾಗ ಹೃತಿಕ್‌ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈ ಸಂಬಂಧ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ ಎಂದು ಸಂಪಿಗೆಹಳ್ಳಿ ಠಾಣೆ ಪೊಲೀಸರು ತಿಳಿಸಿದರು.

Follow Us:
Download App:
  • android
  • ios