ಸೂರ್ಯ ಕಳೆದ ಕೆಲವು ದಿನಗಳಿಂದ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ. ನನ್ನ ಮಗಳ ಸಾವಿಗೆ ಸೂರ್ಯನೇ ಕಾರಣ ಎಂದು ಆರೋಪಿಸಿದ್ದಾರೆ. ಸೂರ್ಯ ಮತ್ತು ಆತನ ಕುಟುಂಸ್ಥರನ್ನು ಬಂಧಿಸಿ ನಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಮೃತ ದರ್ಶಿನಿ ಪೋಷಕರು ಒತ್ತಾಯಿಸಿದ್ದಾರೆ. 

ಮಂಡ್ಯ(ಆ.12): ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದಲ್ಲಿ ನಡೆದಿದೆ. ಮೈಸೂರು ನಿವಾಸಿ ದರ್ಶಿನಿ (21) ಮೃತ ದುರ್ದೈವಿ. ಒಂದೂವರೆ ವರ್ಷದ ಹಿಂದೆ ಬೆಳಗೊಳ ಗ್ರಾಮದ ಸೂರ್ಯ ಎಂಬುವವರ ಜೊತೆ ವಿವಾಹವಾಗಿತ್ತು. ದರ್ಶಿನಿ ಮತ್ತು ಸೂರ್ಯ ಪ್ರೀತಿಸಿ ಮನೆಯವರ ವಿರೋಧದ ನಡುವೆಯೂ ವಿವಾಹವಾಗಿದ್ದರು.

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಆಕೆಯನ್ನು ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲಿಸಿರುವುದಾಗಿ ದರ್ಶಿನಿ ಪತಿ ಸೂರ್ಯ ದರ್ಶಿನಿ ಕುಟುಂಬಸ್ಥರಿಗೆ ತಿಳಿಸಿದ್ದಾನೆ. ಅಷ್ಟರಲ್ಲಿ ಮಗಳು ದರ್ಶಿನಿ ಸಾವನ್ನಪಿದ್ದಾಳೆ.

MANDYA: 'ಜೋಕೆ ನಾನು ಬಳ್ಳಿಯ ಮಿಂಚು..' ಎಂದು ರೀಲ್ಸ್‌ ಮಾಡ್ತಿದ್ದ ಪತ್ನಿಯ ಕೊಂದು ನದಿಗೆಸದ ಪತಿ!

ಸೂರ್ಯ ಕಳೆದ ಕೆಲವು ದಿನಗಳಿಂದ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ. ನನ್ನ ಮಗಳ ಸಾವಿಗೆ ಸೂರ್ಯನೇ ಕಾರಣ ಎಂದು ಆರೋಪಿಸಿದ್ದಾರೆ. ಸೂರ್ಯ ಮತ್ತು ಆತನ ಕುಟುಂಸ್ಥರನ್ನು ಬಂಧಿಸಿ ನಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಮೃತ ದರ್ಶಿನಿ ಪೋಷಕರು ಒತ್ತಾಯಿಸಿದ್ದಾರೆ. ಕೆಆರ್‌ಎಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.