ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ನಿವಾಸಿ ಎಚ್‌.ಎನ್‌.ಪಾವನ ಆತ್ಮಹತ್ಯೆ ಮಾಡಿಕೊಂಡವರು. ಸೋಮವಾರ ಬೆಳಗ್ಗೆ ಸುಮಾರು 11 ಗಂಟೆಗೆ ಜ್ಞಾನಭಾರತಿ ಕ್ಯಾಂಪಸ್‌ನ ರಮಾಬಾಯಿ ಅಂಬೇಡ್ಕರ್‌ ಮಹಿಳಾ ವಸತಿ ನಿಲಯದ ಕೊಠಡಿಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು(ಫೆ.04): ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಡೆತ್‌ನೋಟ್‌ ಬರೆದಿಟ್ಟು ಹಾಸ್ಟೆಲ್‌ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜ್ಞಾನಭಾರತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ನಿವಾಸಿ ಎಚ್‌.ಎನ್‌.ಪಾವನ (21) ಆತ್ಮಹತ್ಯೆ ಮಾಡಿಕೊಂಡವರು. ಸೋಮವಾರ ಬೆಳಗ್ಗೆ ಸುಮಾರು 11 ಗಂಟೆಗೆ ಜ್ಞಾನಭಾರತಿ ಕ್ಯಾಂಪಸ್‌ನ ರಮಾಬಾಯಿ ಅಂಬೇಡ್ಕರ್‌ ಮಹಿಳಾ ವಸತಿ ನಿಲಯದ ಕೊಠಡಿಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಟ್ಲಾಯ್ಲೆಟ್ ಸೀಟು ನೆಕ್ಕುವಂತೆ ಒತ್ತಾಯಕ್ಕೆ ವಿದ್ಯಾರ್ಥಿ ಸ್ವಹ ತ್ಯೆ, ಭಯಾನಕ ಸತ್ಯ ಬಿಚ್ಚಿಟ್ಟ ಬಾಲಕನ ತಾಯಿ!

ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಪಾವನ ಅವರು ಎಂ.ಎ. 2ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಜ್ಞಾನಭಾರತಿ ಕ್ಯಾಂಪಸ್‌ನ ರಮಾಬಾಯಿ ಅಂಬೇಡ್ಕರ್‌ ಮಹಿಳಾ ವಸತಿ ನಿಲಯದಲ್ಲಿ ವಾಸವಿದ್ದರು. ಬೆಳಗ್ಗೆ ವಿಶ್ವವಿದ್ಯಾಲಯದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಪಾವನ, ಅರ್ಧಕ್ಕೆ ಕಾರ್ಯಕ್ರಮ ಬಿಟ್ಟು ವಸತಿ ನಿಲಯಕ್ಕೆ ವಾಪಾಸ್‌ ಬಂದು ವೇಲ್‌ನಿಂದ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಸತಿ ನಿಲಯದ ವಿದ್ಯಾರ್ಥಿನಿಯರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ವಿಧಿವಿಜ್ಞಾನ ತಜ್ಞರ ತಂಡ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದೆ. ಬಳಿಕ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾಲ ಪಡೆದು ಕಂತು ಕಟ್ಟದೇ ವಂಚಿಸಿದ ಗೆಳೆಯ, ಸ್ನೇಹಿತನೆಂದು ತನ್ನ ಹೆಸರಲ್ಲಿ ಲೋನ್ ಕೊಡಿಸಿದ ತಪ್ಪಿಗೆ ವ್ಯಕ್ತಿ ಸ್ವಹ ತ್ಯೆ!

ನಂಬಿದ ಗೆಳೆಯನಿಂದ ಮೋಸ: ಡೆತ್‌ನೋಟ್‌

ಘಟನಾ ಸ್ಥಳದಲ್ಲಿ ಆತ್ಮಹತ್ಯೆಗೂ ಮುನ್ನ ಪಾವನ ಬರೆದಿರುವ ಡೆತ್‌ ನೋಟ್‌ ಪತ್ತೆಯಾಗಿದೆ. ಅದರಲ್ಲಿ ನಾನು ಗೆಳೆಯನೊಬ್ಬನನ್ನು ನಂಬಿದ್ದೆ. ಆತನಿಂದ ಮೋಸವಾಗಿದೆ. ಅಪ್ಪ-ಅಮ್ಮ ಕ್ಷಮಿಸಿ, ಐ ಲವ್‌ ಯೂ ಎಂದು ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಆ ಡೆತ್‌ ನೋಟ್‌ ವಶಕ್ಕೆ ಪಡೆದಿರುವ ಪೊಲೀಸರು ಪರಿಶೀಲಿಸುತ್ತಿದ್ದಾರೆ.