ಮಂಡ್ಯ: ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ

ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ರಾಮಚಂದ್ರು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಿಲೆಟಿನ್ ಸ್ಫೋಟಕ್ಕೆ ಯುವಕನ ಹೊಟ್ಟೆಯ ಭಾಗ ಛಿದ್ರ ಛಿದ್ರವಾಗಿದೆ. ಸ್ಫೋಟದ ‌ತೀವ್ರತೆಗೆ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. 

21 Years Old Young Man Committed Self Death at Nagamangala in Mandya grg

ಮಂಡ್ಯ(ಡಿ.29):  ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನಾಗಮಂಗಲದ ಗ್ರಾಮವೊಂದರಲ್ಲಿ‌ ನಿನ್ನೆ(ಶನಿವಾರ) ನಡೆದಿದೆ. ರಾಮಚಂದ್ರು (21) ಎಂಬಾತನೇ ಆತ್ಮಹತ್ಯೆಗೆ ಶರಣಾದ ಯುವಕ.

ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ರಾಮಚಂದ್ರು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಿಲೆಟಿನ್ ಸ್ಫೋಟಕ್ಕೆ ಯುವಕನ ಹೊಟ್ಟೆಯ ಭಾಗ ಛಿದ್ರ ಛಿದ್ರವಾಗಿದೆ. ಸ್ಫೋಟದ ‌ತೀವ್ರತೆಗೆ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. 
ಒಂದು ವರ್ಷದ ಹಿಂದೆ ಅಪ್ರಾಪ್ತೆ ಕರೆದೊಯ್ದ ಹಿನ್ನೆಲೆಯಲ್ಲಿ ರಾಮಚಂದ್ರು ವಿರುದ್ಧ ಫೋಕ್ಸೋ ಕೇಸ್ ದಾಖಲಾಗಿತ್ತು.  ಫೋಕ್ಸೋ ಕೇಸ್‌ನಲ್ಲಿ 6 ತಿಂಗಳು ಜೈಲುವಾಸ ಅನುಭವಿಸಿದ್ದ. ಬಳಿಕ 2 ಕುಟುಂಬಗಳ ರಾಜಿ ಸಂಧಾನ ಬಳಿಕ ಕೇಸ್ ವಾಪಾಸ್ ಪಡೆಯಲಾಗಿತ್ತು. ನಂತರ ಅಪ್ರಾಪ್ತ ಪ್ರಿಯತಮೆ ರಾಮಚಂದ್ರನ ಸಂಪರ್ಕಕ್ಕೆ ಸಿಕ್ಕಿರಲಿಲ್ಲ.  

ಆನ್‌ಲೈನ್ ಗೇಮ್‌ ಹುಚ್ಚು, ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು

ಹೀಗಾಗಿ ಮನನೊಂದ ರಾಮಚಂದ್ರ ನಿನ್ನೆ ಆಕೆಯ ಮುನೆಯ ಮುಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಲ್ಲುಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಪೋಟಿಸಿಕೊಂಡು ಸೂಸೈಡ್‌ ಮಾಡಿಕೊಂಡಿದ್ದಾನೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

Latest Videos
Follow Us:
Download App:
  • android
  • ios