ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಸ್ವಾಮಿಯನ್ನ ತಡೆದು ಕಲ್ಲಿನಿಂದ ಜಜ್ಜಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಸಾಗರ್, ಪ್ರತಾಪ್, ಮಂಜು ಎಂಬುವರು ಸ್ವಾಮಿಯನ್ನ ಕೊಲೆ ಮಾಡಿದ್ದಾರೆ ಎಂಬ ಆರೋಪ  

ಮೈಸೂರು(ಜೂ.16): ಮೂವರು ದುಷ್ಕರ್ಮಿಗಳ ತಂಡವೊಂದು ಯುವಕನನೊಬ್ಬನ್ನ ಬರ್ಬರವಾಗಿ ಕೊಲೆ ಮಾಡಿದ ಘಟನೆ ಮೈಸೂರು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ಇಂದು(ಶುಕ್ರವಾರ) ನಡೆದಿದೆ. ಹೇಮಂತ್ ಅಲಿಯಾಸ್ ಸ್ವಾಮಿ(23) ಕೊಲೆಯಾದ ದುರ್ದೈವಿಯಾಗಿದ್ದಾನೆ. 

Add Asianetnews Kannada as a Preferred SourcegooglePreferred

ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಸ್ವಾಮಿಯನ್ನ ತಡೆದು ಕಲ್ಲಿನಿಂದ ಜಜ್ಜಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಸಾಗರ್, ಪ್ರತಾಪ್, ಮಂಜು ಎಂಬುವರು ಸ್ವಾಮಿಯನ್ನ ಕೊಲೆ ಮಾಡಿದ್ದಾರೆ ಅಂತ ಆರೋಪಿಸಲಾಗಿದೆ.

ಕಲಬುರಗಿ: ಅಕ್ರಮ ಮರಳು ಸಾಗಾಟಕ್ಕೆ ಕಾನ್‌ಸ್ಟೇಬಲ್‌ ಬಲಿ, ಕೊಲೆಯೋ, ಆಕಸ್ಮಿಕವೋ?

ಸಾಗರ್ ಸಹೋದರಿಯನ್ನು ಸ್ವಾಮಿ ಪ್ರೀತಿಸುತ್ತಿದ್ದನಂತೆ. ಇದೇ ವಿಚಾರವಾಗಿ ಸಾಗರ್ ಹಾಗೂ ಸ್ವಾಮಿ‌ ನಡುವೆ ವೈಷಮ್ಯ ಇತ್ತು. ಇದೇ ವಿಚಾರಕ್ಕೆ ಸ್ನೇಹಿತರ ಜೊತೆ ಸೇರಿ ಸ್ವಾಮಿಯನ್ನ ಕೊಲೆ ಮಾಡಲಾಗಿದೆ ಅಂತ ಆರೋಪಿಸಲಾಗಿದೆ. 
ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ವಿಜಯನಗರ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.