Asianet Suvarna News Asianet Suvarna News

ರಾಮನಗರ: ಪ್ರೀತಿಗೆ ಪೋಷಕರ ವಿರೋಧ, ಯುವಕ ನೇಣಿಗೆ ಶರಣು, ಚಾಕು ಇರಿದುಕೊಂಡ ಯುವತಿ

ಕೆಲ ವರ್ಷಗಳಿಂದ ಯಶವಂತ್ ಮತ್ತು ಮೋನಿಕಾ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ಪೋಷಕರಿಗೆ ಗೊತ್ತಾದಾಗ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಯುವಕನ ಮನೆಯಲ್ಲಿ ಮಾತಿನ ಚಕಮಕಿ ನಡೆದಿದೆ. ಇದರಿಂದ ಮನನೊಂದ ಯಶವಂತ್ ಮನೆಯಲ್ಲಿಯೇ ತನ್ನ ಕೊಠಡಿಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
 

24 years old young man committed self death in ramanagara grg
Author
First Published Aug 15, 2024, 8:44 AM IST | Last Updated Aug 15, 2024, 8:44 AM IST

ರಾಮನಗರ(ಆ.15): ಪ್ರೀತಿಗೆ ಪೋಷಕರಿಂದ ವಿರೋಧ ವ್ಯಕ್ತವಾದ ಕಾರಣ ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡರೆ, ಯುವತಿ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಕಾಯಿಸೊಪ್ಪಿನ ಬೀದಿಯಲ್ಲಿ ಬುಧವಾರ ನಡೆದಿದೆ.

‌‌ರಾಜಣ್ಣ ಪುತ್ರ ಯಶವಂತ್ (24) ಮೃತ ಯುವಕ. ಈತ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದನು. ಅದೇ ಬೀದಿಯ ಯುವತಿ ಮೋನಿಕಾ ಚಾಕು ಇರಿದುಕೊಂಡಿದ್ದು, ಗಂಭೀರವಾಗಿ ಗಾಯಗೊಂಡಿರುವ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Breaking ಶಿವಮೊಗ್ಗದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಕೆಲ ವರ್ಷಗಳಿಂದ ಯಶವಂತ್ ಮತ್ತು ಮೋನಿಕಾ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ಪೋಷಕರಿಗೆ ಗೊತ್ತಾದಾಗ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಯುವಕನ ಮನೆಯಲ್ಲಿ ಮಾತಿನ ಚಕಮಕಿ ನಡೆದಿದೆ. ಇದರಿಂದ ಮನನೊಂದ ಯಶವಂತ್ ಮನೆಯಲ್ಲಿಯೇ ತನ್ನ ಕೊಠಡಿಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾನೆ.

ಬಾಗಿಲು ಮುರಿದು ಆತನನ್ನು ಕೆಳಕ್ಕಿಳಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟೊತ್ತಿಗಾಗಲೇ ಕೊನೆಯುಸಿರೆಳೆದಿದ್ದನು. ಶವವನ್ನು ಜಿಲ್ಲಾಸ್ಪತ್ರೆ ಶವಗಾರಕ್ಕೆ ಸಾಗಿಸಲಾಗಿದೆ.

ಆತ್ಮಹತ್ಯೆ ವಿಷಯ ತಿಳಿಯುತ್ತಿದ್ದಂತೆ ಮನೆಯಲ್ಲಿದ್ದ ಮೋನಿಕಾ ಚಾಕುವಿನಿಂದ ಹೊಟ್ಟೆಗೆ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಕುಟುಂಬದವರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Latest Videos
Follow Us:
Download App:
  • android
  • ios