ರಾಮಮೂರ್ತಿನಗರ, ಮಾರತ್ತಹಳ್ಳಿ, ಬೆಳ್ಳಂದೂರು, ಬಂಡೇಪಾಳ್ಯ, ವರ್ತೂರು, ಹೆಬ್ಬಗೋಡಿ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಬುಧವಾರ ತಡರಾತ್ರಿ ವಿಶೇಷ ಕಾರ್ಯಾಚರಣೆ ಕೈಗೊಂಡು ಅಕ್ರಮವಾಗಿ ನೆಲೆಸಿದ್ದ 25 ಮಂದಿ ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಬಾಂಗ್ಲಾ ಪ್ರಜೆಗಳು ತಂಗಿದ್ದ ಶೆಡ್‌ಗಳಲ್ಲಿ ಅವರ ಹಿನ್ನೆಲೆ ತಿಳಿಸುವ ಪ್ರಮುಖ ದಾಖಲೆಗಳು ಮತ್ತು ಮೊಬೈಲ್‌ ಫೋನ್‌ಗಳನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರು(ಮೇ.31): ನಗರದ ವಿವಿಧೆಡೆ ದಾಳಿ ಮಾಡಿರುವ ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಅಕ್ರಮವಾಗಿ ನೆಲೆಸಿದ್ದ 25 ಮಂದಿ ಬಾಂಗ್ಲಾ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ.

Add Asianetnews Kannada as a Preferred SourcegooglePreferred

ರಾಮಮೂರ್ತಿನಗರ, ಮಾರತ್ತಹಳ್ಳಿ, ಬೆಳ್ಳಂದೂರು, ಬಂಡೇಪಾಳ್ಯ, ವರ್ತೂರು, ಹೆಬ್ಬಗೋಡಿ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಬುಧವಾರ ತಡರಾತ್ರಿ ವಿಶೇಷ ಕಾರ್ಯಾಚರಣೆ ಕೈಗೊಂಡು ಅಕ್ರಮವಾಗಿ ನೆಲೆಸಿದ್ದ 25 ಮಂದಿ ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಬಾಂಗ್ಲಾ ಪ್ರಜೆಗಳು ತಂಗಿದ್ದ ಶೆಡ್‌ಗಳಲ್ಲಿ ಅವರ ಹಿನ್ನೆಲೆ ತಿಳಿಸುವ ಪ್ರಮುಖ ದಾಖಲೆಗಳು ಮತ್ತು ಮೊಬೈಲ್‌ ಫೋನ್‌ಗಳನ್ನು ಜಪ್ತಿ ಮಾಡಿದ್ದಾರೆ.

ಅಕ್ರಮ ಬಾಂಗ್ಲಾದೇಶಿ ವಲಸೆ: ಕೇರಳದಲ್ಲಿ ಎನ್‌ಐಎ ಬಲೆಗೆ ಬೆಂಗಳೂರು ಕಿಂಗ್‌ಪಿನ್‌

ನಗರದಲ್ಲಿ ಕಳೆದ 20 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆ ನೂರುಲ್ಲಾ ಈ ನುಸುಳುಕೋರರ ಕಿಂಗ್‌ಪಿನ್‌ ಎನ್ನಲಾಗಿದೆ. ಈತನ ಮುಖಾಂತರ ಭಾರತಕ್ಕೆ ಬಂದು ಇವರೆಲ್ಲ ಅಕ್ರಮವಾಗಿ ನಗರದಲ್ಲಿ ನೆಲೆಸಿದ್ದರು. ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದರು. ಈ ಪೈಕಿ ಇಬ್ಬರು ನಗರದಲ್ಲಿ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿದ್ದ ವಿಚಾರ ವಿಚಾರಣೆಯಿಂದ ಗೊತ್ತಾಗಿದೆ.

ಐವರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಶೋಧ ಕಾರ್ಯ ಮುಂದುವರೆದಿದೆ. ಸಿಸಿಬಿ ದಾಳಿ ವೇಳೆ ಸಿಕ್ಕಿಬಿದ್ದಿರುವ ಈ 25 ಮಂದಿ ಬಾಂಗ್ಲಾ ಪ್ರಜೆಗಳನ್ನು ವಿದೇಶಿ ನಗರ ಪ್ರಾದೇಶಿಕ ನೋಂದಣಿ ಕಚೇರಿ(ಎಫ್‌ಆರ್‌ಆರ್‌ಒ)ಗೆ ಹಾಜರುಪಡಿಸಲಾಗುತ್ತದೆ. ಈ ಸಂಬಂಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.