ಮಹಾರಾಷ್ಟ್ರದಲ್ಲಿ ಭೀಕರ ಬಸ್ ಅಪಘಾತ: ಸವಿನಿದ್ರೆಯಲ್ಲಿದ್ದ 25 ಮಂದಿ ಸಜೀವ ದಹನ
32 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 25 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ನಸುಕಿನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಮುಂಬೈ (ಜುಲೈ 1, 2023): ಮಹಾರಾಷ್ಟ್ರದಲ್ಲಿ ಶನಿವಾರ ನಸುಕಿನ ಜಾವ ಭೀಕರ ಅಪಘಾತವಾಗಿದೆ. ಸವಿನಿದ್ರೆಯಲ್ಲಿದ್ದ 25 ಮಂದಿ ಚಿರನಿದ್ರೆಗೆ ಜಾರಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. 32 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 25 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ನಸುಕಿನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಸುಮಾರು 8 ಜನ ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎಂದೂ ತಿಳಿದುಬಂದಿದೆ.
ಮಹಾರಾಷ್ಟ್ರದ ಬುಲ್ಧಾನಾದ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ 32 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 25 ಜನರು ದಾರುಣವಾಗಿ ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. ನಾಗಪುರದಿಂದ ಪೂನಾಕ್ಕೆ ಹೊರಟಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಮೃತರಲ್ಲಿ ಮೂವರು ಮಕ್ಕಳು ಇದ್ದರು ಎಂದು ತಿಳಿದುಬಂದಿದೆ. ಇನ್ನು ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಉಪ ಎಸ್ಪಿ ಬಾಬುರಾವ್ ಮಹಾಮುನಿ ತಿಳಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಇದನ್ನು ಓದಿ: ಅಯ್ಯೋ ಪಾಪಿ: ಮಗಳ ಮದುವೆಯ ದಿನವೇ ತಂದೆಯನ್ನು ಕೊಂದ ಮಾಜಿ ಪ್ರೇಮಿ
ಶನಿವಾರ ನಸುಕಿನ 2 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದ್ದು, ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದರೂ, 25 ಜನರ ಪ್ರಾಣ ಹೋಗಿದೆ. ಡಿವೈಡರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ. "ಬಸ್‌ನಿಂದ 25 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬಸ್‌ನಲ್ಲಿ ಒಟ್ಟು 32 ಮಂದಿ ಪ್ರಯಾಣಿಸುತ್ತಿದ್ದರು. 6 - 8 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ" ಎಂದು ಬುಲ್ಧಾನ ಪೊಲೀಸ್ ಉಪ ಎಸ್ಪಿ ಬಾಬುರಾವ್ ಮಹಾಮುನಿ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಭೂ ಮಾಫಿಯಾ ಬಗ್ಗೆ ವರದಿ: ಪತ್ರಕರ್ತನ ಮೇಲೆ ಗುಂಡಿನ ದಾಳಿ; ಆಸ್ಪತ್ರೆಗೆ ದಾಖಲು
ಬಸ್‌ನಲ್ಲಿ ಚಾಲಕ ಸೇರಿ 33 ಮಂದಿ ಇದ್ದರು, ಈ ಪೈಕಿ 25 ಮಂದಿ ಮೃತಪಟ್ಟಿದ್ದು, 8 ಮಂದಿ ಗಾಯಗೊಂಡಿದ್ದಾರೆ ಎಂದು ಬುಲ್ಧಾನ ಎಸ್ಪಿ ಸುನೀಲ್ ಕಡಸನೆ ತಿಳಿಸಿದ್ದಾರೆ.ಈ ಪೈಕಿ ಬಸ್ ಚಾಲಕ ಸಹ ಅಪಘಾತದಿಂದ ಪಾರಾಗಿದ್ದಾರೆ. ಅವರ ಪ್ರಕಾರ, ಬಸ್‌ನ ಟೈರ್ ಸ್ಫೋಟವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ ಪಲ್ಟಿಯಾಗಿದೆ ಎಂದು ಕಡಸನೆ ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಸಂತ್ರಸ್ತರಿಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಇದನ್ನೂ ಓದಿ: ವಾಹನ ಸವಾರರೇ ಎಚ್ಚರ: ಹಗಲಲ್ಲೇ ಬಂದೂಕು ತೋರಿಸಿ ಲಕ್ಷಾಂತರ ರೂ. ದರೋಡೆ; ಸಿಸಿ ಕ್ಯಾಮೆರಾದಲ್ಲಿ ಸೆರೆ