24 ಪುಟಗಳ ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ: ಪ್ರಿಯಕರನಿಗೆ 'ಐ ಲವ್ ಯೂ' ಸಂದೇಶ!

24 ಪುಟಗಳ ಡೆತ್ ನೋಟ್ ಬರೆದಿಟ್ಟು ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ  ಘಟನೆ ಮಂಗಳೂರಿನ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. 

25 year old girl commits suicide after fifth day of housewarming at Mangaluru gvd

ಮಂಗಳೂರು (ಜೂ.08): 24 ಪುಟಗಳ ಡೆತ್ ನೋಟ್ ಬರೆದಿಟ್ಟು ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ  ಘಟನೆ ಮಂಗಳೂರಿನ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಮೂಲತ: ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ (25) ಆತ್ಮ ಹತ್ಯೆಗೆ ಶರಣಾದ ಯುವತಿ. 

ನಿನ್ನೆ ರಾತ್ರಿ ಅಶ್ವಿನಿ ತನ್ನ‌ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಲೆನ್ನಲಾಗಿದ್ದು, ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳಕಿಗೆ ಬಂದಿದೆ. ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ. ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು, ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆಯಂತೆ. ಅಶ್ವಿನಿ ಸಾಮಾನ್ಯ ಕುಟುಂಬದವಳಾಗಿದ್ದು, ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು. 

ಕಾಂಗ್ರೆಸ್‌ನವರು ನಮ್ಮನ್ನು ಲೆಕ್ಕಕ್ಕೂ ಇಟ್ಟಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತ ಎಂಬವರಿಂದ ಅಶ್ವಿನಿ ಮನೆಯೊಂದನ್ನ ಖರೀದಿಸಿದ್ದು, ಕಳೆದ ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ, ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರೆನ್ನಲಾಗಿದೆ. ಡೆತ್ ನೋಟಲ್ಲಿ ಅಶ್ವಿನಿ ತನ್ನ ಪ್ರಿಯಕರನ ಹೆಸರು ಉಲ್ಲೇಖಿಸಿ ಐ ಲವ್ ಯೂ ಅಂತ ಬರೆದಿದ್ದು, ತಾನು ಬಳಸುತ್ತಿದ್ದ ಐ ಫೋನನ್ನು ಆತನಿಗೆ ನೀಡಬೇಕೆಂದು ಹೇಳಿದ್ದಾಳೆ. ಹಲವು ಸಂಕಷ್ಟಗೊಳಗಾದ ಅಶ್ವಿನಿ‌ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಮೃತ ದೇಹವನ್ನ ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Latest Videos
Follow Us:
Download App:
  • android
  • ios