ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ದೊಡ್ಡೆತ್ತಿನಹಳ್ಳಿ ಗ್ರಾಮದ ಮಹಿಳೆ ರಾಧಿಕಾ ಎಂಬುವರು ಮದುವೆಯಾಗಿ ಆರು ವರ್ಷವಾದರೂ ಮಕ್ಕಳಾಗಲಿಲ್ಲವೆಂದು ನೊಂದು ತಮ್ಮ ಮನೆಯ ದೇವರ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ನ್ಯಾಮತಿ(ಡಿ.10):  ಮದುವೆಯಾಗಿ ಆರು ವರ್ಷವಾದರೂ ಮಕ್ಕಳಾಗಲಿಲ್ಲ ಎಂದು ಮನನೊಂದು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 

ತಾಲೂಕಿನ ದೊಡ್ಡೆತ್ತಿನಹಳ್ಳಿ ಗ್ರಾಮದ ಮಹಿಳೆ ರಾಧಿಕಾ(25) ಎಂಬುವರು ಮದುವೆಯಾಗಿ ಆರು ವರ್ಷವಾದರೂ ಮಕ್ಕಳಾಗಲಿಲ್ಲವೆಂದು ನೊಂದು ತಮ್ಮ ಮನೆಯ ದೇವರ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಬೆಂಗಳೂರು: ಮನೆ ಬಿಟ್ಟು ಓಡಿ ಬಂದು ಮದುವೆಯಾಗಿದ್ದ ಯುವತಿ ಆತ್ಮಹತ್ಯೆ, ಕಾರಣ ನಿಗೂಢ?

ಬಸವನಹಳ್ಳಿ ಗ್ರಾಮದ ರಾಧಿಕಾರನ್ನು ದೊಡ್ಡೆತ್ತಿನಹಳ್ಳಿ ಗ್ರಾಮದ ಲೋಕೇಶ್‌ ಎಂಬವರಿಗೆ 6 ವರ್ಷದ ಹಿಂದೆ ಮದುವೆ ಮಾಡಿಕೊಡಲಾಗಿತ್ತು ಎಂದು ಮೃತರ ತಾಯಿ ನ್ಯಾಮತಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಸರ್ಕಲ್‌ ಇನ್ಸ್‌ಪೆಕ್ಟರ್‌ ಎನ್‌.ಎಸ್‌ ರವಿ ಮುಂದಿನ ಕ್ರಮ ಕೈಗೊಂಡಿದ್ದಾರೆ.