Techie Suicide: ಪ್ರೀತಿಸಿ ಮದ್ವೆಯಾಗಿದ್ದ ಮಹಿಳಾ ಟೆಕ್ಕಿ ಆತ್ಮಹತ್ಯೆಗೆ ಶರಣು
* ಪ್ರೀತಿಸಿ ಮದ್ವೆಯಾಗಿದ್ದ ಮಹಿಳಾ ಟೆಕ್ಕಿ ಆತ್ಮಹತ್ಯೆಗೆ ಶರಣು
* 4 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ
* ಬೆಂಗಳೂರು ನಗರದ ಅಮೃತಹಳ್ಳಿಯಲ್ಲಿ ಘಟನೆ
ಬೆಂಗಳೂರು, (ಡಿ.10): ಪ್ರೀತಿಸಿ ಮದುವೆಯಾಗಿದ್ದ (Love Marriage) ಮಹಿಳಾ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು (Bengaluru) ನಗರದ ಅಮೃತಹಳ್ಳಿಯಲ್ಲಿ ನಡೆದಿದೆ.
ವೀರಣ್ಣ ಪಾಳ್ಯದ ನಿವಾಸಿ ಸಂಗೀತಾ(26) ನೇಣಿಗೆ ಶರಣಾಗಿದ್ದಾರೆ. 4 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ಸಂಗೀತಾ ಮತ್ತು ಪತಿ ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ (Engineer) ಆಗಿ ಕೆಲಸ ಮಾಡುತ್ತಿದ್ದರು.
ಕೌಟುಂಬಿಕ ಕಲಹ (Family) ಹಿನ್ನೆಲೆಯಲ್ಲಿ ಸಂಗೀತಾ ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ ಎಂಬ ಶಂಕಿಸಲಾಗಿದೆ. ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಮಧ್ಯೆ ಬಿರುಕು ಮೂಡಿದ್ದು, ಪತಿಯ ಕಿರುಕುಳದಿಂದ ಬೇಸತ್ತ ಸಂಗಿತಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ಸೃಷ್ಟಿಯಾಗಿದೆ. ಆದ್ರೆ, ಆತ್ಮಹತ್ಯೆಗೆ ಖಚಿತ ಕಾರಣ ತಿಳಿದುಬಂದಿಲ್ಲ.
ಈ ಬಗ್ಗೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಗೀತಾ ಪತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ ಸಂಗೀತಾ ಕುಟುಂಬಸ್ಥರಿಂದಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಮಾನಸಿಕ ಖಿನ್ನತೆಗೆ ಬಾಲಕಿ ಬಲಿ
ಮಾನಸಿಕ ಖಿನ್ನತೆಗೆ ಒಳಗಾದ ಬಾಲಕಿ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ದೀಪಾ (15) ನೇಣಿಗೆ ಶರಣಾದ ಬಾಲಕಿ. ಬಾಗಲಕೋಟೆ ಮೂಲ ನಿವಾಸಿಯಾಗಿರುವ ದೀಪ, ನಗರದ ಬನ್ನಂಜೆಯಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಲ ವರ್ಷಗಳಿಂದ ಬನ್ನಂಜೆಯ ಬಾಡಿಗೆ ಮನೆಯಲ್ಲಿ ದೀಪ ಕುಟುಂಬ ವಾಸವಾಗಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಪಿಡ್ಸ್ ಹಾಗೂ ಇನ್ನಿತರ ದೈಹಿಕ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾಳೆ. ಇದರಿಂದ ಓದಿಗೆ ಕೂಡ ತೊಡಕಾಗಿದೆ. ಹೀಗಾಗಿ ಮಾನಸಿಕವಾಗಿ ನೊಂದಿದ್ದ ದೀಪ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಅಜ್ಜರಕಾಡು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಮೃತದೇಹ ರವಾನೆ ಮಾಡಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ವಿವಾಹಿತ ಯುವಕ ಆತ್ಮಹತ್ಯೆ
ಮುದ್ದೇಬಿಹಾಳ: ಇಬ್ಬರು ಮಕ್ಕಳ ತಂದೆಯೊಬ್ಬ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುದ್ದೇಬಿಹಾಳ ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ಇರುವ ತಾಲೂಕು ಪಂಚಾಯಿತಿಯ ಹಳೇ ಕ್ವಾಟ್ರಸನಲ್ಲಿ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ಮಾಡಿಕೊಂಡವನನ್ನು ಗಣೇಶ ನಗರದ ಗಿರಿಜಾಶಂಕರ ಚಿತ್ರಮಂದಿರ ಏರಿಯಾ ನಿವಾಸಿ ವೀರೇಶ ಯಮನಯ್ಯ ಚಿಮ್ಮಲಗಿ (ಆಲಿಮಟ್ಟಿ) (32) ಎಂದು ಗುರುತಿಸಲಾಗಿದೆ.