Asianet Suvarna News Asianet Suvarna News

ಪಶ್ಚಿಮ ಬಂಗಾಳದಲ್ಲಿ ಸಾರಿಗೆ ಸಂಸ್ಥೆ ಬಸ್-ಟ್ಯಾಂಕರ್ ನಡುವೆ ಭೀಕರ ಅಪಘಾತ, 27 ಮಂದಿ ಗಂಭೀರ!

ಪಶ್ಚಿಮ ಬಂಗಾಳದಲ್ಲಿ 5 ದಿನಗಳ ಅಂತರದಲ್ಲಿ ಮತ್ತೊಂದು ಬಸ್ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ 27 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಮೂವರು ಮೃತಪಟ್ಟಿದ್ದಾರೆ. 
 

27 injured in  State transport bus and Oil tanker accident in West bangal highway police rush to spot ckm
Author
First Published Mar 26, 2023, 5:01 PM IST

ಕೋಲ್ಕತಾ(ಮಾ.26): ಪಶ್ಚಿಮ ಬಂಗಳಾದಲ್ಲಿ ಇದೀಗ ಮತ್ತೊಂದು ರಾಜ್ಯ ಸಾರಿಗೆ ಸಂಸ್ಥೆ ಬಸ್ ಅಪಘಾತಕ್ಕೀಡಾಗಿದೆ. 5 ದಿನಗಳ ಹಿಂದೆ ಸಾರಿಗೆ ಬಸ್ ಅಪಘಾತದಲ್ಲಿ ಮೂವರು ಮೃತಪಟ್ಟು 9 ಮಂದಿ ಗಾಯಗೊಂಡಿದ್ದರು. ಇಂದು ಮಧ್ಯಾಹ್ನ ಸಂಭವಿಸಿದ  ಭೀಕರ ಅಪಘಾತದಲ್ಲಿ ಬರೋಬ್ಬರಿ 27 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪುರ್ಬಾ ಮೇದಿನಿಪುರ ಜಿಲ್ಲೆಯ ಹಲ್ದಿಯಾ ಮೆಚೆಡಾ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಪಶ್ಚಿಮ ಬಂಗಾಳ ದಕ್ಷಿಣ ಸಾರಿಗೆ ಸಂಸ್ಥೆಯ ಬಸ್ ಹಾಗೂ ಆಯಿಲ್ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಗಾಯಗೊಂಡವರನ್ನು ಹತ್ತಿರದ ತೊಮ್ಲುಕ್ ಮೆಡಿಕಲ್ ಕಾಲೇಜು ಅಸ್ಪತ್ರೆಗೆ ದಾಖಲಿಸಲಾಗಿದೆ. 27 ಗಾಯಾಳುಗಳ ಪೈಕಿ 15 ಮಂದಿಯ ಸ್ಥಿತಿ ಚಿಂತಜನಕವಾಗಿದ. ಇನ್ನುಳಿದ 12 ಮಂದಿ ಸಣ್ಣ ಪಟ್ಟು ಗಾಯಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. 

ನೈಟ್‌ ಶಿಫ್ಟ್ ಮಾಡುತ್ತಿದ್ದ ಪೊಲೀಸ್‌ಗೆ ಗುದ್ದಿದ ಅಪರಿಚಿತ ವಾಹನ: ಸ್ಥಳದಲ್ಲಿಯೇ ಪೇದೆ ಸಾವು

ದಿಗಾದಿಂದ ಕೋಲ್ಕಾತಾಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ರಾಜ್ಯ ಸಾರಿಗೆ ಬಸ್ ಅಪಘಾತಕ್ಕೀಡಾಗಿದೆ. ಹಲ್ದಿಯಾ ಮೆಚೆಡಾ ರಾಜ್ಯ ಹೆದ್ದಾರಿಯ ಕ್ರಾಸಿಂಗ್ ಬಳಿ ರಸ್ತೆ ಕಾಮಗಾರಿ ನಡೆಯುತ್ತಿದೆ. ಅತೀ ವೇಗಾವಾಗಿ ಬಂದ ಬಸ್ ಹಾಗೂ ಆಯಿಲ್ ಟ್ಯಾಂಕ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತಗೆ ಬಸ್ ಹಾಗೂ ಟ್ಯಾಂಕ್ ನಜ್ಜು ಗುಜ್ಜಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪುರ್ಬಾ ಮೇದಿನಿಪುರ ಜಿಲ್ಲೆಯ ಹಲ್ದಿಯಾ ಮೆಚೆಡಾ ರಾಜ್ಯ ಹೆದ್ದಾರಿಯಲ್ಲಿ ಅಪಘಾತಗ ಸಂಖ್ಯೆ ಹೆಚ್ಚಾಗುತ್ತಿದೆ. ಈ ರಸ್ತೆ ಅವೈಜ್ಞಾನಿಕವಾಗಿದೆ ಅನ್ನೋ ಆರೋಪಗಳು ಕೇಳಿಬರುತ್ತಲೇ ಇದೆ. ಹಲವು ಕಡೆ ರಸ್ತೆ ಕಾಮಾಗಾರಿ ನಡೆಯುತ್ತಿದೆ. ಆದರೆ ಸ್ಪಷ್ಟ ಸೂಚನಾ ಫಲಕ ಹಾಕಿಲ್ಲ. ಇದರಿಂದ ರಾತ್ರಿ ವೇಳೆ ಬೈಕ್ ಸವಾರರು ಹೆಚ್ಚು ಅಪಘಾತಕ್ಕೀಡಾಗುತ್ತಿದ್ದಾರೆ. ಕಳೆದೆರಡು ತಿಂಗಳಲ್ಲಿ ಇದೇ ರಸ್ತೆಯಲ್ಲಿ ಹಲವು ಅಪಘಾತ ಸಂಭವಿಸಿದೆ. 

ಬೆಳಗಾವಿಯಲ್ಲಿ ಸ್ಪೀಡ್ ಬ್ರೇಕರ್ ನಿರ್ಮಾಣಗೊಂಡ ಕೆಲ ಘಂಟೆಗಳಲ್ಲೇ ಅಪಘಾತವಾಗಿ ಯುವಕ ಬಲಿ!

ಅಪಘಾತ ಮಾಹಿತಿ ಹೊರಬರುತ್ತಿದ್ದಂತೆ ಪ್ರಯಾಣಿಕರು ಸಂಬಂಧಿಕರು ಆಸ್ಪತ್ರೆಯತ್ತ ದೌಡಾಯಿಸಿದ್ದಾರೆ.ಇತ್ತ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಅಪಘಾತಕ್ಕೆ ಕಾರಣ ಹಾಗೂ ಇತರ ಮಾಹಿತಿಗಳು ಹೊರಬರಲಿದೆ ಎಂದು ಸ್ಥಳೀಯ ಜಿಲ್ಲಾಡಳಿತ ಹೇಳಿದೆ. 

5 ದಿನಗಳ ಹಿಂದೆ ಹೌರಾ ಜಿಲ್ಲಿಯಾ ರಾಷ್ಟ್ರೀಯ ಹೆದ್ದಾರಿ 16ರ ಈಶ್ವರಿಪುರದಲ್ಲಿ ರಾಜ್ಯಸಾರಿಗೆ ಸಂಸ್ಥೆ ಬಸ್ ಅಪಘಾತವಾಗಿತ್ತು. ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಈ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದರೆ, 9 ಮಂದಿ ಗಾಯಗೊಂಡಿದ್ದರು.

Follow Us:
Download App:
  • android
  • ios