Asianet Suvarna News Asianet Suvarna News

ಹೊಸಕೋಟೆ: ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದಕ್ಕೆ ಪ್ರಶ್ನೆ ಮಾಡಿದ ವ್ಯಕ್ತಿಯನ್ನೇ ಕೊಂದ ದುಷ್ಕರ್ಮಿಗಳು..!

ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ್ದಕ್ಕೆ ಪ್ರಶ್ನೆ ಮಾಡಿದ ವ್ಯಕ್ತಿಯನ್ನ ಬರ್ಬರ ಹತ್ಯೆಗೈದ ಘಟನೆ ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದ್ದಾರಿ ಎನ್‌ಹೆಚ್ 75 ಡಾಬದ ಬಳಿ ಇಂದು ನಡೆದಿದೆ. 

27 Year Old Young Man Killed at Hosakote in Bengaluru Rural grg
Author
First Published Jun 16, 2024, 10:44 AM IST

ಹೊಸಕೋಟೆ(ಜೂ.16):  ರಸ್ತೆಯಲ್ಲಿ ಅಡ್ಡಾದ್ದಿಡ್ಡಿಯಾಗಿ ಕಾರು ಚಲಾಯಿಸಿದ್ದಕ್ಕೆ ಪ್ರಶ್ನೆ ಮಾಡಿದ ವ್ಯಕ್ತಿಯನ್ನ ಬರ್ಬರ ಹತ್ಯೆಗೈದ ಘಟನೆ ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದ್ದಾರಿ ಎನ್‌ಹೆಚ್ 75 ಡಾಬದ ಬಳಿ ಇಂದು(ಭಾನುವಾರ) ನಡೆದಿದೆ. ಹೊಸಕೋಟೆ ತಾಲೂಕಿನ ಗಂಗಾಪುರ ಗ್ರಾಮದ ನಿವಾಸಿ ನವೀನ್ ನಾಯಕ್(27) ಕೊಲೆಯಾದ ಯುವಕ.

ಇಂದು ಬೆಳಗಿನ ಜಾವ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದನ್ನು ನವೀನ್ ನಾಯಕ್ ಪ್ರಶ್ನೆ ಮಾಡಿದ್ದನಂತೆ. ಇದೇ ವಿಚಾರಕ್ಕೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.  

ಮರ್ಡರ್‌ ಕೇಸಲ್ಲಿ ಅರೆಸ್ಟ್‌: ದರ್ಶನ್‌ಗೆ ಬಿಟ್ಟೂ ಬಿಡದೆ ಬೆನ್ನು ಹತ್ತಿದೆಯಾ 'ಡೆವಿಲ್' ಚಿತ್ರ?

ನವೀನ್ ಇಂದು ತರಕಾರಿ ವ್ಯಾಪಾರಕ್ಕೆ ಹೋಗುತ್ತಿದ್ದನು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಹೊಸಕೋಟೆ ಡಿವೈಎಸ್‌ಪಿ ಶಂಕರ್ ಗೌಡ ಅಣ್ಣ ಸಾಹೇಬ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  
ಓವರ್ ಟೆಕ್ ಮಾಡುವ ವಿಚಾರಕ್ಕೆ ಕೊಲೆ ನಡೆದಿದೆ ಎಂದು ಹೇಳಿದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಕೊಲೆಗಾರರನ್ನ ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

Latest Videos
Follow Us:
Download App:
  • android
  • ios