ಸ್ನೇಹಿತರ ಜೊತೆ ಪಾರ್ಟಿ ಮಾಡುವ ವೇಳೆ ಈ ದುರ್ಘಟನೆ ಸಂಭವಿಸಿದೆ. ನಿನ್ನೆ ಬೆಳಗ್ಗೆ 6.45 ರ ಸುಮಾರಿಗೆ ಘಟನೆ ನಡೆದಿದೆ. ದಿಪಾಂಶು ಶರ್ಮಾ ಸೇರಿ ಇಬ್ಬರು ಯುವತಿಯರು ಹಾಗೂ ಓರ್ವ ಸ್ನೇಹಿತ ಪಾರ್ಟಿ ಮಾಡುತ್ತಿದ್ದರು. ಮದ್ಯಪಾನದ ಜೊತೆ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. 

ಬೆಂಗಳೂರು(ಡಿ.30):  ಮದ್ಯದ ನಶೆಯಲ್ಲಿ ಬಾಲ್ಕನಿಯಿಂದ ಬಿದ್ದು ಟೆಕ್ಕಿಯೋರ್ವ ಸಾವನ್ನಪ್ಪಿದ ಘಟನೆ ಕೆ.ಆರ್. ಪುರಂ ಅಯ್ಯಪ್ಪನಗರದ ಕೊಡಿಗೇಹಳ್ಳಿಯಲ್ಲಿ ನಿನ್ನೆ(ಶುಕ್ರವಾರ) ನಡೆದಿದೆ. ದಿಪಾಂಶು ಶರ್ಮಾ(27) ಎಂಬಾತನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. 

Add Asianetnews Kannada as a Preferred SourcegooglePreferred

ಸ್ನೇಹಿತರ ಜೊತೆ ಪಾರ್ಟಿ ಮಾಡುವ ವೇಳೆ ಈ ದುರ್ಘಟನೆ ಸಂಭವಿಸಿದೆ. ನಿನ್ನೆ ಬೆಳಗ್ಗೆ 6.45 ರ ಸುಮಾರಿಗೆ ಘಟನೆ ನಡೆದಿದೆ. ದಿಪಾಂಶು ಶರ್ಮಾ ಸೇರಿ ಇಬ್ಬರು ಯುವತಿಯರು ಹಾಗೂ ಓರ್ವ ಸ್ನೇಹಿತ ಪಾರ್ಟಿ ಮಾಡುತ್ತಿದ್ದರು. ಮದ್ಯಪಾನದ ಜೊತೆ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. 

ಬೆಂಗಳೂರು: ತನ್ನ ತಪ್ಪಿಲ್ಲದಿದ್ದರೂ ಕಾಲೇಜಿಂದ ಸಸ್ಪೆಂಡ್, ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಅಪಾರ್ಟ್‌ಮೆಂಟ್‌ನ 33 ನೇ ಮಹಡಿಯ ಬಾಲ್ಕನಿಯಿಂದ ದಿಪಾಂಶು ಶರ್ಮಾ ಬಿದ್ದು ಮೃತಪಟ್ಟಿದ್ದಾನೆ. ಮೃತ ದಿಪಾಂಶು ಶರ್ಮಾ ಉತ್ತರ ಪ್ರದೇಶ ಮೂಲದವನಾಗಿದ್ದಾನೆ ಅಂತ ತಿಳಿದು ಬಂದಿದೆ. ಈತ ಆರ್ಮಿ ಸಿಬ್ಬಂದಿಯೊಬ್ಬರ ಮಗನಾಗಿದ್ದು ಬೆಂಗಳೂರಿನ ಪಿಜಿಯೊಂದರಲ್ಲಿ ವಾಸವಾಗಿದ್ದನು. ಘಟನಾ ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.