ಕರ್ನಾಟಕದ ಯುವತಿಯೊಬ್ಬಳನ್ನು ವಂಚಿಸಿ, ಆಕೆಯನ್ನು  ಅತ್ಯಾಚಾರಗೈದ ಆರೋಪದಲ್ಲಿ 28 ವರ್ಷದ ಹೈದರಾಬಾದ್‌ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.

ತೆಲಂಗಾಣ (ಸೆ.17): ಕರ್ನಾಟಕದ ಯುವತಿಯೊಬ್ಬಳನ್ನು ವಂಚಿಸಿ, ಆಕೆಯನ್ನು ಅತ್ಯಾಚಾರಗೈದ ಆರೋಪದಲ್ಲಿ 28 ವರ್ಷದ ಹೈದರಾಬಾದ್‌ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಅಲ್ವಾಲ್ ನಿವಾಸಿ ಮಹೇಂದ್ರ ಚಾರಿ ಎಂದು ಗುರುತಿಸಲಾಗಿದೆ. ಕರ್ನಾಟಕ ಮೂಲದ 22 ವರ್ಷದ ಸಂತ್ರಸ್ತೆ ಯುವತಿ ಎರಡು ತಿಂಗಳ ಹಿಂದೆ ಹೈದರಾಬಾದ್‌ಗೆ ಬಂದು ಮೇಡ್ಚಲ್‌ನ ಹಾಸ್ಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಈ ವೇಳೆ ಯುವತಿ ಮತ್ತು ಯುವಕನಿಗೆ ಪರಿಚಯವಾಯ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಇಂಡಿಯಾ ಮೈತ್ರಿಕೂಟದ ಮೊದಲ ಜಂಟಿ ರ್‍ಯಾಲಿ ದಿಢೀರ್ ರದ್ದು, ಬಿಜೆಪಿ ವ್ಯಂಗ್ಯ

ಶುಕ್ರವಾರ ರಾತ್ರಿ ಬಂಧಿಸಲಾದ ಮಹೇಂದ್ರ, ಎರಡು ತಿಂಗಳ ಹಿಂದೆ ಮದುವೆಯಾಗುವುದಾಗಿ ಭರವಸೆ ನೀಡಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.

ಮದುವೆಯಾಗುವುದಾಗಿ ಭರವಸೆ ನೀಡಿ ವಂಚಿಸಿ ಅತ್ಯಾಚಾರವೆಸಗಿ, ಕಳೆದ ವಾರ ಬೇರೊಬ್ಬ ಯುವತಿಯನ್ನು ಮದುವೆಯಾಗಿದ್ದ ಎಂಬ ದೂರಿನ ಆಧಾರದ ಮೇಲೆ ಬೋವನಪಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ ರಿಮಾಂಡ್‌ಗೆ ಕಳುಹಿಸಿದ್ದಾರೆ ಎಂದು ಬೋವನಪಲ್ಲಿ ಸಬ್ ಇನ್ಸ್‌ಪೆಕ್ಟರ್ ನಾಗೇಂದ್ರ ಬಾಬು ಮಾಹಿತಿ ನೀಡಿದ್ದಾರೆ.

ಬ್ರೇಕಪ್​ಗೆ ಒಪ್ಪದಿದ್ದಕ್ಕೆ ಪ್ರಿಯಕರನ ಹತ್ಯೆ: ವಿಷ ನೀಡಿದ್ದ ಗ್ರೀಷ್ಮಾ ಕಾಟಕ್ಕೆ ಬೇಸತ್ತ

ಆರೋಪಿ ವಿರುದ್ಧ ಎಸ್‌ಸಿ ಮತ್ತು ಎಸ್‌ಟಿ ಅಟ್ರಾಸಿಟಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶುಕ್ರವಾರ ಆರೋಪಿಯನ್ನು ಬಂಧಿಸಿದ್ದಾರೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.