ಕೊಲೆಯಾದ ಮಹಿಳೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿದ್ದಾಳೆ. ದೀಪಿಕಾ ಮೇಲುಕೋಟೆಯ ಎಸ್‌ಇಟಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಶಾಲೆಗೆ ಹೋಗಿ ಆನಂತರ ದೀಪಿಕಾ ನಾಪತ್ತೆಯಾಗಿದ್ದಳು. 

ಮಂಡ್ಯ(ಜ.23):  ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆಯಾದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ ನಿನ್ನೆ(ಸೋಮವಾರ) ಸಂಜೆ ನಡೆದಿದೆ. ದೀಪಿಕಾ(28) ಎಂಬಾಕೆಯೇ ಕೊಲೆಯಾದ ದುರ್ದೈವಿಯಾಗಿದ್ದಾಳೆ. ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಿದ್ದಾರೆ ದುಷ್ಕರ್ಮಿಗಳು.

Add Asianetnews Kannada as a Preferred SourcegooglePreferred

ಕೊಲೆಯಾದ ಮಹಿಳೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿದ್ದಾಳೆ. ದೀಪಿಕಾ ಮೇಲುಕೋಟೆಯ ಎಸ್‌ಇಟಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಶಾಲೆಗೆ ಹೋಗಿ ಆನಂತರ ದೀಪಿಕಾ ನಾಪತ್ತೆಯಾಗಿದ್ದಳು. ಜನವರಿ 20ರ ಮಧ್ಯಾಹ್ನನಿಂದ ದೀಪಿಕಾ ನಾಪತ್ತೆಯಾಗಿದ್ದಳು. ನಾಪತ್ತೆಯಾದ ಬಗ್ಗೆ ಕುಟುಂಬಸ್ಥರು ಜ.20ರ ಸಂಜೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ನಿನ್ನೆ ಸಂಜೆ ದೀಪಿಕಾ ಶವ ಪತ್ತೆಯಾಗಿದೆ. 

ಸಾಲ ವಾಪಸ್ ಕೇಳಲು ಹೋದವನಿಗೆ ಮಚ್ಚಿನೇಟು..! ಅವನನ್ನ ಮುಗಿಸಲು ಆಕೆ ಮಾಡಿದ ಪ್ಲ್ಯಾನ್‌ ಏನ್‌ ಗೊತ್ತಾ ?

ಮೇಲೆಕೋಟೆ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಶವ ಪತ್ತೆಯಾಗಿದೆ. ಮಹಿಳೆ ನಾಪತ್ತೆ, ಕೊಲೆ ಪ್ರಕರಣ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಮಂಡ್ಯ ಎಸ್‌ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ಶಿಕ್ಷಕಿ ದೀಪಿಕಾ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಆಕ್ಟೀವ್ ಆಗಿದ್ದರು ಎಂದು ತಿಳಿದು ಬಂದಿದೆ.