ಖಾತೆಯಿಂದ ಹಣ ಕಡಿತವಾಗಿರುವ ಬಗ್ಗೆ ಜಾನ್ ಅವರ ಮೊಬೈಲ್‌ಗೆ ಸಂದೇಶ ಬಂದಾಗ ಸೈಬರ್ ವಂಚಕರ ಕೈ ಚಳಕದ ಬಗ್ಗೆ ಗೊತ್ತಾಗಿದೆ.
ಬೆಂಗಳೂರು(ಜು.28): ಸೈಬರ್ ವಂಚಕರು ಕೆವೈಸಿ ಅಪ್ಡೇಟ್ ಮಾಡದಿದ್ದಲ್ಲಿ ಬ್ಯಾಂಕ್ ಖಾತೆ ಬ್ಲಾಕ್ ಆಗಲಿದೆ ಎಂದು ವ್ಯಕ್ತಿಯೊಬ್ಬರ ಮೊಬೈಲ್‌ಗೆ ಸಂದೇಶ ಕಳುಹಿಸಿ ಬಳಿಕ ಒಟಿಪಿ ಪಡೆದು ಬ್ಯಾಂಕ್ ಖಾತೆಯಿಂದ .3.50 ಲಕ್ಷ ವರ್ಗಾಯಿಸಿಕೊಂಡು ವಂಚಿಸಿರುವ ಆರೋಪದಡಿ ನಗರದ ಪೂರ್ವ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊತ್ತನೂರಿನ ಗೆದ್ದಲಹಳ್ಳಿ ನಿವಾಸಿ ಜಾನ್ ವೆಸ್ಲಿ(77) ಎಂಬುವವರು ಹಣ ಕಳೆದುಕೊಂಡವರು. ಇತ್ತೀಚೆಗೆ ಜಾನ್ ಅವರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ‘ಕೆವೈಸಿ ಅಪ್ಡೇಟ್ ಮಾಡಿಸಿ. ಇಲ್ಲವಾದರೆ, ನಿಮ್ಮ ಕೆನರಾ ಬ್ಯಾಂಕ್ ಖಾತೆ ಬ್ಲಾಕ್ ಆಗಲಿದೆ’ ಎಂಬ ಸಂದೇಶ ಬಂದಿದೆ. ಈ ನಂಬರ್‌ಗೆ ಕರೆ ಮಾಡಿ ಎಂದು ಒಂದು ಮೊಬೈಲ್ ಸಂಖ್ಯೆಯನ್ನೂ ನೀಡಲಾಗಿದೆ. ಅದರಂತೆ ಜಾನ್ ಅವರು ಆ ಸಂದೇಶದಲ್ಲಿ ನೀಡಲಾಗಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿದ್ದಾರೆ. ಈ ವೇಳೆ ದುಷ್ಕರ್ಮಿ, ಜಾನ್ ಅವರಿಂದ ಒಟಿಪಿ ಸಂಖ್ಯೆ ಪಡೆದುಕೊಂಡು ವಿವಿಧ ಹಂತಗಳಲ್ಲಿ ಜಾನ್ ಅವರ ಬ್ಯಾಂಕ್ ಖಾತೆಯಿಂದ .3.50 ಲಕ್ಷ ವರ್ಗಾಯಿಸಿಕೊಂಡಿದ್ದಾನೆ.
ಕೊಡೆಕಲ್ ಬಸವೇಶ್ವರ ದೇವಸ್ಥಾನದಲ್ಲಿ ಹುಂಡಿ ಹಣ ಕದ್ದ ಖದೀಮರು!
ಖಾತೆಯಿಂದ ಹಣ ಕಡಿತವಾಗಿರುವ ಬಗ್ಗೆ ಜಾನ್ ಅವರ ಮೊಬೈಲ್‌ಗೆ ಸಂದೇಶ ಬಂದಾಗ ಸೈಬರ್ ವಂಚಕರ ಕೈ ಚಳಕದ ಬಗ್ಗೆ ಗೊತ್ತಾಗಿದೆ. ಈ ಸಂಬಂಧ ಜಾನ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
