ಗದಗ, (ಮೇ.12): ತಾಲೂಕಿನ ಹರ್ತಿ ಬಳಿ ಈ ಭೀಕರ ಆಪಘಾತ ಸಂಭವಿಸಿದ್ದು, ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. 

 ಇನ್ನಿಬ್ಬರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ನಿಮ್ಮ-ನಿಮ್ಮ ಜಿಲ್ಲಾಸುದ್ದಿಗಾಗಿ ಕ್ಲಿಕ ಮಾಡಿ

ಡಿಕ್ಕಿಯ ರಭಸಕ್ಕೆ ಕಾರು ಅರ್ಧ ಮರದಲ್ಲಿಯೇ ಸಿಲುಕಿಕೊಂಡಿದೆ. ಪರಿಣಾಮ ಚಾಲಕನೂ ಸಹ ಮರದಡಿಯಲ್ಲಿಯೇ ಸಿಲುಕಿಕೊಂಡಿದ್ದಾನೆ.

ಗದಗ ತಾಲೂಕಿನ ಲಿಂಗದಾಳದಿಂದ ಲಕ್ಷ್ಮೇಶ್ವರಕ್ಕೆ ಸಂಬಂಧಿಕರ ಅಂತ್ಯಕ್ರಿಯೆಗೆ ತೆರುಳುವಾಗ ಈ ದುರ್ಘಟನೆ  ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಗದಗ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಲಾಕ್‌ಡೌನ್‌ ವೇಳೆ ಯಾವುದೇ ವಾಹನ ಸಂಚಾರ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಅಂತ್ಯಕ್ರಿಯೆಯಲ್ಲಿ ಕೇವಲ 5 ಜನರಿಗೆ ಮಾತ್ರ ಅವಕಾಶ ಕೊಟ್ಟಿದೆ.

ಆದ್ರೆ, ಇವರು ಅಂತ್ಯಕ್ರಿಯೆಲ್ಲಿ ಪಾಲ್ಗೊಳ್ಳಲು ಹೋಗಿ ಈಗ ತಾವು ಸಹ ಮಸಣ ಸೇರಿದ್ದಾರೆ. ಸರ್ಕಾರದ ನಿಯಮ ಪಾಲಿಸಿದ್ರೆ, ಅಪಘಾತವು ಆಗುತ್ತಿರಲ್ಲಿ ಜೀವ ಸಹ ಹೋಗುತ್ತಿರಲಿಲ್ಲ.