ಕಾರು ಹಾಗೂ ಟೆಂಪೊ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಧಾರವಾಡದಲ್ಲಿ ನಡೆದಿದೆ. 

ಧಾರವಾಡ (ಜ.14): ಟೆಂಪೋ- ಕಾರ್ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಮೂವರು ಸಾವಿಗೀಡಾದ ಘಟನೆ ಧಾರವಾಡದಲ್ಲಿ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ ಅಪಘಾತವಾಗಿದ್ದು, ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಓರ್ವ ಮಹಿಳೆ ಹಾಗೂ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಕಾರು-ಬೈಕ್-ಏಸ್ ನಡುವೆ ಸರಣಿ ಅಪಘಾತ; ಬಲಿಯಾದ ಜೀವಗಳೆಷ್ಟು?..

ಅಪಘಾತದಲ್ಲಿ ಗಾಯಗೊಂಡವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದವರೆನ್ನಲಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. 

ಸದ್ಯ ಈ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.