ಸ್ವಾತಂತ್ರ್ಯ ರಥದಲ್ಲಿ ಸಾವರ್ಕರ್ ಫೋಟೋ ಬಳಕೆಗೆ ಆಕ್ಷೇಪ, ಮೂವರ ಬಂಧನ
* ದಕ್ಷಿಣ ಕನ್ನಡದಲ್ಲಿ ಸ್ವಾತಂತ್ರ್ಯ ರಥಕ್ಕೆ ಅಡ್ಡಿ ಪ್ರಕರಣ
* ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ್ದ ಎಸ್ಡಿಪಿಐ ಕಾರ್ಯಕರ್ತರ ಬಂಧನ
* ಆರೋಪಿಗಳಿಗೆ14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ
ಮಂಗಳೂರು, (ಆ.14): ಎಲ್ಲೆಡೆ 75ನೇ ಸ್ವಾತಂತ್ರ್ಯ ಸಂಭ್ರಮ ಮನೆ ಮಾಡಿದ್ರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ರಥದಲ್ಲಿ ಸಾರ್ವಕರ್ ಪೋಟೋ ಬಳಿಕೆ ಸಂಬಂಧ ಗಲಾಟೆ ನಡೆದಿದೆ.
ಹೌದು.. ಇಲ್ಲಿನ ಕಬಕ ಎಂಬಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್ಡಿಪಿಐನಿಂದ ಅಡ್ಡಿಪಡಸಿದ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದ್ದು,, ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ್ದ ಎಸ್ಡಿಪಿಐ ಕಾರ್ಯಕರ್ತರಾದ ಅಝೀಜ್. ಕೆ, ಸಮೀರ್ ಅಬ್ದುಲ್ ರೆಹಮಾನ್ಗೆ 14 ದಿನ ನ್ಯಾಯಾಂಗ ಬಂಧನ ಆದೇಶಿಸಲಾಗಿದೆ.
ಸ್ವಾತಂತ್ರ್ಯ ರಥ ಯಾತ್ರೆಗೆ SDPI ಅಡ್ಡಿ ಪ್ರಕರಣ; ನಳೀನ್ ಕುಮಾರ್ ಕಟೀಲ್ ಆಕ್ರೋಶ!
ಎಸ್ಡಿಪಿಐ ಕಾರ್ಯಕರ್ತರು ಕಬಕ ಗ್ರಾಮ ಪಂಚಾಯಿತಿಯ ಸ್ವಾತಂತ್ರ್ಯ ರಥಕ್ಕೆ ಅಡ್ಡಿ ಪಡಿಸಿದ್ದರು. ವೀರಸಾವರ್ಕರ್ ಚಿತ್ರ ಹಾಕಿದ್ದನ್ನು ವಿರೋಧಿಸಿ ರಥಕ್ಕೆ ತಡೆ ಒಡ್ಡಿದ್ದರು.
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಕಬಕ ಗ್ರಾಮದಲ್ಲಿ ಸ್ವಾತಂತ್ರ್ಯ ಸಂಭ್ರಮದಲ್ಲಿ ಫೋಟೋ ವಿಚಾರಕ್ಕೆ ಜಟಾಪಟಿ ನಡೆದಿದ್ದು, ರಥದಲ್ಲಿ ಸಾವರ್ಕರ್ ಫೋಟೋ ಅಳವಡಿಸಿದ್ದಕ್ಕೆ ಎಸ್ಡಿಪಿಐ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ಟಿಪ್ಪು ಸುಲ್ತಾನ್ ಫೋಟೋ ಹಾಕುವಂತೆ ಒತ್ತಡ ಹೇರಿದ್ದಾರೆ ಎನ್ನಲಾಗಿತ್ತು. ಘಟನೆ ಹಿನ್ನಲೆಯಲ್ಲಿ ಪುತ್ತೂರಿನಲ್ಲಿ ಪೋಲೀಸ್ ಬಂದೋಬಸ್ತ್ ಹೆಚ್ಚಾಗಿದೆ.
ದಕ್ಷಿಣಕನ್ನಡ ಜಿಲ್ಲಾ ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಪುತ್ತೂರಿಗೆ ಭೇಟಿ ನೀಡಿದ್ದಾರೆ. ಸ್ಥಳೀಯ ಪೋಲೀಸರಿಂದ ಅಡಿಷನಲ್ ಎಸ್ಪಿ ಡಾ. ಶಿವಕುಮಾರ್ ಮಾಹಿತಿ ಪಡೆದಿದ್ದಾರೆ. ಪ್ರಭಾರ ಎಸ್ಪಿ ಬದ್ರಿನಾಥ್, ಪುತ್ತೂರು ನಗರ ಪೋಲೀಸ್ ಠಾಣೆಗೆ ಭೇಟಿ ಕೊಟ್ಟಿದ್ದಾರೆ.