ಕ್ಯಾಂಟರ್‌ವೊಂದು ಪಲ್ಟಿಯಾದ ಪರಿಣಾಮ ಪೂಜೆ ಮುಗಿಸಿ ವಾಪಸ್​ ಆಗುತ್ತಿದ್ದ ಒಂದೇ ಗ್ರಾಮದ  ಬರೋಬ್ಬರಿ  30 ಮಂದಿಗೆ ಗಾಯಗೊಂಡಿದ್ದಾರೆ.

ಮಂಡ್ಯ,(ಜ.12): ಕ್ಯಾಂಟರ್​ ಪಲ್ಟಿಯಾಗಿ 30 ಮಂದಿ ಗಾಯಗೊಂಡ ಘಟನೆ ಇಂದು (ಭಾನುವಾರ) ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುತ್ತತ್ತಿಯ ಮುತ್ತೆತ್ತರಾಯಸ್ವಾಮಿ ದೇವಾಲಯಕ್ಕೆ ತೆರಳಿದ್ದ ಮಂಡ್ಯ ತಾಲೂಕಿನ ಟಿ.ಮಲ್ಲಿಗೆರೆ ಗ್ರಾಮಸ್ಥರು ಪೂಜೆ ಮುಗಿಸಿ ವಾಪಸ್​ ಬರುವಾಗ ಅವಘಡ ಸಂಭವಿಸಿದೆ. 

ಪ್ರವಾಸಕ್ಕೆ ತೆರಳುತ್ತಿದ್ದ ಬಸ್‌ ಉರುಳಿ 12 ಮಂದಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸದ್ಯ ಗಾಯಾಳುಗಳಿಗೆ ಹಲಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. 

ಈ ಬಗ್ಗೆ ಹಲಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.