Crime News: ಮಗಳ ಮೇಲೆ 32 ವರ್ಷದ ತಂದೆಯಿಂದಲೇ ರೇಪ್: ವಿಕೃತಕಾಮಿ ಬಂಧನ
Latest Crime News: ಆರೋಪಿಯು ಮೊದಲು 2020 ರಲ್ಲಿ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದು ಮತ್ತು ನಂತರ ಪದೇ ಪದೇ ಅವಳಿಗೆ ಕಿರುಕುಳ ನೀಡಿದ್ದಾನೆ. ಮಗಳು ತನಗಾದ ಸಂಕಟವನ್ನು ತಾಯಿಗೆ ಹೇಳಿದ ಬಳಿಕ ವಿಷಯ ಬೆಳಕಿಗೆ ಬಂದಿದೆ.
ನಾಗ್ಪುರ (ಜೂ. 16): ದೇಶಾದ್ಯಂತ ಹೆಣ್ಣು ಮಕ್ಕಳ ಮೇಲಿನ ಅಪರಾಧಗಳಿಗೆ ಕೊನೆಯೇ ಇಲ್ಲದಂತಾಗಿದೆ. ಮತ್ತೊಂದು ಭಯಾನಕ ಘಟನೆಯಲ್ಲಿ, ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದಾನೆ. ಚಾಲಕನಾಗಿ ಕೆಲಸ ಮಾಡುತ್ತಿರುವ 32 ವರ್ಷದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಮಗಳು 7ನೇ ತರಗತಿಯಲ್ಲಿ ಓದುತ್ತಿದ್ದು, ಸುಮಾರು 12 ವರ್ಷ ಪ್ರಾಯದವಳಾಗಿದ್ದಾಳೆ.
ಆರೋಪಿ ತಂದೆ 2020 ರಲ್ಲಿ ಮೊದಲ ಬಾರಿಗೆ ಮಗಳ ಮೇಲೆ ಹಲ್ಲೆ ನಡೆಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ವರದಿಯಾಗಿದೆ. ಈ ಬಳಿಕ ಮತ್ತೆ ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ತನ್ನ ತಾಯಿಗೆ ತನಗಾದ ಅನ್ಯಾಯದ ಬಗ್ಗೆ ವಿವರಿಸಿದ ನಂತರ ವಿಷಯ ಬೆಳಕಿಗೆ ಬಂದಿದ್ದು, ಬಳಿಕ ಆಕೆಯನ್ನು ತಾಯಿ ಸಂಬಂಧಿಕರ ಮನೆಗೆ ಸ್ಥಳಾಂತರಿಸಿದ್ದಾರೆ.
ಇದನ್ನೂ ಓದಿ: ಉಡ್ತಾ ಬೆಂಗಳೂರು ಆಗ್ತಿದ್ಯಾ ಸಿಲಿಕಾನ್ ಸಿಟಿ? ಕೇವಲ 15 ದಿನದಲ್ಲಿ 150 ಡ್ರಗ್ಸ್ ಕೇಸ್
ಮಗಳ ತಾಯಿ ಅಂತಿಮವಾಗಿ ಪೊಲೀಸರನ್ನು ಸಂಪರ್ಕಿಸಿ ತನ್ನ ಪತಿ ವಿರುದ್ಧ ಸೋನೆಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿ ತಂದೆಯನ್ನು ಜೂನ್ 16ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಆಂಧ್ರಪ್ರದೇಶದಲ್ಲೂ ಬಾಲಕಿ ರೇಪ್: ಈ ವರ್ಷದ ಜನವರಿಯಲ್ಲಿ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯಲ್ಲಿ ವರದಿಯಾದ ಇದೇ ರೀತಿಯ ಘಟನೆಯಲ್ಲಿ, ವ್ಯಕ್ತಿಯೊಬ್ಬ ತನ್ನ ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದಾನೆ. ನಂತರ ಪೊಲೀಸರು 42 ವರ್ಷದ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.
ಎರಡು ವರ್ಷಗಳ ಹಿಂದೆ ಆರೋಪಿಯ ಎರಡೂ ಕಿಡ್ನಿಗಳು ವಿಫಲವಾದ ಕಾರಣ ಕಿಡ್ನಿ ಕಾಯಿಲೆ ಇರುವುದು ಪತ್ತೆಯಾಗಿತ್ತು. ಆತನ ಪತ್ನಿ ತನ್ನ ಒಂದು ಕಿಡ್ನಿಯನ್ನು ಆತನಿಗೆ ದಾನ ಮಾಡಿದ ನಂತರ ಆತನ ಜೀವ ಉಳಿದಿತ್ತು.
ಇದನ್ನೂ ಓದಿ: ಮಾನಸಿಕ ಖಿನ್ನತೆ: ರೈಫಲ್‌ನಿಂದ ಶೂಟ್ ಮಾಡಿಕೊಂಡು ಪೇದೆ ಆತ್ಮಹತ್ಯೆ!
ಪತ್ನಿ ತನ್ನ 15 ವರ್ಷದ ಮಗಳನ್ನು ಬಿಟ್ಟು ತನ್ನ ತಾಯಿಯನ್ನು ಭೇಟಿ ಮಾಡಲು ಮನೆಯಿಂದ ಹೊರಟಾಗ, ಆರೋಪಿ ತಂದೆ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿ 10ನೇ ತರಗತಿಯಲ್ಲಿ ಓದುತ್ತಿದ್ದಳು.