ಚಾಮರಾಜನಗರ: ಚಲಿಸುತ್ತಿದ್ದ ಬಸ್ಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಚಾಮರಾಜನಗರ ಬಸ್ ನಿಲ್ದಾಣದಿಂದ ಮೈಸೂರಿನತ್ತ ತೆರಳುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ರಂಗಸ್ವಾಮಿ ಹಿಂಬದಿ ಚಕ್ರಕ್ಕೆ ಹಾರಿದ್ದಾನೆ. ಇದನ್ನು ಚಾಲಕ ಗಮನಿಸಿ ಬ್ರೇಕ್ ಹಾಕಿದರಾದರೂ ಈತನ ಮೇಲೆ ಚಕ್ರ ಉರುಳಿದ್ದರಿಂದ ಸ್ಥಳದಲ್ಲೇ ಅಸುನೀಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಚಾಮರಾಜನಗರ(ನ.16): ಚಲಿಸುತ್ತಿದ್ದ ಬಸ್ ಗೆ ವ್ಯಕ್ತಿಯೊಬ್ಬ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಚಾಮರಾಜನಗರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಮುಂಭಾಗ ನಡೆದಿದೆ. ಚಾಮರಾಜನಗರ ತಾಲೂಕಿನ ಯಾಲಕ್ಕೂರು ಗ್ರಾಮದ ರಂಗಸ್ವಾಮಿ(34) ಮೃತ ದುರ್ದೈವಿ.
ಚಾಮರಾಜನಗರ ಬಸ್ ನಿಲ್ದಾಣದಿಂದ ಮೈಸೂರಿನತ್ತ ತೆರಳುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ರಂಗಸ್ವಾಮಿ ಹಿಂಬದಿ ಚಕ್ರಕ್ಕೆ ಹಾರಿದ್ದಾನೆ. ಇದನ್ನು ಚಾಲಕ ಗಮನಿಸಿ ಬ್ರೇಕ್ ಹಾಕಿದರಾದರೂ ಈತನ ಮೇಲೆ ಚಕ್ರ ಉರುಳಿದ್ದರಿಂದ ಸ್ಥಳದಲ್ಲೇ ಅಸುನೀಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಡೆತ್‌ನೋಟ್ ಬರೆದಿಟ್ಟು ಬ್ರಹ್ಮಕುಮಾರಿ ಆಶ್ರಮದಲ್ಲಿ ಸಾವಿಗೆ ಶರಣಾದ ಸೋದರಿಯರು
ಈ ಘಟನೆಯನ್ನು ಕಂಡ ಸಾರ್ವಜನಿಕರು ಕ್ಷಣ ಕಾಲ ವಿಚಲಿತರಾಗಿದ್ದಾರೆ. ಮಾಹಿತಿ ಅರಿತ ಚಾಮರಾಜನಗರ ಟ್ರಾಫಿಕ್ ಠಾಣೆ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಇನ್ನು,ಆತ್ಮಹತ್ಯೆ ದೃಶ್ಯ ಅಂಗಡಿಯೊಂದರ ಮುಂಭಾಗ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.