ಪಾಟ್ನಾ(ಜ.10): 45 ವರ್ಷದ ವ್ಯಕ್ತಿಯೊಬ್ಬ ನಾಲ್ಕು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದು, ಸದ್ಯ ಈತನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ರಘುನಂದನ್ ಎಂದು ಗುರುತಿಸಲಾಗಿದೆ.

ಸಂಜೆ ಹೊರಗೆ ಹೋಗದಿದ್ರೆ ರೇಪ್‌ ನಡೆಯಲ್ಲ: ಮಹಿಳಾ ಆಯೋಗದ ಸದಸ್ಯೆ ಹೇಳಿಕೆ!

ಪಾಟ್ನಾದ ಗರ್ದಾನಿಭಾಗ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತನಿಖೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆಂದು, ಈ ಠಾಣೆಯ ಮಹಿಳಾ ಪೊಲೀಸ್ ಅಧಿಕಾರಿ ಆರತಿ ಜಯಸ್ವಾಲ್ ತಿಳಿಸಿದ್ದಾರೆ.

ಇತ್ತೀಚೆಗೆ ಬಿಹಾರದಲ್ಲಿ ಅತತ್ಯಾಚಾರ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಹೆಣ್ಮಕ್ಕಳ ಸುರಕ್ಷತೆ ಬಗ್ಗೆ ಭಾರೀ ಸವಾಲೆದ್ದಿದೆ.