ವಾಶ್‌ರೂಮ್‌ ಒಂದರ ಡ್ರೈನೇಜ್‌ ಚೇಂಬರ್‌ನಲ್ಲಿ ಇರಿಸಲಾಗಿದ್ದ ಕಪ್ಪು ಬಣ್ಣದ ಪೌಚ್‌ನಲ್ಲಿ ಪೇಸ್ಟ್‌ ರೂಪದಲ್ಲಿ ಚಿನ್ನ ಪತ್ತೆಯಾಗಿದೆ. ಇದನ್ನು ವಾಶ್‌ ರೂಂನಲ್ಲಿ ಇಟ್ಟಿರುವ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಕಸ್ಟಮ್‌ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಮಂಗಳೂರು(ಫೆ.18): ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಶ್‌ ರೂಂನಲ್ಲಿ ಬಚ್ಚಿಟ್ಟಿದ್ದ 45.44 ಲಕ್ಷ ರು. ಮೌಲ್ಯದ ಚಿನ್ನವನ್ನು ಶನಿವಾರ ಕಸ್ಟಮ್ಸ್‌ ಅಧಿಕಾರಿಗಳು ಕಾರ್ಯಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.

ವಿಮಾನ ನಿಲ್ದಾಣದ ಇಮಿಗ್ರೇಷನ್‌ ಆಗಮನ ಪ್ರದೇಶದ ವಾಶ್‌ ರೂಂನಲ್ಲಿ ಬಚ್ಚಿಟ್ಟಿದ್ದ 45,44,600 ರು. ಮೌಲ್ಯದ 733 ಗ್ರಾಂ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ನಿರ್ಮಾಪಕಿಯಿಂದ ಹಣ ಸುಲಿಯಲು ಕಿಡ್ನಾಪ್‌ ಕಥೆ ಕಟ್ಟಿದ ಕಾರು ಚಾಲಕ; ಮುಂದೆ ನಡೆದಿದ್ದೇನು?