* ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾಕವಳ್ಳಿ ಸಮೀಪ ನಡೆದ ಘಟನೆ* ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ * ಈ ಸಂಬಂಧ ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲು 

ಹೊಳೆನರಸೀಪುರ(ಜೂ.12): ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆತಂಕ್ಕೊಳಗಾದ ವ್ಯಕ್ತಿಯೊಬ್ಬರು ತಾಲೂಕಿನ ಮಾಕವಳ್ಳಿ ಸಮೀಪ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ. 

ತಾಲೂಕಿನ ಕಿನ್ನರಹಳ್ಳಿ ಗ್ರಾಮದ ನಾಗರಾಜು(45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. 

ಶಿವಮೊಗ್ಗ: ನೇಣಿಗೆ ಶರಣಾದ ಮಹಿಳೆ, ಕಾರಣ ನಿಗೂಢ..?

ಹಾಸನದಲ್ಲಿ ವಾಸವಿದ್ದ ನಾಗರಾಜು ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಹೆದರಿ ಮಕವಳ್ಳಿ ಸಮೀಪ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.