ವಯಸ್ಸಾದರೂ ಮದುವೆಯಾಗಲಿಲ್ಲ ಎಂದು ಕೊರಗುತ್ತಿದ್ದರು. ತಿಂಗಳ ಹಿಂದೆಯಷ್ಟೇ ತಾಯಿ ಮೃತಪಟ್ಟಿದ್ದರಿಂದ ಪ್ರಶೀನಾ ಮತ್ತಷ್ಟು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. 

ಬೆಂಗಳೂರು(ಜು.21): ಮದುವೆಯಾಗಲಿಲ್ಲ ಎಂಬ ಕಾರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್‌.ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಯ್ಯಪ್ಪ ನಗರ 2ನೇ ಕ್ರಾಸ್‌ ನಿವಾಸಿ ಪ್ರಶೀನಾ(45) ಆತ್ಮಹತ್ಯೆಗೆ ಶರಣಾದವರು. ಮಂಗಳವಾರ ರಾತ್ರಿ ಊಟ ಮಾಡಿ ಕೋಣೆಯಲ್ಲಿ ಮಲಗಿದ್ದರು. ಬುಧವಾರ ಮುಂಜಾನೆ 3.30ರ ಸುಮಾರಿಗೆ ತಂದೆ ವಾಕಿಂಗ್‌ ಹೋಗಲು ಎದ್ದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ಪ್ರಶೀನಾ ಅವರಿಗೆ 45 ವರ್ಷ ವಯಸ್ಸಾಗಿತ್ತು. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಶೀನಾ, ಕಳೆದ ಎರಡು ವರ್ಷಗಳಿಂದ ಕೆಲಸ ಬಿಟ್ಟು ಮನೆಯಲ್ಲೇ ಇದ್ದರು. ವಯಸ್ಸಾದರೂ ಮದುವೆಯಾಗಲಿಲ್ಲ ಎಂದು ಕೊರಗುತ್ತಿದ್ದರು. ತಿಂಗಳ ಹಿಂದೆಯಷ್ಟೇ ತಾಯಿ ಮೃತಪಟ್ಟಿದ್ದರಿಂದ ಪ್ರಶೀನಾ ಮತ್ತಷ್ಟು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಕೆ.ಆರ್‌.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೇತುವೆ ಮೇಲೆ ಡಿಯೋ ನಿಲ್ಲಿಸಿ, ನದಿಗೆ ಹಾರಿದ ತಾಲೂಕು ಪಂಚಾಯಿತಿ ಸದಸ್ಯನ ಪುತ್ರಿ

ಲಾಡ್ಜ್‌ನಲ್ಲಿ ವೃದ್ಧ ಆತ್ಮಹತ್ಯೆ

ಬೆಂಗಳೂರು: ಲಾಡ್ಜ್‌ನಲ್ಲಿ ವೃದ್ಧರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಮರ್ಷಿಯಲ್‌ ಸ್ಟ್ರೀಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತೆಲಂಗಾಣ ಮೂಲದ ಕ್ರಿಸ್ಟೋಫರ್‌ ಫ್ರಾನ್ಸಿಸ್‌ (74) ಆತ್ಮಹತ್ಯೆಗೆ ಶರಣಾದವರು. ಎರಡು ದಿನದ ಹಿಂದೆ ಶಿವಾಜಿ ನಗರದ ವಿನಿತ ಲಾಡ್ಜ್‌ನಲ್ಲಿ ಕೊಠಡಿ ಬಾಡಿಗೆ ಪಡೆದು ಉಳಿದುಕೊಂಡಿದ್ದರು. ಬುಧವಾರ ಬೆಳಗ್ಗೆ ಲಾಡ್ಜ್‌ ಸಿಬ್ಬಂದಿ ಕೊಠಡಿ ಬಾಗಿಲು ಬಡಿದಾಗ ಪ್ರತಿಕ್ರಿಯೆ ಬಂದಿಲ್ಲ. ಅನುಮಾನಗೊಂಡು ಪರಿಶೀಲಿಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ವ್ಯಕ್ತಿ ತೆಲಂಗಾಣ ಮೂಲದವರು ಎಂಬುದು ತಿಳಿದು ಬಂದಿದೆ.

ಜೀವನದಲ್ಲಿ ಜಿಗುಪ್ಸೆಗೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಜೀವನದಲ್ಲಿ ಜಿಗುಪ್ಸೆಗೊಂಡು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕ್ರಿಕೆಟ್ ತಂಡದಿಂದ ಕೈ ಬಿಟ್ಟಿದ್ದಕ್ಕೆ ಯುವಕ ಆತ್ಮಹತ್ಯೆ, ಸೆಲ್ಫಿ ವಿಡಿಯೋ ಲಭ್ಯ

ಬೀದರ್‌ ಮೂಲದ ಶಿವಾನಿ (21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಕೆಂಗೇರಿಯ ಜೆಎಸ್‌ಎಸ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದಳು. ಬುಧವಾರ ಜೆಎಸ್‌ಎಸ್‌ ವಿದ್ಯಾರ್ಥಿ ನಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗ್ಗೆ ಪರೀಕ್ಷೆಗೆ ಶಿವಾನಿ ಗೈರು ಹಾಜರಾಗಿದ್ದಳು. ಹೀಗಾಗಿ ವಾರ್ಡನ್‌ ಕಾವ್ಯ ಅವರು ಮಧ್ಯಾಹ್ನ 1.20ರ ಸುಮಾರಿಗೆ ಶಿವಾನಿ ಉಳಿದುಕೊಂಡಿದ್ದ ವಿದ್ಯಾರ್ಥಿನಿ ನಿಲಯದ ಕೊಠಡಿ ಬಳಿ ತೆರಳಿದ್ದಾರೆ. ಸೀಲಿಂಗ್‌ ಫ್ಯಾನ್‌ಗೆ ಶಿವಾನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಂಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.