ಎರಡು ಕಾರುಗಳ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ75ರ ಎ. ನಾಗತಿಹಳ್ಳಿ ಸಮೀಪ ಭಾನುವಾರ ರಾತ್ರಿ ಸಂಭವಿಸಿದೆ. 

ನಾಗಮಂಗಲ (ಡಿ.12): ಎರಡು ಕಾರುಗಳ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಎ. ನಾಗತಿಹಳ್ಳಿ ಸಮೀಪ ಭಾನುವಾರ ರಾತ್ರಿ ಸಂಭವಿಸಿದೆ. 

ಬೆಂಗಳೂರಿನಿಂದ ಮದುವೆ ಸಮಾರಂಭ ಮುಗಿಸಿಕೊಂಡು ಹಾಸನ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಎ. ನಾಗತಿಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ವಿಭಜಕಕ್ಕೆ ಅಪ್ಪಳಿಸಿ ಹಾಸನದಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ಕಾರುಗಳಲ್ಲಿದ್ದ ಒಟ್ಟು ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ.

Shivamogga: ಫೋಟೋ ಕ್ಲಿಕ್‌ ಮಾಡುವಾಗಲೇ ಹೃದಯಾಘಾತದಿಂದ ಫೋಟೋಗ್ರಾಫರ್ ಸಾವು

ಘಟನೆಯಲ್ಲಿ ಹಾಸನ ಮೂಲದ ಶ್ರೀನಿವಾಸ ಮೂರ್ತಿ (74), ಪ್ರಭಾಕರ್ (75), ಜಯಂತಿ (60), ಚೈನೈ ಮೂಲದ ಕಿಶೋರ್ (25) ಸೇರಿದಂತೆ ಒಟ್ಟು ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ ಗೌತಮ್, ಕೆವಿನ್, ಶಬ್ರೀಶ್‌ ಹಾಗೂ ಮತ್ತಿಬ್ಬರಿಗೆ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಬಿಂಡಿಗನವಿಲೆ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಧರ್ ನೇತೃತ್ವದ ಸಿಬ್ಬಂದಿಗಳು ಸ್ಥಳೀಯ ಜನರ ನೆರವಿನೊಂದಿಗೆ ಗಾಯಾಳುಗಳನ್ನು ಸಮೀಪದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ, ಘಟನೆಯಲ್ಲಿ ಮೃತಪಟ್ಟ ಓರ್ವ ಮಹಿಳೆ ಸೇರಿದಂತೆ ಐವರ ಮೃತದೇಹಗಳನ್ನು ಇದೇ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. 

ಜೆಡಿಎಸ್‌ ಗ್ರಾಫ್‌ ಏರ್ತಿದೆ, 123 ಸೀಟು ಗೆಲ್ತೀವಿ: ಎಚ್‌.ಡಿ.ಕುಮಾರಸ್ವಾಮಿ

ಸ್ಥಳಕ್ಕೆ ಜಿಲ್ಲಾ ಎಸ್.ಪಿ. ಎನ್. ಯತೀಶ್, ಡಿವೈಎಸ್ಪಿ ಲಕ್ಷ್ಮೀನಾರಾಯಣ ಪ್ರಸಾದ್, ಸಿಪಿಐ ಸುಧಾಕರ್ ಭೇಟಿ ನೀಡಿ ಪರಿಶೀಲಿಸಿದರು. ಭೀಕರ ರಸ್ತೆ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರಕ್ಕೆ ಕೆಲ ಕಾಲ ಅಡ್ಡಿ ಉಂಟಾಗಿತ್ತು. ಸಂಪೂರ್ಣ ಜಖಂಗೊಂಡಿದ್ದ ಎರಡು ವಾಹನಗಳನ್ನು ತೆರವುಗೊಳಿಸಿದ ಪೊಲೀಸರು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಘಟನೆ ಸಂಬಂಧ ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.