ಒಂದೇ ಕುಟುಂಬದ ಐವರು ಆತ್ಮಹತ್ಯೆ: ಮೃತದೇಹಗಳೊಂದಿಗೆ 5 ದಿನ ಕಳೆದ 3 ವರ್ಷದ ಮಗು
* ಪತ್ರಿಕೆಯೊಂದರ ಸಂಪಾದಕರ ಕುಟುಂಬದ ಸದಸ್ಯರು ಆತ್ಮಹತ್ಯೆ
* ಒಂದೇ ಕುಟುಂಬದ ಐವರು ನೇಣಿಗೆ ಶರಣು
* ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
ಬೆಂಗಳೂರು, (ಸೆ.17): ಒಂದೇ ಕುಟುಂಬದ ಐವರು ಸದಸ್ಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬ್ಯಾಡರಹಳ್ಳಿ ಹಳ್ಳಿ ಠಾಣಾ ವ್ಯಾಪ್ತಿಯ ತಿಗರಪಾಳ್ಯದಲ್ಲಿ ನೆಲೆಸಿದ್ದ ಒಂದೇ ಕುಟುಂಬದ ಐವರು (ಸೆ.17) ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗ್ರಾಮ ಪಂಚಾಯತ್ ಸದಸ್ಯೆ ನಾಪತ್ತೆಗೆ ಟ್ವಿಸ್ಟ್ : ಒಂದೇ ಜಾಗದಲ್ಲಿ ಇಬ್ಬರ ಮೃತದೇಹ ಪತ್ತೆ
ಸ್ಥಳೀಯ ಪತ್ರಿಕೆಯೊಂದರ ಸಂಪಾದಕರ ಕುಟುಂಬದ ಸದಸ್ಯರು ಆತ್ಮಹತ್ಯೆ ಮಾಡಿಕೊಂಡವರು. ಅವರ ಕುಟುಂಬದ ಭಾರತಿ (50), ಸಿಂಚನ(33), ಸಿಂಧುರಾಣಿ (30), ಮಧು ಸಾಗರ(27) ಆತ್ಮಹತ್ಯೆ ಮಾಡಿಕೊಂಡವರು. ಜತೆಗೆ ಒಂಭತ್ತು ತಿಂಗಳು ಮಗುವನ್ನು ಸಾಯಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಐದು ದಿನದ ಹಿಂದೆಯೆ ಮನೆಯಲ್ಲಿ ಅತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಮನೆಯಲ್ಲಿ ಒಟ್ಟು 6 ಮಂದಿ ಇದ್ದರು. ಕಳೆದ ಐದು ದಿನಗಳಿಂದ 3 ವರ್ಷದ ಒಂದು ಮಗು ಮಾತ್ರ ಬದುಕಿದ್ದು, ಆಹಾರವಿಲ್ಲದೆ ನಿತ್ರಾಣವಾಗಿದೆ. ಸದ್ಯ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಐದು ದಿನದ ಹಿಂದೆಯೆ ಮನೆಯಲ್ಲಿ ಅತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
"