ರಾಯಚೂರು: ಚಾಕೊಲೇಟ್ ಆಸೆ ತೋರಿಸಿ 52 ವರ್ಷದ ಮುದುಕನಿಂದ 11 ವರ್ಷದ ಅಪ್ರಾಪ್ತೆಯ ಅತ್ಯಾಚಾರ!
ಚಾಕೊಲೇಟ್ ಕೊಡಿಸುವ ನೆಪದಲ್ಲಿ ಕರೆದು 52 ವರ್ಷದ ವ್ಯಕ್ತಿ 11 ವರ್ಷದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿರುವ ಘಟನೆ ಸಿಂಧನೂರಿನಲ್ಲಿ ನಡೆದಿದೆ.
ರಾಯಚೂರು (ಜೂ.21): ಚಾಕೊಲೇಟ್ ಕೊಡಿಸುವ ನೆಪದಲ್ಲಿ ಕರೆದು 52 ವರ್ಷದ ವ್ಯಕ್ತಿ 11 ವರ್ಷದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆ ಸಿಂಧನೂರು ತಾ. ಆರ್.ಎಚ್. ಕ್ಯಾಂಪ್- 3ರಲ್ಲಿ ಈ ಘಟನೆ ಸಂಭವಿಸಿದ್ದು, ಆಟವಾಡುತ್ತಿದ್ದ ಬಾಲಕಿಯನ್ನು ಸ್ಕೂಟಿಯಲ್ಲಿ ಕರೆದುಕೊಂಡು ಹೋಗಿ ಸಪನ್ ಮಂಡಲ್ ( 52) ಎಂಬಾತನಿಂದ ಈ ಕೃತ್ಯ ನಡೆದಿದೆ. ಬಾಲಕಿ ಅಳುತ್ತಾ ಮನೆಗೆ ಬಂದಾಗ ಬಟ್ಟೆಯಲ್ಲಿ ರಕ್ತದ ಕಲೆ ಗಮನಿಸಿದ ಪೋಷಕರು ಬಾಲಕಿಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಆಕೆ ನಿಜಾಂಶ ತಿಳಿಸಿದ್ದಾಳೆ. ತಕ್ಷಣ ಪೋಷಕರು ಆರೋಪಿ ಸಪನ್ ಮಂಡಲ್ ವಿರುದ್ಧ ದೂರು ದಾಖಲು ಮಾಡಿದ್ದಾರೆ.
ದೂರು ದಾಖಲಾದ ಕೂಡಲೇ ಅಲರ್ಟ್ ಆದ ಸಿಂಧನೂರು ಗ್ರಾಮೀಣ ಠಾಣೆ ಪೊಲೀಸರು. ಒಂದು ಗಂಟೆಯೊಳಗೆ ಆರೋಪಿ ಸಪನ್ ಮಂಡಲ್ ನನ್ನ ಬಂಧಿಸಿದ್ದಾರೆ. ಫೋಕ್ಸೋ ಕಾಯ್ದೆ ಅಡಿಯಲ್ಲಿ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Shivamogga: ಇಂಜೆಕ್ಷನ್ ಪಡೆದ ಬಳಿಕ ಕಾಲಿನ ಸ್ವಾಧೀನ ಕಳೆದುಕೊಂಡ ಬಾಲಕಿ! ವೈದ್ಯರ
ಬಾಲಕಿ ಮೇಲೆ ಅತ್ಯಾಚಾರ: ತಂದೆ ಮಗನಿಗೆ 20 ವರ್ಷ ಜೈಲು, ಸಂತ್ರಸ್ತ ಮಗಳ ವಿರುದ್ಧವೇ ಸಾಕ್ಷಿ ನುಡಿದಿದ್ದ ತಾಯಿ !
ಉಡುಪಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಸರದಿ ಅತ್ಯಾಚಾರ ನಡೆಸಿದ ತಂದೆ ಮತ್ತು ಮಗನಿಗೆ ಉಡುಪಿ ಜಿಲ್ಲಾ ಫೋಕ್ಸೋ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ದಾವಣಗೆರೆ ಮೂಲದ ಶಿವಶಂಕರ್ (58) ಮತ್ತು ಸಚಿನ್ (28) ಅವರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ದುರುಳರು.
ನಗರದಲ್ಲಿ ಕೂಲಿ ಮಾಡುತ್ತಿದ್ದ ಒಂಟಿ ಮಹಿಳೆ ಮತ್ತು ಆಕೆಯ ಮಗಳು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ತಾಯಿಯ ಸ್ನೇಹಿತ ಶಿವಶಂಕರ್ ಎಂಬಾತ ಬಂದು ಹೋಗುತ್ತಿದ್ದ. 2020ರ ಏಪ್ರಿಲ್ ನಲ್ಲಿ ಲಾಕ್ಡೌನ್ ಸಂದರ್ಭದಲ್ಲಿ ಬಾಲಕಿಯನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಆಗ ಮನೆಗೆ ಬಂದ ಶಿವಶಂಕರ್ 14 ವರ್ಷ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದ, ಇದು ಆಕ್ಟೋಬರ್ ವರೆಗೆ ನಿರಂತರವಾಗಿ ಮುಂದುವರಿಯಿತು. ಈ ನಡುವೆ ಮೇ ತಿಂಗಳಲ್ಲಿ ಸಚಿನ್ ಕೂಡ ಬಂದು ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಈ ವಿಚಾರವನ್ನು ಬಾಲಕಿ ನೆರೆಮನೆಯವರಲ್ಲಿ ಹೇಳಿದ್ದಳು. ಅವರು ಮಕ್ಕಳ ಸಹಾಯ ವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು.
ಅದರಂತೆ ಮಕ್ಕಳ ರಕ್ಷಣಾಧಿಕಾರಿ ಪ್ರಭಾಕರ ಆಚಾರ್ಯ ಅವರು ಬಾಲಕಿಯನ್ನು ರಕ್ಷಿಸಿ ಆರೋಪಿಗಳ ವಿರುದ್ಧ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕ ಜಯಂತ್ ಎಂ. ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಿಗಳ ವಿರುದ್ಧ ದೋಷಾರೋಪಣ ಪಟ್ಟಿಸಲ್ಲಿಸಿದ್ದರು.
ಸರಣಿ ಹಂತಕ ಉಮೇಶ್ ರೆಡ್ಡಿ ಹಿಂಡಲಗಾ ಜೈಲಿನಿಂದ ಬೆಂಗಳೂರು ಕೇಂದ್ರ ಜೈಲಿಗೆ ಶಿಫ್ಟ್
22 ಸಾಕ್ಷ್ಯಾಧಾರಗಳ ಪೈಕಿ 15 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿತ್ತು. ಸಂತ್ರಸ್ತೆಯ ತಾಯಿ ಮಾತ್ರ ಮಗಳ ವಿರುದ್ಧ ಸಾಕ್ಷಿ ನುಡಿದಿದ್ದರು. ಆದರೆ ಬಾಲಕಿಯ ಹೇಳಿಕೆ ಮತ್ತು ಇತರ ಸಾಂದರ್ಭಿಕ ಸಾಕ್ಷ್ಯಗಳಿಂದ ಆರೋಪ ಸಾಬೀತಾಗಿದ್ದು, ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರು ಆರೋಪಿಗಳಿಗೆ ಅತ್ಯಾಚಾರಕ್ಕೆ 10 ವರ್ಷ ಜೈಲು ಮತ್ತು 10 ಸಾವಿರ ರು. ದಂಡ, ಪೋಕ್ಸೋ ಕಾಯ್ದೆಯಡಿ 20 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರು. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ ಒಂದು ವರ್ಷಗಳ ಹೆಚ್ಚುವರಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಅಲ್ಲದೇ ದಂಡದ ಮೊತ್ತ 40 ಸಾವಿರ ರು.ನಲ್ಲಿ 30 ಸಾವಿರ ರು. ನೊಂದ ಬಾಲಕಿಗೆ ಪರಿಹಾರ ಮತ್ತು 10 ಸಾವಿರ ರು. ಸರ್ಕಾರಕ್ಕೆ ಪಾವತಿಸುವಂತೆ ಹಾಗೂ ನೊಂದ ಬಾಲಕಿಗೆ 3 ಲಕ್ಷ ರು. ಪರಿಹಾರ ನೀಡುವಂತೆ ಸರ್ಕಾರಕ್ಕೆ ಆದೇಶಿಸಿದ್ದಾರೆ. ಪ್ರಾಸಿಕ್ಯೂಶನ್ ಪರ ಉಡುಪಿ ಫೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದಿಸಿದ್ದರು.