Asianet Suvarna News Asianet Suvarna News

ಬೆಂಗಳೂರು: ಅಮಲಿನಲ್ಲಿ ರಸ್ತೆ ಬದಿ ಮಲಗಿದ್ದ ವ್ಯಕ್ತಿ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಮೂಲದ ಸುರೇಶ್ ಕೊಲೆಯಾದ ದುರ್ದೈವಿ. ರಾಜಾಜಿನಗರದ ನವರಂಗ್‌ ಸಿಗ್ನಲ್‌ ಸಮೀಪದ ನೇತ್ರಧಾಮ ಆಸ್ಪತ್ರೆ ಬಳಿ ಶನಿವಾರ ಮುಂಜಾನೆ ಈ ಘಟನೆ ನಡೆದಿದೆ.

55 Year Old Man Killed in Bengaluru grg
Author
First Published Nov 12, 2023, 9:56 AM IST

ಬೆಂಗಳೂರು(ನ.11): ಮದ್ಯದ ಅಮಲಿನಲ್ಲಿ ರಸ್ತೆ ಬದಿ ಮಲಗಿದ್ದ ಹೋಟೆಲ್ ಕಾರ್ಮಿಕನ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಕೊಲೆಗೈದಿರುವ ಘಟನೆ ರಾಜಾಜಿನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಮೂಲದ ಸುರೇಶ್ (55) ಕೊಲೆಯಾದ ದುರ್ದೈವಿ. ರಾಜಾಜಿನಗರದ ನವರಂಗ್‌ ಸಿಗ್ನಲ್‌ ಸಮೀಪದ ನೇತ್ರಧಾಮ ಆಸ್ಪತ್ರೆ ಬಳಿ ಶನಿವಾರ ಮುಂಜಾನೆ ಈ ಘಟನೆ ನಡೆದಿದೆ.

ಕೆಲ ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಸುರೇಶ್, ಬಸವೇಶ್ವರನಗರದ ಶಂಕರಮಠ ಸಮೀಪದ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಮೀಪದಲ್ಲೇ ಬಾಡಿಗೆ ಕೊಠಡಿಯಲ್ಲಿ ನೆಲೆಸಿದ್ದರು. ಮದ್ಯದ ಚಟಕ್ಕೆ ಬಿದ್ದಿದ್ದ ಸುರೇಶ್‌ ನಿತ್ಯ ಮದ್ಯ ಸೇವಿಸಿ ಎಲ್ಲೆಂದರಲ್ಲಿ ಮಲಗುತ್ತಿದ್ದರು. ಎಚ್ಚರವಾದಾಗ ಎದ್ದು ಕೊಠಡಿಗೆ ಹೋಗಿ ಮಲಗುತ್ತಿದ್ದರು.

ಬೆಂಗಳೂರು: ಅಕ್ರಮ ಸಂಬಂಧ ಪ್ರಶ್ನಿಸಿದ ಪತ್ನಿಯ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ್ದ ಪತಿ ಸೆರೆ

ಕಲ್ಲು ಎತ್ತಿಹಾಕಿ ಕೊಲೆ:

ಶುಕ್ರವಾರ ಹೋಟೆಲ್‌ ಕೆಲಸ ಮುಗಿಸಿ ರಾತ್ರಿ ಕಂಠಪೂರ್ತಿ ಮದ್ಯ ಸೇವಿಸಿದ್ದ ಸುರೇಶ್‌, ನವರಂಗ್ ಸಿಗ್ನಲ್ ಬಳಿಯ ನೇತ್ರಧಾಮ ಆಸ್ಪತ್ರೆ ಬಳಿ ಮಲಗಿದ್ದರು. ಈ ವೇಳೆ ದುಷ್ಕರ್ಮಿಗಳು ಅವರ ಮೇಲೆ ಕತ್ತು ಎತ್ತಿಹಾಕಿ ಹತ್ಯೆಗೈದು ಪರಾರಿಯಾಗಿದ್ದಾರೆ. ಶನಿವಾರ ಮುಂಜಾನೆ 3 ಗಂಟೆ ಸುಮಾರಿಗೆ ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳದ ಸುತ್ತಮುತ್ತಲ ಕಟ್ಟಡಗಳ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಲಾಗಿದೆ. ರಾಜಾಜಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow Us:
Download App:
  • android
  • ios