ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಡಿ.ಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದ ಘಟನೆ 

ಹೊಸಕೋಟೆ(ಮೇ.14): ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಡಿ.ಶೆಟ್ಟಹಳ್ಳಿ ಗ್ರಾಮದಲ್ಲಿ ನಿನ್ನೆ(ಶನಿವಾರ) ನಡೆದಿದೆ. ಕೃಷ್ಣಪ್ಪಗೆ (56) ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ಆದಿತ್ಯ ಎಂಬಾತನೇ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. 

ಕಳೆದ ರಾತ್ರಿ ಚುನಾವಣೆ ಸೋಲಿನ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕಕ್ಕೇರಿ ಚಾಕುವಿನಿಂದ ಇರಿದು ದೊಡ್ಡಪ್ಪನನ್ನ ಮಗ ಕೊಲೆ ಮಾಡಿದ್ದಾನೆ. ಚುನಾವಣೆಯಲ್ಲಿ ಮತ ಹಾಕಿಲ್ಲ ಅನ್ನೋ ವಿಚಾರಕ್ಕೆ ಅಣ್ಣ ತಮ್ಮಂದಿರ ನಡುವೆ ಕಿರಿಕ್ ನಡೆದಿತ್ತು. 

ರಾಯಚೂರು: ಸಹೋದರರ ನಡುವೆ ಜಗಳ ಕೊಲೆಯಲ್ಲಿ ಅಂತ್ಯ

ಗ್ರಾಮದ ಕೃಷ್ಣಪ್ಪ, ಗಣೇಶಪ್ಪ ಎಂಬುವವರ ನಡುವೆ ಗಲಾಟೆ ನಡೆದಿದ್ದ ಆರಂಭವಾಗಿತ್ತು. ಈ ವೇಳೆ ಕೃಷ್ಣಪ್ಪಗೆ ಗಣೆಶಪ್ಪನ ಮಗ ಆದಿತ್ಯ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.