ಬುದ್ದಿಮಾಂದ್ಯ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಈ ವೇಳೆ ಬಾಲಕಿ ಜೋರಾಗಿ ಕೂಗಾಡಿದ್ದು ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿ ಆರೋಪಿಯನ್ನು ಹಿಡಿದು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು. 

ಮೈಸೂರು(ಮಾ.30): ಬುದ್ದಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಮೇಲೆ ಆರೋಪಿಯನ್ನ ಹಿಡಿದು ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಧರ್ಮದೇಟು ನೀಡಿದ ಘಟನೆ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಿನ್ನೆ(ಬುಧವಾರ) ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಹದೇವ (57) ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯಾಗಿದ್ದಾನೆ. ಮಹದೇವ ಬುದ್ದಿಮಾಂದ್ಯ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಜೋರಾಗಿ ಕೂಗಾಡಿದ್ದು ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ. ನಂತರ ಆರೋಪಿಯನ್ನು ಹಿಡಿದು ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. 

ಬಾಯ್‌ಫ್ರೆಂಡನ್ನು ಮರಕ್ಕೆ ಕಟ್ಟಿ ಯುವತಿ ಮೇಲೆ ಇಬ್ಬರು ಕಾಮುಕರಿಂದ ರೇಪ್‌

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹುಣಸೂರು ಠಾಣಾ ಪೊಲೀಸರು ಆರೋಪಿ ಮಹದೇವನನ್ನು ವಶಕ್ಕೆ ಪಡೆದಿದ್ದಾರೆ. ತೀವ್ರ ಅಸ್ವಸ್ಥನಾಗಿದ್ದ ಮಹದೇವವನ್ನ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.