Asianet Suvarna News Asianet Suvarna News

ಬಿಜೆಪಿ ನಾಯಕರ ಗಂಭೀರ ಪ್ರಕರಣ ಕೈಬಿಟ್ಟ ಸರ್ಕಾರ; ಸಿಂಹ, ರೇಣುಕಾಚಾರ್ಯ ಸೇಫ್!

ಸಚಿವ ಸಂಪುಟದ ತೀರ್ಮಾನ/ ಹೋರಾಟಗಾರರ ಹೆಸರಿನಲ್ಲಿ ಬಿಜೆಪಿ ನಾಯಕರ ಮೇಲಿನ ಪ್ರಕರಣ ವಾಪಸ್/ ಪ್ರತಾಪ್ ಸಿಂಹ, ರೇಣುಕಾಚಾರ್ಯಗೆ ರಿಲೀಫ್

62 criminal cases against Karnataka BJP leaders revoked
Author
Bengaluru, First Published Sep 3, 2020, 10:12 PM IST

ಬೆಂಗಳೂರು(ಸೆ. 03)  ಬಿಜೆಪಿ ಶಾಸಕರು, ಸಚಿವರು, ಮುಖಂಡರ ಮೇಲೆ ಇದ್ದ  62 ಕ್ರಿಮಿನಲ್ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.  ಹೋರಾಟಗಾರರ ಹೆಸರಲ್ಲಿ ಬಿಜೆಪಿ ನಾಯಕರು, ಬೆಂಬಲಿಗರ ವಿರುದ್ಧ ದಾಖಲಾದ ಗಂಭೀರ ಸ್ವರೂಪದ ಪ್ರಕರಣಗಳೂ ವಾಪಸ್  ತೆಗೆದುಕೊಳ್ಳಲಾಗಿದೆ.

ಹೋರಾಟಗಾರರ ಮೇಲಿನ ಪ್ರಕರಣಗಳನ್ನು ವಾಪಾಸು ಪಡೆಯಲಾಗುತ್ತಿದೆ ಎಂದು ಹೇಳುತ್ತಿರುವ ಸರ್ಕಾರ ಅದೇ ಸೋಗಿನಲ್ಲಿ ತನ್ನ ಪಕ್ಷದ ನಾಯಕರ ಮೇಲಿನ ಪ್ರಕರಣಗಳನ್ನೂ ವಾಪಾಸು ಪಡೆಯುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಕಳೆದ ವಾರ ನಡೆದ ಸಂಪುಟ ಸಭೆಯಲ್ಲಿ ಸರ್ಕಾರ 62 ಕ್ರಿಮಿನಲ್ ಮೊಕದ್ದಮೆಗಳನ್ನು ವಾಪಸು ಪಡೆಯಲು ನಿರ್ಧರಿಸಿದೆ. 

ಹುಣಸೂರು ವಿದ್ಯಾರ್ಥಿಗಳ ಪ್ರಕರಣ, ಬೆಳಗಾವಿ ನಗರ ಮಾರ್ಕೆಟ್‌ ಗಲಾಟೆ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿದ್ದರೆ, ವೈಯಕ್ತಿಕ ಪ್ರಕರಣಗಳು ಹಾಗೂ ಗಂಭೀರ ಸ್ವರೂಪದ ಮೊಕದ್ದಮೆಗಳನ್ನು ವಾಪಸ್ ಪಡೆದಿಲ್ಲ ಎಂದು ಸರ್ಕಾರ ಸಮಜಾಯಿಶಿ ನೀಡಿತ್ತು. 

ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದ ಪ್ರಭಾವಿ ಶಾಸಕನ ಬರ್ತಡೆ ಪಾರ್ಟಿಯಲ್ಲಿ ಡ್ರಗ್ಸ್ ಡೀಲರ್!

ಆದರೆ ಹೋರಾಟಗಾರರ ಹೆಸರಲ್ಲಿ ಸರ್ಕಾರ ತನ್ನ ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರ ವಿರುದ್ಧದ ಗಂಭೀರ ಸ್ವರೂಪದ ಪ್ರಕರಣಗಳನ್ನೂ ಹಿಂದಕ್ಕೆ ಪಡೆದುಕೊಂಡಿದೆ.  ಈ ಬಹುತೇಕ ಕ್ರಿಮಿನಲ್ ಪ್ರಕರಣಗಳು ಗಂಭೀರ ಸ್ವರೂಪದ್ದಾಗಿವೆ.  ಡಿಜಿ,ಐಜಿಪಿ ಕಚೇರಿ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಕಾನೂನು ಇಲಾಖೆ ಬಹುತೇಕ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವುದು ಸೂಕ್ತವಲ್ಲ ಎಂಬ ಅಭಿಪ್ರಾಯವೂ ಇದೆ.

ಆದರೆ ಜುಲೈ 22ರಂದು ನಡೆದ  ಸಂಪುಟ ಉಪ ಸಮಿತಿ ಸಭೆಯಲ್ಲಿ 62 ಪ್ರಕರಣಗಳನ್ನು ಹಿಂಪಡೆಯುವುದು ಸೂಕ್ತ ಎಂದು ಸಂಪುಟ ಸಭೆಗೆ ಶಿಫಾರಸು ಮಾಡಿತ್ತು.  ಅದರಂತೆ ಸಂಪುಟ ಸಭೆ 62 ರಾಜ್ಯದ ವಿವಿಧ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳನ್ನು ವಾಪಸು ಪಡೆಯಲು ನಿರ್ಧರಿಸಿದೆ.

ಪ್ರಕರಣ ಮುಕ್ತರಾದ ಬಿಜೆಪಿ ನಾಯಕರಾರು?:

ಪ್ರತಾಪ್ ಸಿಂಹ ವಿರುದ್ಧದ ಕೇಸ್ ವಾಪಸ್; ಸಂಪುಟ ಸಭೆಯಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ಮೇಲಿನ ಪ್ರಕರಣವನ್ನೂ ವಾಪಸು ಪಡೆಯಲಾಗಿದೆ. ಮೈಸೂರು ಸಂಸದ ಪ್ರತಾಪ್‌ ಸಿಂಹ ಡಿ.3, 2017ರಂದು ಹುಣಸೂರು ಪಟ್ಟಣದಲ್ಲಿ ಹನುಮ ಜಯಂತಿ ಪ್ರಯುಕ್ತ ಮೆರವಣಿಗೆ ನಡೆಸಲು ಯತ್ನಿಸಿದ್ದರು. 114 ನಿಷೇಧಾಜ್ಞೆ ಇದ್ದರೂ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಲು ಯತ್ನಿಸಿದ್ದರು. ಈ ವೇಳೆ ಸಂಸದ ಪ್ರತಾಪ್ ಸಿಂಹ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಮೇಲೆ ಕಾರನ್ನು ವೇಗವಾಗಿ ನುಗ್ಗಿಸಿದ ಆರೋಪಕ್ಕೊಳಗಾಗಿದ್ದರು. 

ಈ ಸಂಬಂಧ ಬಿಳಿಕೆರೆ ಠಾಣೆಯಲ್ಲಿ ಸಂಸದ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು.  ಸಂಸದ ಪ್ರತಾಪ್ ಸಿಂಹ ವಿರುದ್ಧ ಐಪಿಸಿ 279, 353, 188 ಮತ್ತು 332ರಡಿ ಪ್ರಕರಣ ದಾಖಲಿಸಲಾಗಿತ್ತು.  ಇದೀಗ ಮೊನ್ನೆ ನಡೆದ ಸಂಪುಟ ಸಭೆಯಲ್ಲಿ ಈ ಪ್ರಕರಣಗಳನ್ನು ವಾಪಸು ಪಡೆಯಲಾಗಿದೆ. ಅದೇ ರೀತಿ ಹನುಮ ಜಯಂತಿ ಪ್ರಯುಕ್ತ ಮೆರವಣಿಗೆ ನಡೆಸಿದ ಹಿನ್ನೆಲೆ ಹುಣಸೂರು ಪಟ್ಟಣ ಠಾಣೆಯಲ್ಲಿ ದಾಖಲಾಗಿರುವ ಬೆಂಬಲಿಗರ ವಿರುದ್ಧದ ಪ್ರಕರಣವನ್ನೂ ವಾಪಸು ಪಡೆಯಲು ನಿರ್ಧರಿಸಲಾಗಿದೆ.

ರೇಣುಕಾಚಾರ್ಯ ಬೆಂಬಲಿಗರ ಕೇಸ್ ವಾಪಾಸ್: ಸಿಎಂ ರಾಜಕೀಯ ಕಾರ್ಯದರ್ಶಿ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಬೆಂಬಲಿಗರ ವಿರುದ್ಧ ದಾಖಲಾಗಿರುವ ಮೊಕದ್ದಮೆಯನ್ನು ಸರ್ಕಾರ ಹಿಂದಕ್ಕೆ ಪಡೆದಿದೆ. 

ಫೆ.6, 2019ರಂದು ದಾವಣಗೆರೆಯ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಎಂ.ಪಿ.ರೇಣುಕಾಚಾರ್ಯರ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ರೇಣುಕಾಚಾರ್ಯರ ಜಯಗಳಿಸಿದ್ದಕ್ಕಾಗಿ ಬಿಜೆಪಿ ಬೆಂಬಲಿಗರು ಹೊನ್ನಾಳಿ ಪಟ್ಟಣದಲ್ಲಿ ಜೈಕಾರ ಹಾಕುತ್ತಾ  ಗುಂಪು ಕಟ್ಟಿಕೊಂಡಿದ್ದರು.

ಕಾಂಗ್ರೆಸ್ ಮುಖಂಡರಾದ ಎಚ್‌.ಪಿ.ಮಂಜಪ್ಪ ಮನೆ ಹತ್ತಿರ ಬೈದಾಡಿಕೊಂಡು ಸುತ್ತಾಡಿದ್ದರು. ಮುಖಂಡರ ಮನೆಯವರೊಂದಿಗೆ ಜಗಳ ಮಾಡಿ, ಹಲ್ಲೆ ಮಾಡಿ ಕೊಲೆ ಮಾಡಬೇಕೆಂಬ ಉದ್ದೇಶದಿಂದ ಮಂಜಪ್ಪರ ಸಹೋದರನ ಅಂಗಡಿ ಮುಂದೆ ಪಟಾಕಿ ಸಿಡಿಸಲು ಹೋಗಿದ್ದರು. ಆ ವೇಳೆ ಅಲ್ಲಿ ಜಗಳವಾಡಿ ಇಬ್ಬರಿಗೆ ಚಾಕು ಇರಿದ ಆರೋಪ

ಈ ಸಂಬಂಧ ಹೊನ್ನಾಳಿ ಠಾಣೆಯಲ್ಲಿ ಮೊಕದ್ದಮೆ ಸಂಖ್ಯೆ 231/2018 ಕಲಂನಡಿ  143, 144, 147, 148 ಮತ್ತು 504, 307, 323, 324 ಪ್ರಕರಣ ದಾಖಲಾಗಿತ್ತು. ಈ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿದೆ.

ಶಾಸಕ ಬೆಂಬಲಿಗರ ವಿರುದ್ಧದ ಕೇಸ್ ವಾಪಸು

* ಸಚಿವ ಬಿ.ಸಿ.ಪಾಟೀಲ್ ಬೆಂಬಲಿಗರ ಮೇಲೆ ಹಾವೇರಿಯ ರಟ್ಟಿಹಳ್ಳಿ ಠಾಣೆಯಲ್ಲಿ ಗಣೇಶ ವಿಸರ್ಜನೆ ವೇಳೆ ದೊಂಬಿ ನಡೆಸಿದ ಹಿನ್ನೆಲೆ ದಾಖಲಾದ ಪ್ರಕರಣ ವಾಪಸ್ ಪಡೆದುಕೊಳ್ಳಲಾಗಿದೆ. ಸರ್ಕಾರಿ ವಾಹನ ಜಖಂ, ಆಸ್ತಿಪಾಸ್ತಿ ನಾಶ, ಅಧಿಕಾರೊಗಳಿಗೆ ಗಾಯ ಮಾಡಿದ ಗಂಭೀರ ಆರೋಪ ಇತ್ತು. ಪ್ರಕರಣ ವಾಪಸು ಪಡೆಯಲು ಸಚಿವರು ಮನವಿ ಮಾಡಿದ್ದರು.

* ಮೈಸೂರು ಹುಣಸೂರಿನಲ್ಲಿ ಹನುಮ ಜಯಂತಿ ಮೆರವಣಿಗೆ ವೇಳೆ ದಾಂಧಲೆ ನಡೆಸಿ, ಕೋಮು ಗಲಭೆಗೆ ಪ್ರಚೋದಿಸಿದ ಆರೋಪದಡಿ ಹಿಂದೂ ಕಾರ್ಯಕರ್ತರ ಮೇಲಿನ ಪ್ರಕರಣಗಳು ವಾಪಸು

* ಧಾರವಾಡ ಬಿಜೆಪಿ ಶಾಸಕ ಅಮೃತ್ ದೇಸಾಯಿ‌ ಬೆಂಬಲಿಗರಿಂದ 2015ರಲ್ಲಿ ಗಣೇಶ ವಿಸರ್ಜನೆ ವೇಳೆ ಮಸೀದಿಗಳಿಗೆ ಕಲ್ಲು ತೂರಾಟ ಮಾಡಿ, ಜೀವ ಬೆದರಿಕೆ ಹಾಕಿದ ಪ್ರಕರಣ ವಾಪಸ್

* ಧಾರವಾಡ ಬಿಜೆಪಿ ಶಾಸಕ ಅಮೃತ್ ದೇಸಾಯಿ ಬೆಂಬಲಿಗರಿಂದ 2015ರಲ್ಲಿ ಗಣೇಶ ವಿಸರ್ಜನೆ ವೇಳೆ ಮಸೀದಿಗಳಿಗೆ ಕಲ್ಲು ತೂರಾಟ ಮಾಡಿ, ಜೀವ ಬೆದರಿಕೆ ಹಾಕಿದ ಪ್ರಕರಣ ವಾಪಸ್

Follow Us:
Download App:
  • android
  • ios