Asianet Suvarna News Asianet Suvarna News

ತುಮಕೂರು: ಚಿನ್ನದ ಸರಕ್ಕೆ ತಲೆ ಮೇಲೆ ಕಲ್ಲು ಎತ್ತಿಹಾಕಿ ವೃದ್ಧೆ ಕೊಂದ ದುರುಳರು..!

ಹುಣಸೆಕಟ್ಟೆ ಗ್ರಾಮದಲ್ಲಿ ನಡೆದ ದೇವರ ಉತ್ಸವ ಮುಗಿಸಿಕೊಂಡು ರಾತ್ರಿ ಮನೆಗೆ ತೆರಳುವಾಗ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ವೃದ್ಧೆಯನ್ನ ಕೊಲೆಗೈದು ಮೈ ಮೇಲೆ ಇದ್ದ ಚಿನ್ನದ ಸರ ಕದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. 

68 years old woman killed in tumakuru grg
Author
First Published Aug 11, 2024, 12:40 PM IST | Last Updated Aug 11, 2024, 12:40 PM IST

ತುಮಕೂರು(ಆ.11):  ತಲೆ ಮೇಲೆ ಕಲ್ಲು ಎತ್ತಿಹಾಕಿ ವೃದ್ಧೆಯನ್ನ ದುಷ್ಕರ್ಮಿಗಳು ಕೊಲೆ ಮಾಡಿದ ಘಟನೆ ಜಿಲ್ಲೆಯ ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಜೋಗಯ್ಯನ ಪಾಳ್ಯದಲ್ಲಿ ಇಂದು(ಭಾನುವಾರ) ನಡೆದಿದೆ. ಮದ್ದಮ್ಮ (68) ಮೃತ ವೃದ್ಧೆ.

ಹುಣಸೆಕಟ್ಟೆ ಗ್ರಾಮದಲ್ಲಿ ನಡೆದ ದೇವರ ಉತ್ಸವ ಮುಗಿಸಿಕೊಂಡು ರಾತ್ರಿ ಮನೆಗೆ ತೆರಳುವಾಗ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ವೃದ್ಧೆಯನ್ನ ಕೊಲೆಗೈದು ಮೈ ಮೇಲೆ ಇದ್ದ ಚಿನ್ನದ ಸರ ಕದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. 

ಸಾರಿಗೆ ಬಸ್ ಹರಿದು ತುಂಡಾದ ವೃದ್ಧೆಯ ಕಾಲು! ಸಹಾಯಕ್ಕೆ ಬಾರದೆ ವಿಡಿಯೋ ಮಾಡುತ್ತಾ ನಿಂತ ಸಾರ್ವಜನಿಕರು!

ನಿರ್ಮಾಣ ಹಂತದ ಕಟ್ಟಡದ ಬಳಿ ಶವ ಎಸೆದು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿರಾ ಪೊಲೀಸರು ತನಿಖೆಯನ್ನ ಆರಂಭಿಸಿದ್ದಾರೆ. 

Latest Videos
Follow Us:
Download App:
  • android
  • ios