ದೇವಸ್ಥಾನದ ಬಳಿ ಬಿರುಗಾಳಿಗೆ ಉರುಳಿದ ಬೃಹತ್ ಮರ: 7 ಭಕ್ತರು ಬಲಿ, 20 ಕ್ಕೂ ಹೆಚ್ಚು ಮಂದಿಗೆ ಗಾಯ
ಈ ಘಟನೆಯಲ್ಲಿ 35 ರಿಂದ 40 ಜನರು ಶೆಡ್ ಅಡಿಯಲ್ಲಿ ಸಿಲುಕಿಕೊಂಡಿದ್ದರು ಮತ್ತು 7 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಅಕೋಲಾ, ಮಹಾರಾಷ್ಟ್ರ (ಏಪ್ರಿಲ್ 10, 2023): ಮಹಾರಾಷ್ಟ್ರದ ಅಕೋಲಾದಲ್ಲಿ ಭಾನುವಾರ ಟಿನ್ ಶೆಡ್‌ನ ಮೇಲೆ ಬೃಹತ್ ಮರವೊಂದು ಬಿದ್ದು ಕನಿಷ್ಠ 7 ಜನರು ಬಲಿಯಾಗಿದ್ದಾರೆ. ಅಲ್ಲದೆ, ಸುಮಾರು 23 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾತ್ರಿ 7 ಗಂಟೆ ಸುಮಾರಿಗೆ ದೇವಸ್ಥಾನದ ಮುಂಭಾಗದಲ್ಲಿ ನಡೆಯುತ್ತಿದ್ದ ಧಾರ್ಮಿಕ ಸಮಾರಂಭದಲ್ಲಿ ಈ ಘಟನೆ ನಡೆದಿದ್ದು, ಭಾರೀ ಮಳೆ ಮತ್ತು ಬಲವಾದ ಗಾಳಿಯಿಂದಾಗಿ ಹಳೆಯ ಬೇವಿನ ಮರವೊಂದು ತಗಡಿನ ಶೆಡ್‌ನ ಮೇಲೆ ಬಿದ್ದಿದ್ದು, ಅದರ ಅಡಿಯಲ್ಲಿ ಹಲವಾರು ಭಕ್ತರು ಆಶ್ರಯ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ಈ ಹೃದಯವಿದ್ರಾವಕ ಘಟನೆಯಲ್ಲಿ 35 ರಿಂದ 40 ಜನರು ಶೆಡ್ (Shed) ಅಡಿಯಲ್ಲಿ ಸಿಲುಕಿಕೊಂಡಿದ್ದರು ಮತ್ತು 7 ಜನರು ಪ್ರಾಣ ಕಳೆದುಕೊಂಡಿದ್ದಾರೆ (Death) ಎಂದು ಪೊಲೀಸರು ಹೇಳಿದ್ದಾರೆ. ಇನ್ನು ಐವರನ್ನು ಅಕೋಲಾ ಮೆಡಿಕಲ್ ಕಾಲೇಜಿಗೆ (Akola Medical College) ದಾಖಲಿಸಲಾಗಿದ್ದು, ಗಾಯಾಳುಗಳು (Injured) ಚಿಕಿತ್ಸೆ (Treatment) ಪಡೆಯುತ್ತಿದ್ದಾರೆ. ಅಲ್ಲದೆ, ಇನ್ನೂ ಅನೇಕರು ಗಾಯಗೊಂಡಿದ್ದು, ಅವರೆಲ್ಲರೂ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನು ಓದಿ: ಕಿಚ್ಚ ಸುದೀಪ್‌ಗೆ ಬೆದರಿಕೆ ಪತ್ರ: ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು ಸ್ವಿಫ್ಟ್ ಕಾರು ಬಳಸಿ ಕೃತ್ಯ..!
ಘಟನೆಯ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ತಕ್ಷಣ ರಕ್ಷಣಾ ಕಾರ್ಯಕ್ಕೆ ತುರ್ತು ಸೇವೆಗಳನ್ನು ಸ್ಥಳಕ್ಕೆ ಕಳಿಸಿದರು. ಹಾಗೆ, ಗಾಳಿಗೆ ಬಿದ್ದಿದ್ದ ಮರದ ಕಾಂಡ ಮತ್ತು ಕುಸಿದ ಶೆಡ್ ಅನ್ನು ಮೇಲೆತ್ತಲು ಜೆಸಿಬಿ ಯಂತ್ರಗಳನ್ನು ತರಲಾಯಿತು ಎಂದೂ ವರದಿಯಾಗಿದೆ. ಇನ್ನು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Maharashtra Deputy Chief Minister Devendra Fadnavis) ಸಾವಿಗೆ ಸಂತಾಪ ಸೂಚಿಸಿದ್ದು, ಏಕನಾಥ್ ಶಿಂಧೆ (Eknath Shinde) ನೇತೃತ್ವದ ಮಹಾರಾಷ್ಟ್ರ ಸರ್ಕಾರವು (Maharashtra Government) ಮೃತ ಸಂತ್ರಸ್ತರ ಕುಟುಂಬಸ್ಥರಿಗೆ ಪರಿಹಾರ ಧನ ನೀಡಲಿದೆ ಎಂದು ಘೋಷಿಸಿದ್ದಾರೆ.
"ಅಕೋಲಾ ಜಿಲ್ಲೆಯ ಪರಾಸ್‌ನಲ್ಲಿ ಧಾರ್ಮಿಕ ಸಮಾರಂಭಕ್ಕಾಗಿ ಕೆಲವರು ಸೇರಿದ್ದ ವೇಳೆ ಟಿನ್ ಶೆಡ್‌ನ ಮೇಲೆ ಮರ ಬಿದ್ದು ಕೆಲವು ಭಕ್ತರು ಮೃತಪಟ್ಟಿದ್ದಾರೆ ಎಂದು ವರದಿಯಾಗಿರುವುದು ನೋವಿನ ಸಂಗತಿಯಾಗಿದೆ’’ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ANI ಉಲ್ಲೇಖಿಸಿದೆ.
ಇದನ್ನೂ ಓದಿ: Crime: ರೇಪ್ ಮಾಡಿ ಮಹಿಳೆಗೆ ಬೆಂಕಿ ಹಚ್ಚಿದ ರಾಕ್ಷಸ: ಆಸ್ಪತ್ರೆಯಲ್ಲಿ ಬಲಿಯಾದ ಸಂತ್ರಸ್ತೆ
ಅಲ್ಲದೆ, ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಲು ಸಮನ್ವಯ ಸಾಧಿಸುತ್ತಿದ್ದಾರೆ. ನಾವು ನಿರಂತರವಾಗಿ ಅವರೊಂದಿಗೆ ಸಂಪರ್ಕದಲ್ಲಿದ್ದೇವೆ. ಇನ್ನು, ಕೆಲ ಗಾಯಾಳುಗಳನ್ನು ಜಿಲ್ಲಾ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಣ್ಣ ಪುಟ್ಟ ಗಾಯಾಳುಗಳಿಗೆ ಬಾಳಾಪುರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದೂ ದೇವೇಂದ್ರ ಫಡ್ನವೀಸ್ ತಿಳಿಸಿದರು.
ಹಾಗೆ, ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು ನೀಡಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ನಿರ್ಧರಿಸಿದ್ದಾರೆ ಎಂದೂ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಇದನ್ನೂ ಓದಿ: ಹಾವಿನ ತಲೆ ಕಚ್ಚಿ ಹಿಂಸಿಸಿ ಕೊಂದ ದುರುಳರು: ವಿಡಿಯೋ ವೈರಲ್ ಬೆನ್ನಲ್ಲೇ ಮೂವರ ಅರೆಸ್ಟ್