Manipur: ಒಂದಲ್ಲ.. ಎರಡಲ್ಲ.. 7 ಅತ್ಯಾಚಾರ ನಡೆದಿದೆ: ಬಗೆದಷ್ಟೂ ಬಯಲಿಗೆ ಬರ್ತಿದೆ ರೇಪ್ ಕೇಸ್!
ಮೇ 3 ರಂದು ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭವಾದಾಗಿನಿಂದ ಕನಿಷ್ಠ 7 ಕುಕಿ-ಜೋಮಿ ಮಹಿಳೆಯರು ಅತ್ಯಾಚಾರಕ್ಕೊಳಗಾಗಿದ್ದಾರೆ ಎಂದು ವಿವಿಧ ಸಂಘಗಳು ಹೇಳಿಕೊಂಡಿವೆ. ಆದರೆ, ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ಕೇವಲ ಒಂದು ಅತ್ಯಾಚಾರದ ಘಟನೆ ವರದಿಯಾಗಿದೆ ಎಂದು ತಿಳಿಸಿದ್ದಾರೆ.
ನವದೆಹಲಿ (ಜುಲೈ 24, 2023): ಮೇ 3 ರಿಂದ ಮಣಿಪುರದಲ್ಲಿ ಹಿಂಸಾಚಾರ ನಡೀತಾನೇ ಇದೆ. ಈಗ ರೇಪ್ ಕೇಸ್‌ಗಳು ಇನ್ನೂ ಹೆಚ್ಚು ಸದ್ದು ಮಾಡುತ್ತಿವೆ. ಮೇ 4 ರಂದು ಮಣಿಪುರದ ಕಾಂಗ್‌ಪೊಕ್ಪಿಯಲ್ಲಿ ಕುಕಿ ಸಮುದಾಯದ ಇಬ್ಬರು ಮಹಿಳೆಯರನ್ನು ಜನಸಮೂಹವು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಲೈಂಗಿಕ ಕಿರುಕುಳ ನೀಡುತ್ತಿರುವುದನ್ನು ತೋರಿಸುವ ಪೈಶಾಚಿಕ ವಿಡಿಯೋ ಕಳೆದ ವಾರ ವೈರಲ್ ಆಗಿದೆ. ಅದರ ನಂತರ, ಹಲವಾರು ಲೈಂಗಿಕ ದೌರ್ಜನ್ಯದ ಘಟನೆಗಳು ಬೆಳಕಿಗೆ ಬಂದಿವೆ.
ಮೇ 3 ರಂದು ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭವಾದಾಗಿನಿಂದ ಕನಿಷ್ಠ 7 ಕುಕಿ-ಜೋಮಿ ಮಹಿಳೆಯರು ಅತ್ಯಾಚಾರಕ್ಕೊಳಗಾಗಿದ್ದಾರೆ ಎಂದು ವಿವಿಧ ಸಂಘಗಳು ಹೇಳಿಕೊಂಡಿವೆ. ಆದರೆ, ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ಕೇವಲ ಒಂದು ಅತ್ಯಾಚಾರದ ಘಟನೆ ವರದಿಯಾಗಿದೆ ಎಂದು ತಿಳಿಸಿದ್ದಾರೆ. ವೈರಲ್ ವಿಡಿಯೋದಲ್ಲಿ ಲೈಂಗಿಕ ಕಿರುಕ್ಕುಳಗೊಳಗಾದ ಒಬ್ಬ ಮಹಿಳೆಯರ ಲೈಂಗಿಕ ದೌರ್ಜನ್ಯವನ್ನು ಸಿಎಂ ಉಲ್ಲೇಖಿಸಿದ್ದಾರೆ.
ಇದನ್ನು ಓದಿ: ಮಣಿಪುರ ವಿಡಿಯೋ ಕಿತ್ಹಾಕಿ ಎಂದು ಜಾಲತಾಣಕ್ಕೆ ಕೇಂದ್ರ ಸರ್ಕಾರ ಸೂಚನೆ: ಸಿಎಂ ವಜಾ, ರಾಷ್ಟ್ರಪತಿ ಆಳ್ವಿಕೆಗೆ ವಿಪಕ್ಷ ಆಗ್ರಹ
"ಕೊಲೆ, ಬೆಂಕಿ ಹಚ್ಚುವಿಕೆ ಮತ್ತು ಗಲಭೆಗಳ ದೂರುಗಳೊಂದಿಗೆ ರಾಜ್ಯಾದ್ಯಂತ ದಾಖಲಾದ 6,068 ಎಫ್‌ಐಆರ್‌ಗಳಲ್ಲಿ ಕೇವಲ ಒಂದು ಅತ್ಯಾಚಾರದ ಘಟನೆ ಕಂಡುಬಂದಿದೆ" ಎಂದು ಬಿರೇನ್ ಸಿಂಗ್ ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಪರಿಶಿಷ್ಟ ಪಂಗಡ (ST) ಸ್ಥಾನಮಾನಕ್ಕಾಗಿ ಮೇಥಿ ಸಮುದಾಯದ ಬೇಡಿಕೆ ಪ್ರತಿಭಟಿಸಲು ಬೆಟ್ಟದ ಜಿಲ್ಲೆಗಳಲ್ಲಿ 'ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ' ನಡೆದ ಬಳಿಕ ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿದೆ. ಇದರ ನಂತರ 160 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ.
ಮಣಿಪುರದ ಜನಸಂಖ್ಯೆಯ ಸುಮಾರು 53 ಪ್ರತಿಶತದಷ್ಟಿರುವ ಮೇಥಿಗಳು ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ, ಆದರೆ ನಾಗಾಗಳು ಮತ್ತು ಕುಕಿಗಳನ್ನು ಒಳಗೊಂಡಿರುವ ಬುಡಕಟ್ಟು ಜನಾಂಗದವರು ಶೇಕಡಾ 40 ರಷ್ಟಿದ್ದಾರೆ ಮತ್ತು ಹೆಚ್ಚಾಗಿ ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.
ಇದನ್ನೂ ಓದಿ: Manipur: ಪೊಲೀಸರಿಂದ ಬಿಡಿಸಿ ಎಳೆದೊಯ್ದು ನಗ್ನ ಪರೇಡ್ ಮಾಡಿ ರೇಪ್; ಈ ವಿಕೃತ ಘಟನೆಗೆ ಇಲ್ಲಿದೆ ಅಸಲಿ ಕಾರಣ..
ಹಿಂಸಾಚಾರ ಭುಗಿಲೆದ್ದ ನಂತರ ಏಳು ಕುಕಿ ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ವೈಪೈ ಪೀಪಲ್ಸ್ ಕೌನ್ಸಿಲ್, ಯಂಗ್ ವೈಪೈ ಅಸೋಸಿಯೇಷನ್, ಝೋಮಿ ಸ್ಟೂಡೆಂಟ್ಸ್ ಫೆಡರೇಶನ್ ಮತ್ತು ಕುಕಿ ಸ್ಟೂಡೆಂಟ್ಸ್ ಫೆಡರೇಶನ್ ಜುಲೈ 23 ರಂದು ಹೇಳಿಕೊಂಡಿದ್ದಾರೆ. ಅವರ ಹೇಳಿಕೆಗಳ ಪ್ರಕಾರ, 27 ಸಂತ್ರಸ್ತ ಮಹಿಳೆಯರಲ್ಲಿ ಏಳು ಮಂದಿ ಅತ್ಯಾಚಾರಕ್ಕೊಳಗಾದರು, ಎಂಟು ಮಂದಿಯನ್ನು ಹೊಡೆದು ಸಾಯಿಸಲಾಯಿತು, ಇಬ್ಬರನ್ನು ಸುಟ್ಟು ಕೊಲ್ಲಲಾಯಿತು, ಐವರನ್ನು ಗುಂಡಿಕ್ಕಿ ಕೊಂದರು ಮತ್ತು ಮೂವರನ್ನು ಕೊಚ್ಚಿ ಕೊಲ್ಲಲಾಯಿತು. ಉಳಿದವರ ಸಾವಿಗೆ ಕಾರಣ ತಿಳಿದಿಲ್ಲ ಎಂದು ಅವರು ಹೇಳಿದರು.
ಕಾರ್ ವಾಶ್‌ನಲ್ಲಿ ಇಬ್ಬರು ಹುಡುಗಿಯರು ಸಾಮೂಹಿಕ ಅತ್ಯಾಚಾರಕ್ಕೊಳಗಾದ ಮತ್ತೊಂದು ಪ್ರಕರಣದ ಬಗ್ಗೆ ಕೇಳಿದಾಗ, ಶವಪರೀಕ್ಷೆ ವರದಿಯು ಅತ್ಯಾಚಾರ ಅಥವಾ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯವನ್ನು ತಳ್ಳಿಹಾಕಿದೆ ಎಂದು ಬಿರೇನ್ ಸಿಂಗ್ ಹೇಳಿದ್ದಾರೆ.
ಇದನ್ನೂ ಓದಿ: ಮಣಿಪುರ ಸ್ತ್ರೀಯರ ನಗ್ನ ಪರೇಡ್: ದೇಶಾದ್ಯಂತ ದಿಗ್ಭ್ರಮೆ, ಆಕ್ರೋಶ;ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ
ಕಲಹ ಪೀಡಿತ ರಾಜ್ಯಕ್ಕೆ ಭೇಟಿ ನೀಡಲು ಮಣಿಪುರ ಸರ್ಕಾರ ಅನುಮತಿ ನಿರಾಕರಿಸಿದ್ದರೂ, ದೆಹಲಿ ಮಹಿಳಾ ಆಯೋಗದ (DCW) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಲೈಂಗಿಕ ದೌರ್ಜನ್ಯಕ್ಕೊಳಗಾದವರೊಂದಿಗೆ ಸಂವಾದ ನಡೆಸಲು ಇಂಫಾಲ್‌ಗೆ ಬಂದಿಳಿದ್ದಾರೆ. "ದಯವಿಟ್ಟು ನನಗೆ ಅವಕಾಶ ಮಾಡಿಕೊಡಿ. ನಾನು ರಾಜಕೀಯ ಮಾಡಲು ಇಲ್ಲಿಗೆ ಬಂದಿಲ್ಲ. ನಾನು ಪ್ರಧಾನಿ ಮೋದಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ (ಸ್ಮೃತಿ ಇರಾನಿ) ಮಣಿಪುರಕ್ಕೆ ಭೇಟಿ ನೀಡುವಂತೆ ವಿನಂತಿಸುತ್ತೇನೆ" ಎಂದೂ ಅವರು ANI ಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಮಣಿಪುರ ಘಟನೆ ಅಪರಾಧಿಗಳನ್ನು ಸುಮ್ಮನೆ ಬಿಡಲ್ಲ: ಮೋದಿ; ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವು ಕೈಗೊಳ್ತೇವೆ; ಸುಪ್ರೀಂಕೋರ್ಟ್