ಕೋಲಾರ: ವರದಕ್ಷಿಣೆಗಾಗಿ ಗರ್ಭಿಣಿ ಪತ್ನಿಗೆ ಕಿರುಕುಳ, ಪಾಪಿ ಗಂಡನಿಗೆ 7 ವರ್ಷ ಜೈಲು ಶಿಕ್ಷೆ
ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2013 ಡಿ.28ರಂದು ಮಾಲೂರು ತಾಲ್ಲೂಕಿನ ಲಕ್ಕೂರು ಹೋಬಳಿಯ ರಾಜಕೃಷ್ಣಾಪುರ ಚೌಡಪ್ಪ ರೆಡ್ಡಿ ವರದಕ್ಷಿಣೆ ತರುವಂತೆ ಒತ್ತಾಯಿಸಿ ತನ್ನ ಗರ್ಭಿಣಿ ಪತ್ನಿ ಯನ್ನು ಹೊಡೆದು ಕಿರುಕುಳ ನೀಡಿದ ಸಂದರ್ಭದಲ್ಲಿ ಆಕೆಯ ಹೊಟ್ಟೆಗೆ ಬಲವಾದ ಏಟುಗಳು ಬಿದ್ದ ಪರಿಣಾಮ ರಕ್ತಸ್ರಾವವಾಗಿ ಗರ್ಭಪಾತವಾದ ಹಿನ್ನಲೆಯಲ್ಲಿ ಮಗು ಮೃತಪಟ್ಟಿತ್ತು.
ಕೋಲಾರ(ಜ.04): ವರದಕ್ಷಿಣೆಗಾಗಿ ಗರ್ಭಿಣಿ ಪತ್ನಿಯನ್ನು ಹೊಡೆದ ಪರಿಣಾಮ ಮಗು ಮೃತಪಟ್ಟ ಹಿನ್ನೆಲೆಯಲ್ಲಿ ಆರೋಪಿ ಪತಿಗೆ ೭ ವರ್ಷ ಶಿಕ್ಷೆ ಹಾಗೂ ೪೦ ಸಾವಿರ ರೂ. ದಂಡವಿಧಿಸಿ ಇಲ್ಲಿನ ೧ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ.
ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ೨೦೧೩ ಡಿ.೨೮ರಂದು ಮಾಲೂರು ತಾಲ್ಲೂಕಿನ ಲಕ್ಕೂರು ಹೋಬಳಿಯ ರಾಜಕೃಷ್ಣಾಪುರ ಚೌಡಪ್ಪ ರೆಡ್ಡಿ ವರದಕ್ಷಿಣೆ ತರುವಂತೆ ಒತ್ತಾಯಿಸಿ ತನ್ನ ಗರ್ಭಿಣಿ ಪತ್ನಿ ಯನ್ನು ಹೊಡೆದು ಕಿರುಕುಳ ನೀಡಿದ ಸಂದರ್ಭದಲ್ಲಿ ಆಕೆಯ ಹೊಟ್ಟೆಗೆ ಬಲವಾದ ಏಟುಗಳು ಬಿದ್ದ ಪರಿಣಾಮ ರಕ್ತಸ್ರಾವವಾಗಿ ಗರ್ಭಪಾತವಾದ ಹಿನ್ನಲೆಯಲ್ಲಿ ಮಗು ಮೃತಪಟ್ಟಿತ್ತು. ಪತ್ನಿಯ ದೂರಿನ ಹಿನ್ನಲೆಯಲ್ಲಿ ಮಾಲೂರು ಪೊಲೀಸರು ಐ.ಪಿ.ಸಿ. ೪೯೮ಎ, ೩೦೭, ೩೨೩, ೩೧೬, ೫೦೪ ಸೆಕ್ಷನ್ ಅನ್ವಯ ದೂರು ದಾಖಲಿಸಿಕೊಂಡು ಆರೋಪಿ ಚೌಡಪ್ಪನನ್ನು ಜೈಲಿಗೆ ಕಳುಹಿಸಿದ್ದರು.
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; 4 ತಿಂಗಳ ಬಳಿಕ ಪ್ರಕರಣ ಬಯಲಿಗೆ!
ಈ ಬಗ್ಗೆ ನ್ಯಾಯಾಲಯದಲ್ಲಿ ಸುಧೀರ್ಘ ವಾದ ವಿವಾದ ಹಾಗೂ ೧೧ ಸಾಕ್ಷಿಗಳ ವಿಚಾರಣೆ ನಡೆದು ಆರೋಪಿ ಚೌಡಪ್ಪ ಮೇಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ೧ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲದ ನ್ಯಾಯಾಧೀಶರಾದ ಪಿ.ಕೆ.ದಿವ್ಯ ಅವರು ಆರೋಪಿಗೆ ೭ ವರ್ಷ ಶಿಕ್ಷೆ ಹಾಗೂ ೪೦ ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸಂತ್ರಸ್ತೆ ಗರ್ಭಿಣಿ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿಲಕ್ಷ್ಮಿ ಅವರು ವಾದ ಮಂಡಿಸಿದ್ದು, ಅಂದಿನ ವೃತ್ತ ನಿರೀಕ್ಷಕ ಮಾರ್ಕಂಡಯ್ಯ ಅವರು ತನಿಖಾ ಅಧಿಕಾರಿಯಾಗಿದ್ದರು.