ಬೆಂಗಳೂರು, (ಜೂನ್.03): ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ಬೆಂಗಳೂರಿನ ನೆಲಮಂಗಲ ತಾಲೂಕಿನ ಚಂದನಹೊಸಹಳ್ಳಿ ಲೇಔಟ್‌ನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ‌ ಬಾಲಕಿಯನ್ನು 13 ವರ್ಷದ ಐಶ್ವರ್ಯ ಎಂದು ಗುರುತಿಸಲಾಗಿದೆ. ಐಶ್ವರ್ಯ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಆನ್‌ಲೈನ್‌ ತರಗತಿಗೆ ಹಾಜರಾಗಲು ಸೌಲಭ್ಯ ಇಲ್ಲದ್ದಕ್ಕೆ ಬಾಲಕಿ ಆತ್ಮಹತ್ಯೆ!

 ಆದ್ರೆ, ಏನಾಗಿದೆಯೋ ಏನು ಏಕಾಏಕಿ ಇಂದು (ಬುಧವಾರ) ಐಶ್ವರ್ಯ ಮನೆಯಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

ಐಶ್ವರ್ಯ ಯಾವ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬ ಬಗ್ಗೆ ನಿಖರ ತಿಳಿದುಬಂದಿಲ್ಲ.  ಈ ಸಂಬಂಧ ಡಾಬಸ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.