ಬೀದರ್‌: ದ್ರಾಕ್ಷಿ ತೋಟದಲ್ಲಿ ಶ್ರೀಗಂಧದ ಮರಗಳ್ಳತನ, ಎಂಟು ಜನರ ಬಂಧನ

ಆರೋಪಿತರಿಂದ 1.25 ಲಕ್ಷ ರು. ಮೌಲ್ಯದ 39.28 ಕೆ.ಜಿ 9 ಶ್ರೀಗಂಧದ ಕಟ್ಟಿಗೆ ತುಂಡುಗಳು ಹಾಗೂ ಕೃತ್ಯಕ್ಕೆ ಬಳಸಿದ ಎರಡು ಬೈಕ್‌ ಹಾಗೂ 9 ಮೊಬೈಲ್‌ಗಳು ಸೇರಿದಂತೆ ಎರಡು ಕೊಡಲಿಗಳನ್ನು ವಶಕ್ಕೆ ಪಡೆದು ಆರೋಪಿಗಳ ಮೇಲೆ ಕರ್ನಾಟಕ ಅರಣ್ಯ ನಿಯಮದಡಿ ಪ್ರಕರಣ ದಾಖಲಿಸಲಾಗಿದೆ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌ಎಲ್‌ 

8 Arrested For Theft of Sandalwood Trees in the Vineyard in Bidar grg

ಬೀದರ್‌(ಜು.22):  ಹುಮನಾಬಾದ್‌ ಕನಕಟ್ಟಾ ರಸ್ತೆ ಎಡಭಾಗದ ದ್ರಾಕ್ಷಿ ತೋಟದಲ್ಲಿ ಗುರುವಾರ ಅಕ್ರಮವಾಗಿ ಶ್ರೀಗಂಧದ ಕಟ್ಟಿಗೆ ಕಡೆಯುತ್ತಿರುವ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಎಂಟು ಜನ ಆರೋಪಿಗಳನ್ನು ಬಂಧಿಸಿ ಶ್ರೀಗಂಧದ ಕಟ್ಟಿಗೆ ತುಂಡುಗಳು ಹಾಗೂ ಕೃತ್ಯಕ್ಕೆ ಬಳಸಿದ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌ಎಲ್‌ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಆರೋಪಿತರಿಂದ 1.25 ಲಕ್ಷ ರು. ಮೌಲ್ಯದ 39.28 ಕೆ.ಜಿ 9 ಶ್ರೀಗಂಧದ ಕಟ್ಟಿಗೆ ತುಂಡುಗಳು ಹಾಗೂ ಕೃತ್ಯಕ್ಕೆ ಬಳಸಿದ ಎರಡು ಬೈಕ್‌ ಹಾಗೂ 9 ಮೊಬೈಲ್‌ಗಳು ಸೇರಿದಂತೆ ಎರಡು ಕೊಡಲಿಗಳನ್ನು ವಶಕ್ಕೆ ಪಡೆದು ಆರೋಪಿಗಳ ಮೇಲೆ ಕರ್ನಾಟಕ ಅರಣ್ಯ ನಿಯಮದಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.

ದಾವಣಗೆರೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟಗಾರ ಫಯಾಜ್‌ವುಲ್ಲಾ ವಶಕ್ಕೆ; ಉಗ್ರರರೊಂದಿಗೆ ನಂಟು?

ಇತ್ತೀಚೆಗೆ ಜಿಲ್ಲೆಯಲ್ಲಿ ಶ್ರೀಗಂಧದ ಮರಗಳ ಸಾಗಾಣಿಕೆಯ ಬಗ್ಗೆ ದೂರುಗಳು ಬರುತ್ತಿದ್ದವು. ಈ ಹಿನ್ನೆಲೆ ಪೊಲೀಸ್‌ ಇಲಾಖೆ ಇಂತಹ ತಂಡಗಳ ಮೇಲೆ ನಿಗಾವಹಿಸಿತ್ತು. ಇದರಿಂದಲೇ ಈ ಪ್ರಕರಣವನ್ನು ಭೇದಿಸಲು ಸಾಧ್ಯವಾಗಿದೆ ಎಂದ ಅವರು, ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಶ್ರೀಗಂಧದ ಕಳ್ಳ ಸಾಗಾಣಿಕೆ ಮೂಲವನ್ನು ಭೇದಿಸಲು ಅರಣ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಲಿದೆ ಎಂದರು.

ಬೀದರ್‌ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂಎ ಅವರು ಮಾತನಾಡಿ, ಜಿಲ್ಲೆಯಲ್ಲಿ ಸಾಕಷ್ಟುಶ್ರೀಗಂಧದ ಅಕ್ರಮ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಪ್ರಕರಣಗಳು ವರದಿಯಾಗುತ್ತಿವೆ. ಆದರೆ ಇವುಗಳನ್ನು ಮಟ್ಟಹಾಕಲು ಜಿಲ್ಲೆಯ ಸಾರ್ವಜನಿಕರು ಹಾಗೂ ರೈತರ ಸಹಕಾರ ಮುಖ್ಯವಾಗಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಶ್ರೀಗಂಧ ಮರಗಳ ಕಳ್ಳತನ ಅಥವಾ ಇಂತಹ ಮರಗಳನ್ನು ಕಡಿಯುವುದು ಕಂಡು ಬಂದಲ್ಲಿ ತಕ್ಷಣ ಅರಣ್ಯ ಇಲಾಖೆ ಅಥವಾ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡಬೇಕು ಎಂದರು.

ಹೆಣ್ಣು, ಹಾವು, ಹೆಂಡ; ವಿಷ ಸರ್ಪ ಬಿಟ್ಟು ಉದ್ಯಮಿ ಕೊಲೈಗೆದ ಚಾಲಕಿ ತಂಡ!

ಅದೇ ರೀತಿ ನಗರದಲ್ಲಿ ಬೈಕ್‌ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಕೆಟ್‌ ಠಾಣೆಯ ಪೊಲೀಸರ ತಂಡ ಕಾರ್ಯಾಚಣೆ ನಡೆಸಿ ಒಬ್ಬ ಆರೋಪಿಯನ್ನು ಬಂಧಿಸಿ ಆತನಿಂದ 2.1ಲಕ್ಷ ರು, ಮೌಲ್ಯದ ಎರಡು ಬೈಕ್‌ಗಳನ್ನು ಜಪ್ತಿ ಮಾಡಿ ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಎಸ್‌ಪಿ ಚನ್ನಬಸವಣ್ಣ ಹೇಳಿದರು. ಈ ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾದ ಅಧಿಕಾರಿ ಹಾಗೂ ಸಿಬ್ಬಂದಿಗೆ ನಗದು ಬಹುಮಾನ ಹಾಗೂ ಪ್ರಶಂಸ ಪತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಹುಮನಾಬಾದ್‌ ವಲಯ ಅರಣ್ಯ ಅಧಿಕಾರಿ ಶಿವಕುಮಾರ, ಪಿಎಸ್‌ಐಗಳಾದ ಉಪೇಂದ್ರಕುಮಾರ, ಕಿರಣ, ಸಂತೋಷ ತಾವರಖೇಡ ಸೇರಿದಂತೆ ಪೊಲೀಸ್‌ ಇಲಾಖೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios