Asianet Suvarna News Asianet Suvarna News

ಪತ್ನಿಯೊಂದಿಗೆ ಜಗಳ: 9 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ

Crime News: ತನ್ನ 9 ವರ್ಷದ ಮಗಳ ಮೇಲೆ ಆಕೆಯೆ ತಂದೆಯೇ  ಅತ್ಯಾಚಾರವೆಸಗಿರುವ  ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ

9 year old girl raped by father in Gwalior as her mother leaves home after fight in  Madhya Pradesh mnj
Author
Bengaluru, First Published Aug 11, 2022, 6:23 PM IST

ಮಧ್ಯಪ್ರದೇಶ (ಆ. 11): ವ್ಯಕ್ತಿಯೊಬ್ಬ ತನ್ನ ಪತ್ನಿಯೊಂದಿಗೆ ಜಗಳವಾಡಿದ ನಂತರ ತನ್ನ 9 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿರುವ ಭೀಕರ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ. ಜಗಳದ ನಂತರ ಪತ್ನಿ ಅತ್ತೆ ಮನೆಗೆ ಹೋದ ನಂತರ ಆರೋಪಿ ಮಗಳನ್ನು ಟಾರ್ಗೆಟ್ ಮಾಡಿದ್ದಾನೆ. ಘಟನೆ ಬಳಿಕ ಆರೋಪಿ ಮನೆಯಿಂದ ಪರಾರಿಯಾಗಿದ್ದಾನೆ. ಆರೋಪಿ ವೃತ್ತಿಯಲ್ಲಿ ಬಡಗಿಯಾಗಿದ್ದ ಎಂದು ತಿಳಿದುಬಂದಿದೆ. ಬುಧವಾರ ಬೆಳಗ್ಗೆ ಬಾಲಕಿಯ ತಾಯಿ ಮನೆಗೆ ಮರಳಿದ ಬಳಿಕ ವಿಷಯ ಬೆಳಕಿಗೆ ಬಂದಿದೆ.

ತಾಯಿ ಮನೆಗೆ ಬಂದಾಗ ಬಾಲಕಿ ಅಳುತ್ತಿದ್ದಳು.  ತಾಯಿ ಈ ಬಗ್ಗೆ ಕೇಳಿದಾಗ ಬಾಲಕಿ ತನ್ನ ಕಷ್ಟವನ್ನು ವಿವರಿಸಿದ್ದಾಳೆ.  ನಂತರ ಮಹಿಳೆ ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ. ಮಂಗಳವಾರದಂದು ಕೆಲವು ಕೌಟುಂಬಿಕ ವಿಚಾರದಲ್ಲಿ ಜಗಳವಾಗಿ ಆತನ ಪತ್ನಿ ಮನೆಯಿಂದ ಹೊರಟು ಹೋಗಿದ್ದರಿಂದ ಬಾಲಕಿ ತನ್ನ ತಂದೆಯೊಂದಿಗೆ ಒಬ್ಬಂಟಿಯಾಗಿರುವಾಗ ಅಪರಾಧ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದುವೆ ಆಸೆ ತೋರಿಸಿ ರೇಪ್‌: ಕೋರ್ಟ್‌ಲ್ಲಿ ವಿಚಿತ್ರ ಕೇಸ್‌ ರದ್ದು

ಕುಡಿದ ಮತ್ತಿನಲ್ಲಿ ಮನೆಗೆ ಮರಳಿದ ಆರೋಪಿ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ವಿಷಯವನ್ನು ಬಹಿರಂಗಪಡಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರೋಪಿ ತನ್ನ ಮಗಳಿಗೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಪೊಲೀಸರು ಇದೀಗ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅನ್ವಯ ಪ್ರಕರಣ ದಾಖಲಿಸಿದ್ದಾರೆ.

ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ: ಇನ್ನು 2022 ರ ಜನವರಿಯಲ್ಲಿ ಆಂಧ್ರಪ್ರದೇಶದಿಂದ ವರದಿಯಾದ ಇದೇ ರೀತಿಯ ಘಟನೆಯಲ್ಲಿ, ವಿಶಾಖಪಟ್ಟಣಂ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಪ್ರಕರಣ ಸಂಬಂಧ ಪೊಲೀಸರು 42 ವರ್ಷದ ಆರೋಪಿಯನ್ನು ಬಂಧಿಸಿದ್ದಾರೆ.

ವ್ಯಕ್ತಿಯ ಪತ್ನಿ ತನ್ನ 15 ವರ್ಷದ ಮಗಳನ್ನು ಬಿಟ್ಟು ತನ್ನ ತಾಯಿಯ ಮನೆಗೆ ಭೇಟಿ ನೀಡಲು ಹೋದಾಗ ಈ ಅಪರಾಧ ನಡೆದಿದೆ. ವ್ಯಾಪಾರಿಯಾಗಿರುವ ಆರೋಪಿ, ನಂತರ ತನ್ನ ಮಗಳ ಮೇಲೆ ತಿಂಗಳುಗಟ್ಟಲೆ ಅತ್ಯಾಚಾರ ಎಸಗಿದ್ದಾನೆ.

ಅತ್ಯಾಚಾರ ಆರೋಪ: ಮಧ್ಯ ಪ್ರದೇಶದಲ್ಲಿ ಸ್ವಯಂಘೋಷಿತ ದೇವಮಾನವ ಬಂಧನ

ಶಾಲಾ ಸಮಯ ಕಳೆದರೂ ಬಾಲಕಿ ಶಾಲೆಯಿಂದ ಹೊರ ಹೋಗದೇ ಇದ್ದಾಗ ವಿಷಯ ಬೆಳಕಿಗೆ ಬಂದಿದೆ. ಆಗ ಆಕೆಯ ಶಿಕ್ಷಕಿಯೊಬ್ಬರು ಆಕೆಯನ್ನು ಏಕೆ ಮನೆಗೆ ಹೋಗುತ್ತಿಲ್ಲ ಎಂದು ಪ್ರಶ್ನಿಸಿದರು. ನಂತರ ಬಾಲಕಿ ತನ್ನ ತಂದೆ ತಿಂಗಳಿನಿಂದ ತನ್ನ ಮೇಲೆ ಹೇಗೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದನೆಂದು ಶಿಕ್ಷಕಿಗೆ ತಿಳಿಸಿದ್ದಾಳೆ.

ನಂತರ ಶಿಕ್ಷಕಿಯ ಸಹಾಯದಿಂದ ಪೊಲೀಸರಿಗೆ ದೂರು ನೀಡಲಾಗಿತ್ತು. ಮೊಬೈಲ್ ಫೋನ್‌ನಲ್ಲಿ ಹೆಚ್ಚು ಸಮಯ ಕಳೆದಿದ್ದಕ್ಕಾಗಿ ಕೋಪಗೊಂಡ ವ್ಯಕ್ತಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ನಂತರ ತಿಳಿಸಿದ್ದಾರೆ.

Follow Us:
Download App:
  • android
  • ios