* 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು* ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ* I HATE YOU PRINCIPALಎಂದು ಬರೆದಿಟ್ಟು ಆತ್ನಹತ್ಯೆ

ಬೆಂಗಳೂರು, (ಫೆ.19): ಡೆತ್​ನೋಟ್ ಬರೆದಿಟ್ಟು 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ಬೆಂಗಳೂರಿನ ಶೆಟ್ಟಿಹಳ್ಳಿ ಬಳಿ ನಡೆದಿದೆ.

 ಕೆ.ಎಸ್​. ರಮ್ಯಾ ಮೂರ್ತಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಟಿ.ದಾಸರಹಳ್ಳಿಯ ಸೌಂದರ್ಯ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.

Rape and Murder: ಕುರಿಗಾಯಿ ಮಹಿಳೆಯ ಮೇಲೆ ಕಾಮುಕರ ಅಟ್ಟಹಾಸ

ಸಾವಿಗೂ ಮುನ್ನ ಆಕೆ ಮನದ ನೋವನ್ನು ಡೆತ್‌ ನೋಟ್‌ನಲ್ಲಿ ಬರೆದಿದ್ದಾಳೆ. Dear school marks is not everything. I HATE YOU PRINCIPAL ಎಂದು ಇಂಗ್ಲಿಷ್​ನಲ್ಲೇ ಡೆತ್​ನೋಟ್​ ಬರೆದಿರುವ ರಮ್ಯಾ, ಅದರಲ್ಲಿ ಕೆಲ ವಿದ್ಯಾರ್ಥಿಗಳ ಹೆಸರನ್ನೂ ಬರೆದಿದ್ದಾಳೆ.

ಈ ಹಿಂದೆ ಶಾಲಾ ಆಡಳಿತ ಮಂಡಳಿ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ರಮ್ಯಾರ ತಾಯಿ ದೂರು ನೀಡಿದ್ದರಂತೆ. ಇದೇ ವಿಚಾರವಾಗಿ ವಿದ್ಯಾರ್ಥಿನಿಗೆ ಶಾಲೆಯಲ್ಲಿ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಯಶವಂತಪುರ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಕುರಿಗಾಯಿ ಮಹಿಳೆಯ ಮೇಲೆ ಕಾಮುಕರ ಅಟ್ಟಹಾಸ
ಧಾರವಾಡ(ಫೆ.19): ಕುರಿಗಾಯಿ ಮಹಿಳೆಯ(Woman) ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಕುಂದಗೋಳ(Kundgol) ತಾಲೂಕಿನ ಯರಗುಪ್ಪಿ ಗ್ರಾಮದ ಹೊರವಲಯದಲ್ಲಿ ಇಂದು(ಶನಿವಾರ) ನಡೆದಿದೆ. 

ಕಟ್ಟಿಗೆ ತರಲು ಬಂದ ಮಹಿಳೆಯ ಮೇಲೆ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. 35 ವಯಸ್ಸಿನ ಮಹಿಳೆ ಮೇಲೆ ಅತ್ಯಾಚಾರ(Rape) ಎಸಗಿ ಕೊಲೆ(Murder) ಮಾಡಲಾಗಿದೆ. ಬೆಳಗಾವಿ(Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮೂಲದ ಕುರಿಗಾಯಿ ಮಹಿಳೆ ಅಂತ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ಪರಿಶೀಲನೆ ನೀಡಿದ್ದಾರೆ. 

9ನೇ ತರಗತಿ ವಿದ್ಯಾರ್ಥಿನಿ‌ ಮೇಲೆ ಸಾಮೂಹಿಕ ಅತ್ಯಾಚಾರ
ಕೋಲಾರ: 9ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯನ್ನ ಪುಸಲಾಯಿಸಿ ಸಾಮೂಹಿಕ ಅತ್ಯಾಚಾರ(Gang rape) ವೆಸಗಿರುವ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು(Accused) ಪೊಲೀಸರು(Karnataka police) ವಶಕ್ಕೆ ಪಡೆದಿದ್ದಾರೆ. ಸದ್ಯ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಾಗಲೇ ಪೊಲೀಸರು ವಿದ್ಯಾರ್ಥಿನಿ ಹೇಳಿಕೆ ಪಡೆದಿದ್ದಾರೆ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಭೂ ಪರಿಹಾರ ಗೊಂದಲ: ರೈತ ಆತ್ಮಹತ್ಯೆ
ಶಿವಮೊಗ್ಗ: ರೈಲ್ವೆ ಯೋಜನೆಗೆ ಸ್ವಾಧೀನವಾಗಿದ್ದ ಭೂಮಿಗೆ ಕಡಿಮೆ ಪರಿಹಾರ ನೀಡಲು ಮುಂದಾದ ಹಿನ್ನೆಲೆಯಲ್ಲಿ ರೈತ ಮನನೊಂದು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾರೋಗೊಪ್ಪದಲ್ಲಿ ನಡೆದಿದೆ. ಮೃತನನ್ನು ಅರುಣ್ ನಾಯ್ಕ್ (28) ಎಂದು ಗುರುತಿಸಲಾಗಿದೆ. 

ಮೂರು ಎಕರೆ ಅಡಿಕೆ ತೋಟವನ್ನು ರೈಲ್ವೆ ಇಲಾಖೆ ಸ್ವಾಧೀನಪಡಿಸಿಕೊಂಡಿತ್ತು. ಶಿವಮೊಗ್ಗ-ರಾಣೆಬೆನ್ನೂರು ರೈಲ್ವೆ ಮಾರ್ಗಕ್ಕಾಗಿ ಸ್ವಾಧೀನಪಡಿಸಿಕೊಂಡಿದ್ದ ತೋಟಕ್ಕೆ ಇಲಾಖೆಯು ಪ್ರತಿ ಎಕರೆಗೆ ಕೇವಲ 5 ಲಕ್ಷ ಪರಿಹಾರ ಘೋಷಿಸಿತ್ತು. ಈ ಸಂಬಂಧ ದಾವಣಗೆರೆಯ ರೈಲ್ವೆ ಭೂಸ್ವಾಧೀನ ಪ್ರಾಧಿಕಾರ ಅಧಿಕಾರಿಗಳು ನೊಟೀಸ್ ನೀಡಿತ್ತು. ಆದರೆ ಈ ಪ್ರದೇಶದಲ್ಲಿ ಒಂದು ಎಕರೆ ಅಡಿಕೆ ತೋಟವು 30ರಿಂದ 40 ಲಕ್ಷ ರೂಪಾಯಿ ಬೆಲೆ ಬಾಳುತ್ತದೆ ಎಂದು ಮೃತ ರೈತ ಹೇಳಿದ್ದ. ಶಿಕಾರಿಪುರ ಗ್ರಾಮಾಂತರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪುತ್ರಿ ಕೆಳ ಜಾತಿಯ ಯುವಕನನ್ನು ಮದುವೆಯಾಗಿದ್ದಕ್ಕೆ ತಂದೆ ಆತ್ಮಹತ್ಯೆ
ಚೆನ್ನೈ: ತನ್ನ ಮಗಳು ಪರಿಶಿಷ್ಟ ಜಾತಿಯ (SC) ವ್ಯಕ್ತಿಯನ್ನು ಮದುವೆಯಾಗಿದ್ದಕ್ಕೆ ಮನನೊಂದ ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ತನ್ನ ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಕೊಂದು ತಾನೂ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಈ ಭೀಕರ ಘಟನೆಯ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾತಿ ತಾರತಮ್ಯ ಮತ್ತು ಅಂತರ್ಜಾತಿ ವಿವಾಹಗಳ (Inter caste Marriage) ಕಾರಣದಿಂದ ತಮಿಳುನಾಡಿನ ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಆಗಾಗ ಸಂಬಂಧಿಕರಿಂದ ಹಲ್ಲೆಗಳು ನಡೆದ ಘಟನೆಗಳು ನಡೆಯುತ್ತಲೇ ಇರುತ್ತದೆ.

ಈ ಘಟನೆಯ ಕುರಿತು ಮಾಹಿತಿ ನೀಡಿರುವ ನಾಗಪಟ್ಟಣಂ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಜಿ ಜವಾಹರ್, ಟೀ ಅಂಗಡಿ ನಡೆಸುತ್ತಿದ್ದ ಲಕ್ಷ್ಮಣನ್ ತನ್ನ ಹಿರಿಯ ಮಗಳು ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ಮದುವೆಯಾಗಿದ್ದಕ್ಕಾಗಿ ಕೋಪಗೊಂಡಿದ್ದರು. ಇದರಿಂದ ಮನನೊಂದು ಅವರು ತಮ್ಮ ಹೆಂಡತಿ ಮಕ್ಕಳನ್ನು ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ. ಮನೆಯವರ ವಿರೋಧದ ನಡುವೆ ಮದುವೆಯಾಗಿದ್ದ ಅವರ ಮಗಳು ಈಗ ಪತಿಯೊಂದಿಗೆ ವಾಸಿಸುತ್ತಿದ್ದು, ಸುರಕ್ಷಿತವಾಗಿದ್ದಾರೆ ಎಂದಿದ್ದಾರೆ.