ಸೊಂಟಕ್ಕೆ ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ
ಉದ್ಯಮಿಯೊಬ್ಬರು ಸೊಂಟಕ್ಕೆ ಬಲೂನು ಕಟ್ಟಿಕೊಂಡು ಸೇತುವೆ ಮೇಲಿಂದ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆಯೊಂದು ಇಂದು ನಸುಕಿನ ಹೊತ್ತು ಕಡಬ ತಾಲೂಕಿನ ಶರವೂರು ಸಮೀಪ ಶಾಂತಿಮೊಗರು ಎಂಬಲ್ಲಿ ಸಂಭವಿಸಿದೆ.
ಕಡಬ (ಮೇ.26): ಉದ್ಯಮಿಯೊಬ್ಬರು ಸೊಂಟಕ್ಕೆ ಬಲೂನು ಕಟ್ಟಿಕೊಂಡು ಸೇತುವೆ ಮೇಲಿಂದ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆಯೊಂದು ಇಂದು ನಸುಕಿನ ಹೊತ್ತು ಕಡಬ ತಾಲೂಕಿನ ಶರವೂರು ಸಮೀಪ ಶಾಂತಿಮೊಗರು ಎಂಬಲ್ಲಿ ಸಂಭವಿಸಿದೆ. ಶಾಂತಿಮೊಗರು ಅಲಂಗಾರಿನಲ್ಲಿ ದುರ್ಗಾಂಬ ಹಾರ್ಡ್‌ವೇರ್ ಎಂಬ ಅಂಗಡಿ ಹೊಂದಿರುವ ಸಾಮಾಜಿಕ, ಧಾರ್ಮಿಕ ಮುಂದಾಳು ಚಂದ್ರಶೇಖರ ಪೂಜಾರಿ (70) ಆತ್ಮಹತ್ಯೆ ಮಾಡಿಕೊಂಡವರು. ಬೆಳಗ್ಗೆ 4 ಗಂಟೆ ವೇಳೆಗೆ ಕಾರನ್ನು ಸೇತುವೆ ಮೇಲೆ ನಿಲ್ಲಿಸಿ ಸೊಂಟಕ್ಕೆ ಹಗ್ಗದಿಂದ ಬಲೂನು ಕಟ್ಟಿಕೊಂಡು ನದಿಗೆ ಜಿಗಿದಿದ್ದಾರೆ. ಶವ ಹುಡುಕಲು ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ಸೊಂಟಕ್ಕೆ ಬಲೂನು ಕಟ್ಟಿಕೊಂಡಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಸದ್ಯ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನೇತ್ರಾವತಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ: ಬಂಟ್ವಾಳ ತಾಲೂಕಿನ ನೆಟ್ಲ ಸಮೀಪದ ನಿವಾಸಿ ಪ್ರವೀಣ್ (58) ಎಂಬವರು ಗುರುವಾರ ಬಿ.ಸಿ.ರೋಡಿನ ನೇತ್ರಾವತಿ ನದಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳೀಯ ಮುಳುಗು ತಜ್ಞರು, ಪೊಲೀಸ್ ಒಟ್ಟಿಗೆ ಸ್ಥಳೀಯ ಯುವಕರು ಮತ್ತು ಅಗ್ನಿಶಾಮಕದಳದವರು ಶವ ಹುಡುಕಾಟ ನಡೆಸಿದ್ದು, ಸಂಜೆಯ ವೇಳೆ ಪತ್ತೆಯಾಗಿದೆ. ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಈತ ಮಾನಸಿಕವಾಗಿ ಸಮಸ್ಯೆ ಅನುಭವಿಸುತ್ತಿದ್ದ ಎನ್ನಲಾಗಿದ್ದು, ಈ ಹಿಂದೆಯೂ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಕಿನಲ್ಲಿ ಬಂದ ಇವರು ನೇತ್ರಾವತಿ ಸೇತುವೆ ಮೇಲೆ ಬೈಕ್ ನಿಲ್ಲಿಸಿ ಚಪ್ಪಲಿ ಅಲ್ಲೆ ಇಟ್ಟು ಹಾರಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಯೀಗ ಎಚ್.ಡಿ.ಕುಮಾರಸ್ವಾಮಿಗೆ ಅಸ್ತ್ರ
ಮಹಿಳಾ ಟೆಕಿ ಆತ್ಮಹತ್ಯೆ: ವರದಕ್ಷಿಣೆ ಕಿರಕುಳ ತಾಳಲಾರದೆ ಮಹಿಳಾ ಟೆಕ್ಕಿಯೊಬ್ಬರು ಮರಣಪತ್ರ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆಂಪಾಪುರದ ನಿವಾಸಿ ಪಲ್ಲವಿ (24) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಬುಧವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದೆ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಸುದರ್ಶನ್ ರೆಡ್ಡಿ ಹಾಗೂ ಆತನ ತಾಯಿ ವರದಕ್ಷಿಣೆ ಕಿರಕುಳ ನೀಡುತ್ತಿದ್ದಾರೆ. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಮರಣಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಂಗ್ರೆಸ್‌ನ ಗ್ಯಾರಂಟಿಯೀಗ ಗಳಗಂಟಿ: ಮಾಜಿ ಸಿಎಂ ಬೊಮ್ಮಾಯಿ ಕಿಡಿ
ಆಂಧ್ರಪ್ರದೇಶ ಮೂಲದ ಪಲ್ಲವಿ ಹಾಗೂ ಸುದರ್ಶನ್ ರೆಡ್ಡಿ ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್. ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಹೆಬ್ಬಾಳ ಕೆಂಪಾಪುರದ ಆಪಾರ್ಚ್‌ಮೆಂಟ್‌ವೊಂದರಲ್ಲಿ ದಂಪತಿ ನೆಲೆಸಿದ್ದರು. ಇಬ್ಬರೂ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಸುದರ್ಶನ್ ರೆಡ್ಡಿ ಮತ್ತು ಆತನ ತಾಯಿ ತವರು ಮನೆಯಿಂದ ವರದಕ್ಷಿಣೆ ತರುವಂತೆ ಪಲ್ಲವಿಗೆ ಕಾಟ ನೀಡುತ್ತಿದ್ದರು. ಪ್ರತಿ ತಿಂಗಳ ಸಂಬಳವನ್ನು ನಮಗೆ ಕೊಡಬೇಕು ಎಂದು ಕಿರಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಪಲ್ಲವಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.