ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ಫೋಟೋ ಮತ್ತು ಹೆಸರು ಬಳಸಿಕೊಂಡು ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ಅವರ ಸ್ನೇಹಿತರಿಗೆ ಸಂದೇಶ ಕಳುಹಿಸಿ ಹಣ ಪಡೆಯಲು ಯತ್ನಿಸಿದ ಆರೋಪದಡಿ ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು (ನ.13) : ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ಫೋಟೋ ಮತ್ತು ಹೆಸರು ಬಳಸಿಕೊಂಡು ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ಅವರ ಸ್ನೇಹಿತರಿಗೆ ಸಂದೇಶ ಕಳುಹಿಸಿ ಹಣ ಪಡೆಯಲು ಯತ್ನಿಸಿದ ಆರೋಪದಡಿ ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಎಡಿಜಿಪಿ ಪಿ.ಹರಿಶೇಖರನ್ ಹೆಸರು, ಫೋಟೋ ದುರ್ಬಳಕೆ ಮಾಡಿದ್ದಾರೆ. ಈ ಸಂಬಂಧ ಎಡಿಜಿಪಿ ಕಚೇರಿ ಅಧಿಕಾರಿ ಬಿ.ಕೆ.ಉಷಾ ರಾಣಿ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಸೈಬರ್ ವಂಚಕರ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು ಕಮಿಷನರ್ ಫೋಟೋ ಬಳಸಿ ಹಣಕ್ಕೆ ಡಿಮ್ಯಾಂಡ್: ನಕಲಿ ಖಾತೆ ವಿರುದ್ದ ಎಚ್ಚರ!
ದುಷ್ಕರ್ಮಿಗಳು ಎಡಿಜಿಪಿ ಪಿ.ಹರಿಶೇಖರನ್ ಫೋಟೋ, ಹೆಸರು ಬಳಸಿಕೊಂಡು ಫೇಸ್‌ಬುಕ್‌ನಲ್ಲಿ ಆರು ನಕಲಿ ಖಾತೆ ತೆರೆದಿದ್ದಾರೆ. ಆನಂತರ ಎಡಿಜಿಪಿ ಸ್ನೇಹಿತರಿಗೆ ಸಂದೇಶ ಕಳುಹಿಸಿ ತುರ್ತು ಹಣ ನೀಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಅನುಮಾನಗೊಂಡ ಕೆಲ ಸ್ನೇಹಿತರು ಹರಿಶೇಖರನ್ ಅವರ ಗಮನಕ್ಕೆ ತಂದಿದ್ದಾರೆ. ಈ ಸಂಬಂಧ ಎಡಿಜಿಪಿ ಕಚೇರಿ ಅಧಿಕಾರಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೀಲ್ಸ್ ಸ್ಟಾರ್ ಡಿಜೆ ದೀಪು ಹೆಸರಲ್ಲಿ ವಂಚನೆ ಪ್ರಕರಣ; ಆರೋಪಿ ಪ್ರದೀಪ್‌ನ ಮತ್ತೊಂದು ಮುಖವಾಡ ಬಯಲು!
