ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಿ ಯುವಕನೊಬ್ಬನನ್ನು ಥಳಿಸಿ ಬಳಿಕ ಎಚ್‌ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರಿಗೆ ಕನ್ನಡಪರ ಸಂಘಟನೆ ಕಾರ್ಯಕರ್ತರು ಒಪ್ಪಿಸಿದ್ದಾರೆ. ಅಮೃತೇಶ್‌ ಬಂಧಿಸಲಾಗಿದೆ. ಇದಕ್ಕೂ ಮುನ್ನ ಜನರಿಗೆ ಗೂಸಾ ಬಿದ್ದಿದೆ.

ಬೆಂಗಳೂರು (ಡಿ.6) : ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಿ ಯುವಕನೊಬ್ಬನನ್ನು ಥಳಿಸಿ ಬಳಿಕ ಎಚ್‌ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರಿಗೆ ಕನ್ನಡಪರ ಸಂಘಟನೆ ಕಾರ್ಯಕರ್ತರು ಒಪ್ಪಿಸಿದ್ದಾರೆ. ಅಮೃತೇಶ್‌ ಬಂಧಿತನಾಗಿದ್ದು, ಎಚ್‌ಎಸ್‌ಆರ್‌ ಲೇಔಟ್‌ 2ನೇ ಹಂತದ ಪರಂಗಿಪಾಳ್ಯದ 22ನೇ ಅಡ್ಡರಸ್ತೆಯಲ್ಲಿ ಭಾನುವಾರ ರಾತ್ರಿ ಕನ್ನಡ ಧ್ವಜಕ್ಕೆ ಅಮೃತೇಶ್‌ ಬೆಂಕಿ ಹಚ್ಚಿ ಅನುಚಿತ ವರ್ತನೆ ತೋರಿದ್ದಾನೆ. ಈ ಸಂಬಂಧ ಕರುನಾಡ ಸೇವಕರು ಸಂಘಟನೆ ರಾಜ್ಯಾಧ್ಯಕ್ಷ ನವೀನ್‌ ನರಸಿಂಹ ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪರಂಗಿಪಾಳ್ಯದ 22ನೇ ಅಡ್ಡರಸ್ತೆಯಲ್ಲಿ ಭಾನುವಾರ ರಾತ್ರಿ 10ರ ಸುಮಾರಿಗೆ ಕೈಯಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ಅಮೃತೇಶ್‌ ಕುಚೋದ್ಯತನ ತೋರುತ್ತಿದ್ದ. ಈ ವರ್ತನೆಯಿಂದ ಕೆರಳಿದ ಕರುನಾಡ ಸೇವಕರು ಸಂಘಟನೆ ಕಾರ್ಯಕರ್ತರು ಹಾಗೂ ಸಾರ್ವಜನಿಕರು, ಅಮೃತೇಶ್‌ನನ್ನು ಹಿಡಿದು ಥಳಿಸಿದ್ದಾರೆ. ಈ ಗಲಾಟೆಗೆ ಬಗ್ಗೆ ಮಾಹಿತಿ ಪಡೆದ ಹೊಯ್ಸಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.

ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡ್ತಿದ್ದ ವಿದ್ಯಾರ್ಥಿ ಮೇಲೆ ಸಹಪಾಠಿಗಳಿಂದ ಹಲ್ಲೆ!

ಬೈಕ್‌ ಕಳವು ಮಾಡುತ್ತಿದ್ದ ಮೂವರ ಸೆರೆ ಬಂಧನ

ಬೆಂಗಳೂರು: ಮನೆ, ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಮೂವರು ಕಳ್ಳರನ್ನು ಕೆಂಪೇಗೌಡ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಮೋಹಳ್ಳಿಯ ನಾಗರಾಜು ಅಲಿಯಾಸ್‌ ಚೇತು(19), ಮೆಜೆಸ್ಟಿಕ್‌ನ ರವಿ ಅಲಿಯಾಸ್‌ ಮಾಡು(29) ಹಾಗೂ ಕೆ.ಆರ್‌.ಮಾರ್ಕೆಟ್‌ನ ಮಹಮ್ಮದ್‌ ಸಾದಿಕ್‌(26) ಬಂಧಿತರು. ಆರೋಪಿಗಳಿಂದ .5 ಲಕ್ಷ ಮೌಲ್ಯದ 8 ದ್ವಿಚಕ್ರ ವಾಹನಗಳು, 2 ಲ್ಯಾಪ್‌ಟಾಪ್‌, ವಿವಿಧ ಕಂಪನಿಯ 30 ಮೊಬೈಲ್‌ ಫೋನ್‌ ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಕೆಂಪೇಗೌಡ ನಗರ ಸರ್ವಿಸ್‌ ರಸ್ತೆಯ ಬಿಲ್ಡ್‌ಟೆಕ್‌ ಪಾಲಿಮರ್ಸ್‌ ಕಚೇರಿ ಬಳಿ ವ್ಯಕ್ತಿಯೊಬ್ಬರು ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನ ಕಳುವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ರಸ್ತೆಗಳಲ್ಲಿ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಹಿಂಬಾಲಿಸಿ ಮೊಬೈಲ್‌ ಕಸಿದು ಪರಾರಿಯಾಗುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಕನ್ನಡ ಬಾವುಟ ಸಂಘರ್ಷ: ಒಬ್ಬ ಸೆರೆ, ಮೂವರು ವಶ