ಕೆಲವು ತಿಂಗಳ ಹಿಂದೆ ತಾಯಿ ಮರಣ ಹೊಂದಿದ್ದರಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದ 25 ವರ್ಷದ ಯುವಕನೊಬ್ಬ, ಹಲಗೂರು ಸಮೀಪದ ದೇವಿರಹಳ್ಳಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹನೂರು ತಾಲೂಕಿನ ಸಾಗ್ಯ ಗ್ರಾಮದ ನಿವಾಸಿಯಾದ ಈತ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದನು.

ಹಲಗೂರು (ನ.18): ಕೆಲವು ತಿಂಗಳ ಹಿಂದೆ ತಾಯಿ ಮರಣ ಹೊಂದಿದ್ದ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆ ಗೊಂಡ ವ್ಯಕ್ತಿ ಕೆರೆಗೆ ಹಾರಿ ಆತ್ಮ*ತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ದೇವಿರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹನೂರು ತಾಲೂಕು ಬಂಡಳ್ಳಿ ಬಳಿ ಇರುವ ಸಾಗ್ಯ ಗ್ರಾಮದ ನವೀನ್ ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ಬಂಡಳ್ಳಿ ಬಳಿ ಇರುವ ಸಾಗ್ಯ ಗ್ರಾಮದ ಪರಶಿವಮೂರ್ತಿ ಅವರ ಪುತ್ರ ನವೀನ್ ಕುಮಾರ್ (25) ಕೆರೆಗೆ ಹಾರಿ ಆತ್ಮ*ತ್ಯೆ ಮಾಡಿಕೊಂಡ ದುರ್ದೈವಿ.

ತಾಯಿ ಸತ್ತ ಬಳಿಕ ಜೀವನದಲ್ಲಿ ಜುಗುಪ್ಸೆ:

ನವೀನ್ ಕುಮಾರ್ ಬೆಂಗಳೂರಿನಲ್ಲಿ ಜೀವನೋಪಯೋಗಕ್ಕಾಗಿ ಕೆಲಸ ಮಾಡಿಕೊಂಡಿದ್ದನು. ಕೆಲವು ತಿಂಗಳ ಹಿಂದೆ ಅವರ ತಾಯಿ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡಿದ್ದನು. ಈತ ತಮ್ಮ ಸ್ವಗ್ರಾಮಕ್ಕೆ ಹೋಗುವ ಮಾರ್ಗ ಮಧ್ಯ ಸಿಗುವ ಹಲಗೂರು ಸಮೀಪದ ದೇವಿರಹಳ್ಳಿ ಕೆರೆ ಬಳಿ ತಮ್ಮ ವಾಹನವನ್ನು ನಿಲ್ಲಿಸಿ ಕೆರೆಗೆ ಹಾರಿ ಆತ್ಮ*ತ್ಯೆ ಮಾಡಿಕೊಂಡಿನೆ.

ಹಲಗೂರು ಪೊಲೀಸರು ಸ್ಥಳಕ್ಕೆ ಭೇಟಿ

ವಿಷಯ ತಿಳಿದ ಹಲಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವವನ್ನು ಹೊರ ತೆಗೆದು ಶವ ಪರೀಕ್ಷೆ ನಡೆಸಿದ ನಂತರ ಶವವನ್ನು ವಾರಸುದಾರಿಗೆ ನೀಡಲಾಯಿತು. ಸಬ್ ಇನ್ಸ್ ಪೆಕ್ಟರ್ ಲೋಕೇಶ್ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.