ಹೊಸಕೋಟೆ: ಹನುಮ ಜಯಂತಿ ವೇಳೆ ವಿತರಿಸಿದ ಪ್ರಸಾದ ಸೇವಿಸಿ ಓರ್ವ ಸಾವು; 150ಕ್ಕೂ ಹೆಚ್ಚು ಜನ ಅಸ್ವಸ್ಥ!

ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಹೊಸಕೋಟೆಯಲ್ಲಿ ಆಹಾರ ವಿಷ ಸೇವಿಸಿದ ಪ್ರಕರಣದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 70 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

A man death and more than 150 people sick after consuming poisoned food in Hanuma jayanti at Hoskote bengaluru rav

ಬೆಂಗಳೂರು (ಡಿ.26): ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಹೊಸಕೋಟೆಯಲ್ಲಿ ಆಹಾರ ವಿಷ ಸೇವಿಸಿದ ಪ್ರಕರಣದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 70 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ದೇವಸ್ಥಾನದ ಪ್ರಸಾದ ಸೇವಿಸಿ ಅಸ್ವಸ್ಥರಾಗಿ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇನ್ನೂ 15 ಮಂದಿ ಆರೋಗ್ಯ ಗಂಭೀರವಾಗಿದೆ ಎಂದು ಹೇಳಲಾಗಿದೆ. ಹೊಸಕೋಟೆಯ ಕಾವೇರಿನಗರದ ನಿವಾಸಿ 60 ವರ್ಷದ ಸಿದ್ದಗಂಗಮ್ಮ ಮೃತದುರ್ದೈವಿ.

ವಿಷಾಹಾರ ಸೇವಸಿ 16ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ; ಘಟನೆ ನಡೆದ್ರೂ ಸ್ಥಳಕ್ಕೆ ಬಾರದ ಹಾಸ್ಟೆಲ್ ವಾರ್ಡನ್!

ಆಸ್ಪತ್ರೆಗೆ ದಾಖಲಾದವರಲ್ಲಿ ಕೆಲವರು ಡಿಸ್ಚಾರ್ಜ್ ಆಗಿದ್ದು, ಇನ್ನು ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.

ಪ್ರಕರಣದ ತನಿಖೆ ಆರಂಭಿಕ ಹಂತದಲ್ಲಿರುವುದರಿಂದ, ಸದ್ಯಕ್ಕೆ ನಿಖರವಾದ ಕಾರಣವನ್ನು ಕಂಡುಹಿಡಿಯಲಾಗುವುದಿಲ್ಲ,  ಶನಿವಾರ ಬಹುತೇಕರು ಹೊಸಕೋಟೆ ಪಟ್ಟಣದ ದೇವಸ್ಥಾನಕ್ಕೆ ತೆರಳಿ ಪ್ರಸಾದ ಸೇವಿಸಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಒಂದು ದಿನದ ನಂತರ, ಕೆಲವರು ಭೇದಿ ಮತ್ತು ವಾಂತಿ ಎಂದು ದೂರಿದರು ಮತ್ತು ನಂತರ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಧಾವಿಸಿದರು. ಅದೇ ರೋಗಲಕ್ಷಣಗಳಿದ್ದ ಮಹಿಳೆಯನ್ನು ಭಾನುವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಕೇರಳದಲ್ಲಿ ಚಿಕನ್ ಶವರ್ಮ ತಿಂದು 22 ವರ್ಷದ ಯುವಕ ಸಾವು: ಹೊಟೇಲ್‌ ಬಂದ್ ಮಾಡಿಸಿದ ಅಧಿಕಾರಿಗಳು

ಸುಮಾರು 70 ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂಬ ಮಾಹಿತಿ ನಮಗಿದೆ. ಗರಿಷ್ಠ ರೋಗಿಗಳು ದಾಖಲಾಗಿರುವ ಐದು ಆಸ್ಪತ್ರೆಗಳನ್ನು ಆರೋಗ್ಯ ಇಲಾಖೆ ಗುರುತಿಸಿದೆ. ಪರಿಸ್ಥಿತಿ ನೋಡಿದರೆ ಆಸ್ಪತ್ರೆಯೊಂದರಲ್ಲಿ ಐಸಿಯು ಚಿಕಿತ್ಸೆಗೆ ಸಂಪೂರ್ಣ ಮಹಡಿಯನ್ನು ಮೀಸಲಿಟ್ಟಿದ್ದಾರೆ.

ನಾವು ಈ ರೋಗಿಗಳ ಹೇಳಿಕೆಗಳನ್ನು ದಾಖಲಿಸಲು ಪ್ರಾರಂಭಿಸಿದ್ದೇವೆ. ಇಲ್ಲಿಯವರೆಗೆ ನಾವು ಯಾವುದೇ ದೂರು ದಾಖಲಿಸಿಕೊಂಡಿಲ್ಲ. ನಮ್ಮ ತನಿಖೆ ಆರಂಭಿಕ ಹಂತದಲ್ಲಿದೆ. ನಾವು ಆರೋಗ್ಯ ಇಲಾಖೆ ಮತ್ತು ಆಹಾರ ಸುರಕ್ಷತಾ ಅಧಿಕಾರಿಯಿಂದ ದೂರಿಗಾಗಿ ಕಾಯುತ್ತಿದ್ದೇವೆ. ಹೇಳಿಕೆಗಳು ಮತ್ತು ಅವರ ದೂರುಗಳ ಆಧಾರದ ಮೇಲೆ, ಶೀಘ್ರದಲ್ಲೇ ಪ್ರಕರಣ ದಾಖಲಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

Latest Videos
Follow Us:
Download App:
  • android
  • ios